ಭಾರತೀಯನ ಸಿಡಿಲಬ್ಬರಕ್ಕೆ ದಾಖಲೆಗಳು ತತ್ತರ: ಟಿ20 ಕ್ರಿಕೆಟ್​​ನಲ್ಲಿ ವಿಶ್ವ ದಾಖಲೆಯ ಶತಕ ಸಿಡಿಸಿದ ಉರ್ವಿಲ್

Urvil Patel: ಉರ್ವಿಲ್ ಪಟೇಲ್ ಗುಜರಾತ್ ಮೂಲದ ಕ್ರಿಕೆಟಿಗ. 2023 ರಲ್ಲಿ ಗುಜರಾತ್ ಟೈಟಾನ್ಸ್ ತಂಡಕ್ಕೆ ಆಯ್ಕೆಯಾಗಿದ್ದ ಯುವ ದಾಂಡಿಗನಿಗೆ ಆಡುವ ಅವಕಾಶ ದೊರೆತಿರಲಿಲ್ಲ. ಅಲ್ಲದೆ ಈ ಬಾರಿಯ ಐಪಿಎಲ್​​ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದ 26 ವರ್ಷದ ಉರ್ವಿನ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದರ ಬೆನ್ನಲ್ಲೇ ಶತಕ ಸಿಡಿಸಿ ಇದೀಗ ಎಲ್ಲಾ ಫ್ರಾಂಚೈಸಿಗಳು ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ.

ಝಾಹಿರ್ ಯೂಸುಫ್
|

Updated on:Nov 27, 2024 | 4:49 PM

ದೇಶೀಯ ಅಂಗಳದ ಟಿ20 ಟೂರ್ನಿಯಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಅದು ಕೂಡ ಸ್ಪೋಟಕ ಸೆಂಚುರಿಯೊಂದಿಗೆ ಎಂಬುದು ವಿಶೇಷ. ಹೀಗೆ ಅತೀ ಕಡಿಮೆ ಎಸೆತಗಳಲ್ಲಿ ಶತಕ ಬಾರಿಸಿ ಹೊಸ ದಾಖಲೆ ಬರೆದ ಬ್ಯಾಟರ್​​ನ ಹೆಸರು ಉರ್ವಿಲ್ ಪಟೇಲ್.

1 / 6
ಇಂದೋರ್​​ನಲ್ಲಿ ನಡೆದ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ತ್ರಿಪುರಾ ಮತ್ತು ಗುಜರಾತ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ತ್ರಿಪುರಾ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 155 ರನ್ ಕಲೆಹಾಕಿತು.

2 / 6
ಈ ಗುರಿಯನ್ನು ಬೆನ್ನತ್ತಿದ ಗುಜರಾತ್ ಪರ ಉರ್ವಿಲ್ ಪಟೇಲ್ ಅಕ್ಷರಶಃ ಅಬ್ಬರಿಸಿದರು. ಮೊದಲ ಓವರ್​​ನಿಂದ ಶುರುವಾದ ಉರ್ವಿಲ್ ಅಬ್ಬರ ಬಂದು ನಿಂತಿದ್ದು 10.2 ನೇ ಓವರ್​​ನಲ್ಲಿ. ಇದರ ನಡುವೆ ಕೇವಲ 28 ಎಸೆತಗಳಲ್ಲಿ ಭರ್ಜರಿ ಸೆಂಚುರಿ ಸಿಡಿಸಿದರು. ಅಂತಿಮವಾಗಿ 35 ಎಸೆತಗಳನ್ನು ಎದುರಿಸಿದ ಉರ್ವಿಲ್ ಪಟೇಲ್ 12 ಸಿಕ್ಸ್ ಹಾಗೂ 7 ಫೋರ್​​ಗಳೊಂದಿಗೆ ಅಜೇಯ 113 ರನ್ ಬಾರಿಸಿ 10.2 ಓವರ್​​ಗಳಲ್ಲಿ ಗುಜರಾತ್ ತಂಡವನ್ನು ಗುರಿ ಮುಟ್ಟಿಸಿದರು.

3 / 6
ವಿಶೇಷ ಎಂದರೆ ಈ ಸ್ಪೋಟಕ ಸೆಂಚುರಿಯೊಂದಿಗೆ ಟಿ20 ಕ್ರಿಕೆಟ್​​ನಲ್ಲಿ ಅತೀ ವೇಗದ ಶತಕ ಬಾರಿಸಿದ ಭಾರತೀಯನ ದಾಖಲೆ ಉರ್ವಿಲ್ ಪಟೇಲ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ರಿಷಭ್ ಪಂತ್ ಹೆಸರಿನಲ್ಲಿತ್ತು.

4 / 6
2018 ರಲ್ಲಿ ಹಿಮಾಚಲ ಪ್ರದೇಶ್ ವಿರುದ್ಧದ ಟಿ20 ಪಂದ್ಯದಲ್ಲಿ ರಿಷಭ್ ಪಂತ್ ಕೇವಲ 32 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಈ ಮೂಲಕ ಚುಟುಕು ಕ್ರಿಕೆಟ್​​ನಲ್ಲಿ ಅತೀ ವೇಗದ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್​ ಎನಿಸಿಕೊಂಡಿದ್ದರು. ಇದೀಗ ಕೇವಲ 28 ಎಸೆತಗಳಲ್ಲಿ ಶತಕ ಬಾರಿಸಿ ಉರ್ವಿನ್ ಪಟೇಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

5 / 6
ಇದಾಗ್ಯೂ ಟಿ20 ಕ್ರಿಕೆಟ್​​ನಲ್ಲಿ ಅತೀ ವೇಗದ ಶತಕ ಸಿಡಿಸಿದ ವಿಶ್ವ ದಾಖಲೆಯನ್ನು ಮುರಿಯಲು ಸಾಧ್ಯವಾಗಿಲ್ಲ. ಈ ದಾಖಲೆ ಪಟ್ಟಿಯಲ್ಲಿ ಸಾಹಿಲ್ ಚೌಹಾನ್ ಅಗ್ರಸ್ಥಾನದಲ್ಲಿದ್ದಾರೆ. 2024 ರಲ್ಲಿ ಎಸ್ಟೋನಿಯಾ ಪರ ಕಣಕ್ಕಿಳಿದ ಸಾಹಿಲ್, ಸೈಪ್ರಸ್ ವಿರುದ್ಧ ಕೇವಲ 27 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇದೀಗ 28 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಉರ್ವಿಲ್ ಪಟೇಲ್ ಈ ವಿಶ್ವ ದಾಖಲೆ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

6 / 6

Published On - 12:31 pm, Wed, 27 November 24

Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ