AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

28, 36… ಉರ್ವಿಲ್ ಪಟೇಲ್ ಸ್ಪೋಟಕ ಸೆಂಚುರಿ: ಹೊಸ ವಿಶ್ವ ದಾಖಲೆ ನಿರ್ಮಾಣ

Urvil Patel: ಗುಜರಾತ್ ಮೂಲದ ಉರ್ವಿಲ್ ಪಟೇಲ್ 2023 ರಲ್ಲಿ ಗುಜರಾತ್ ಟೈಟಾನ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದರು. ಆದರೆ ಯುವ ದಾಂಡಿಗನಿಗೆ ಆಡುವ ಅವಕಾಶ ದೊರೆತಿರಲಿಲ್ಲ. ಇನ್ನು ಈ ಬಾರಿಯ ಐಪಿಎಲ್​​ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದ 26 ವರ್ಷದ ಉರ್ವಿನ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದೀಗ ಬ್ಯಾಕ್ ಟು ಬ್ಯಾಕ್ ಸ್ಪೋಟಕ ಶತಕ ಸಿಡಿಸಿ ಇದೀಗ ಎಲ್ಲಾ ಫ್ರಾಂಚೈಸಿಗಳು ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 03, 2024 | 1:53 PM

Share
ಸೈಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ತ್ರಿಪುರ ವಿರುದ್ಧ ಕೇವಲ 28 ಎಸೆತಗಳಲ್ಲಿ ಶತಕ ಸಿಡಿಸಿ ದಾಖಲೆ ಬರೆದಿದ್ದ ಉರ್ವಿಲ್ ಪಟೇಲ್ ಇದೀಗ ಮತ್ತೊಮ್ಮೆ ಸ್ಪೋಟಕ ಸೆಂಚುರಿ ಸಿಡಿಸಿದ್ದಾರೆ. ಈ ಬಾರಿ ಕೇವಲ 36 ಎಸೆತಗಳಲ್ಲಿ ಶತಕ ಪೂರೈಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

1 / 7
ಇಂದೋರ್​​ನಲ್ಲಿ ನಡೆದ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯ ಗ್ರೂಪ್ ಬಿ ಪಂದ್ಯದಲ್ಲಿ ಉತ್ತರಾಖಂಡ್ ಮತ್ತು ಗುಜರಾತ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಉತ್ತರಾಖಂಡ್ ತಂಡವು 20 ಓವರ್​​ಗಳಲ್ಲಿ 7 ವಿಕೆಟ್ ಕಳೆದುಕೊಂಡು 182 ರನ್ ಕಲೆಹಾಕಿತು.

2 / 7
183 ರನ್​ಗಳ ಕಠಿಣ ಗುರಿ ಪಡೆದ ಗುಜರಾತ್ ತಂಡಕ್ಕೆ ಉರ್ವಿಲ್ ಪಟೇಲ್ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್​​ನಿಂದ ಸಿಡಿಲಬ್ಬರ ಶುರು ಮಾಡಿದ ಯಂಗ್ ಬ್ಯಾಟರ್ ಕೇವಲ 36 ಎಸೆತಗಳಲ್ಲಿ ಶತಕ ಪೂರೈಸಿದರು.

3 / 7
ಈ ಶತಕದೊಂದಿಗೆ ಟಿ20 ಕ್ರಿಕೆಟ್​​ನಲ್ಲಿ ಭಾರತದ ಪರ 40 ಕ್ಕಿಂತ ಕಡಿಮೆ ಎಸೆತಗಳಲ್ಲಿ 2 ಶತಕ ಬಾರಿಸಿದ ಏಕೈಕ ಬ್ಯಾಟರ್ ಎಂಬ ದಾಖಲೆ ಉರ್ವಿಲ್ ಪಾಲಾಯಿತು. ಹಾಗೆಯೇ ಈ ಸಾಧನೆ ಮಾಡಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಇದಕ್ಕೂ ಮುನ್ನ ಇಂತಹದೊಂದು ವಿಶ್ವ ದಾಖಲೆ ನಿರ್ಮಿಸಿದ್ದು ಡೇವಿಡ್ ಮಿಲ್ಲರ್.

4 / 7
2013 ರ ಐಪಿಎಲ್​​ನಲ್ಲಿ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಡೇವಿಡ್ ಮಿಲ್ಲರ್ ಆರ್​​ಸಿಬಿ ವಿರುದ್ಧ ಕೇವಲ 38 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದರು. ಇದಾದ ಬಳಿಕ 2017 ರಲ್ಲಿ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಸೌತ್ ಆಫ್ರಿಕಾ ಪರ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಮಿಲ್ಲರ್ 35 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಈ ಮೂಲಕ ಟಿ20 ಕ್ರಿಕೆಟ್​​ನಲ್ಲಿ 40 ಕ್ಕಿಂತ ಕಡಿಮೆ ಎಸೆತಗಳಲ್ಲಿ 2  ಸೆಂಚುರಿ ಸಿಡಿಸಿದ ವಿಶ್ವದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದರು.

5 / 7
ಇದೀಗ ಈ ವಿಶ್ವ ದಾಖಲೆಯನ್ನು ಉರ್ವಿಲ್ ಪಟೇಲ್ ಸರಿಗಟ್ಟಿದ್ದಾರೆ. ತ್ರಿಪುರ ವಿರುದ್ಧ ಕೇವಲ 28 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದ ಉರ್ವಿಲ್, ಇದೀಗ ಉತ್ತರಾಖಂಡ್ ವಿರುದ್ಧ 36 ಎಸೆತಗಳಲ್ಲಿ ಶತಕ ಬಾರಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲಿ 40 ಕ್ಕಿಂತ ಕಡಿಮೆ ಎಸೆತಗಳಲ್ಲಿ 2 ಶತಕ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

6 / 7
ಇನ್ನು ಈ ಪಂದ್ಯದಲ್ಲಿ 41 ಎಸೆತಗಳನ್ನು ಎದುರಿಸಿದ ಉರ್ವಿಲ್ ಪಟೇಲ್ 11 ಸಿಕ್ಸ್ ಹಾಗೂ 8 ಫೋರ್​​ಗಳೊಂದಿಗೆ ಅಜೇಯ 111 ರನ್ ಬಾರಿಸಿದರು. ಈ ಭರ್ಜರಿ ಸೆಂಚುರಿ ನೆರವಿನಿಂದ ಗುಜರಾತ್ ತಂಡವು 13.1 ಓವರ್​​ಗಳಲ್ಲಿ 185 ರನ್ ಬಾರಿಸಿ 8 ವಿಕೆಟ್​​ಗಳ ಅಮೋಘ ಗೆಲುವು ದಾಖಲಿಸಿದೆ.

7 / 7
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!

ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ

ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್

ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ

ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ

ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್