AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ಏಕಾಂಗಿ ಹೋರಾಟ ನೀಡಿ ತಂಡದ ಮಾನ ಉಳಿಸಿದ ಸೂರ್ಯಕುಮಾರ್

Suryakumar Yadav Heroics: 2026ರ ಟಿ20 ವಿಶ್ವಕಪ್‌ನಲ್ಲಿ ಅಮೆರಿಕ ವಿರುದ್ಧ ಭಾರತದ ಆರಂಭ ಉತ್ತಮವಾಗಿರಲಿಲ್ಲ, ಪ್ರಮುಖ ವಿಕೆಟ್‌ಗಳು ಪವರ್‌ಪ್ಲೇನಲ್ಲೇ ಪತನಗೊಂಡವು. ನಾಯಕ ಸೂರ್ಯಕುಮಾರ್ ಯಾದವ್ ಏಕಾಂಗಿ ಹೋರಾಟ ನಡೆಸಿ 84* ರನ್ ಗಳಿಸಿ ತಂಡವನ್ನು 161/9 ಕ್ಕೆ ತಲುಪಿಸಿದರು. ಅವರು ಟಿ20 ವಿಶ್ವಕಪ್‌ನಲ್ಲಿ ಅರ್ಧಶತಕ ಗಳಿಸಿದ ಮೂರನೇ ಭಾರತೀಯ ನಾಯಕರಾದರು.

ಪೃಥ್ವಿಶಂಕರ
|

Updated on: Feb 07, 2026 | 9:43 PM

Share
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅಮೆರಿಕ ವಿರುದ್ಧದ ಮೊದಲ ಪಂದ್ಯದೊಂದಿಗೆ 2026 ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ತನ್ನ ಅಭಿಯಾನವನ್ನು ಆರಂಭಿಸಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡವು ನಿರಾಶಾದಾಯಕ ಆರಂಭ ಪಡೆದುಕೊಂಡಿತು. ಪವರ್‌ಪ್ಲೇನಲ್ಲಿಯೇ ತಂಡವು ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು.

1 / 5
ಆರಂಭಿಕ ಜೋಡಿ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಬೇಗನೆ ವಿಕೆಟ್ ಒಪ್ಪಿಸಿದರು. ಪರಿಣಾಮವಾಗಿ ಆರನೇ ವಿಕೆಟ್ ಪತನಕ್ಕೆ ತಂಡದ ಸ್ಕೋರ್​ಬೋರ್ಡ್​ನಲ್ಲಿ ಇದಿದ್ದು ಕೇವಲ 77 ರನ್‌. ಈ ಹಂತದಲ್ಲಿ, ಅಮೆರಿಕದ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿ ಒತ್ತಡವನ್ನು ಕಾಯ್ದುಕೊಂಡಿದ್ದರಿಂದ ಭಾರತ ತಂಡವು ತೀವ್ರ ಸಂಕಷ್ಟಕ್ಕೆ ಸಿಲುಕಿತು. ಆದಾಗ್ಯೂ, ನಾಯಕ ಸೂರ್ಯಕುಮಾರ್ ಯಾದವ್ ಏಕಾಂಗಿ ಹೋರಾಟ ನೀಡಿ ಅರ್ಧಶತಕದ ಇನ್ನಿಂಗ್ಸ್ ಆಡಿದರು.

2 / 5
ಒಂದೆಡೆ ಒಂದರ ಹಿಂದೆ ಒಂದರಂತೆ ವಿಕೆಟ್ ಉರುಳುತ್ತಿರುವಾಗ ಎಚ್ಚರಿಕೆಯಿಂದ ಬ್ಯಾಟಿಂಗ್ ಮಾಡಿದ ನಾಯಕ ಸೂರ್ಯಕುಮಾರ್ ತಂಡದ ಇನ್ನಿಂಗ್ಸ್ ಸ್ಥಿರಗೊಳಿಸಿದರು. ಇದರ ಜೊತೆಗೆ ಸೂರ್ಯಕುಮಾರ್ ಕೇವಲ 37 ಎಸೆತಗಳಲ್ಲಿ ಏಳು ಬೌಂಡರಿ ಮತ್ತು ಒಂದು ಸಿಕ್ಸರ್ ಸಹಾಯದಿಂದ ಅರ್ಧಶತಕ ಪೂರೈಸಿದರು. ಹಾಗೆಯೇ ತಂಡವನ್ನು ಕೂಡ 100 ರನ್​ಗಳ ಗಡಿ ದಾಟಿಸಿದರು.

3 / 5
ಪವರ್‌ಪ್ಲೇನಲ್ಲಿಯೇ ಬ್ಯಾಟಿಂಗ್​ಗೆ ಬಂದ ಸೂರ್ಯಕುಮಾರ್ ಯಾದವ್ 49 ಎಸೆತಗಳಲ್ಲಿ 10 ಬೌಂಡರಿ ಮತ್ತು 4 ಸಿಕ್ಸರ್‌ಗಳ ಸಹಾಯದಿಂದ 84 ರನ್ ಬಾರಿಸಿ ಅಜೇಯರಾಗಿ ಉಳಿದರು. ಸೂರ್ಯಕುಮಾರ್ ಅವರ ಈ 84 ರನ್​ಗಳ ಕಾಣಿಕೆಯಿಂದ ಭಾರತ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 161 ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ಸೂರ್ಯಕುಮಾರ್ ಹೊರತುಪಡಿಸಿ ತಂಡದ ಬೇರೆ ಯಾವುದೇ ಬ್ಯಾಟ್ಸ್‌ಮನ್ 30 ರನ್ ಗಳಿಸಲು ಸಾಧ್ಯವಾಗಲಿಲ್ಲ.

4 / 5
ಈ ಇನ್ನಿಂಗ್ಸ್‌ನೊಂದಿಗೆ, ಸೂರ್ಯಕುಮಾರ್ ಯಾದವ್ ಕೂಡ ವಿಶೇಷ ಪಟ್ಟಿಗೆ ಸೇರಿದರು. ಟಿ20 ವಿಶ್ವಕಪ್‌ನಲ್ಲಿ ಅರ್ಧಶತಕ ಬಾರಿಸಿದ ಮೂರನೇ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾದರು. ಇದಕ್ಕೂ ಮೊದಲು, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮಾತ್ರ ಈ ಸಾಧನೆ ಮಾಡಿದ್ದರು. ವಿರಾಟ್ ಒಮ್ಮೆ 50 ರನ್‌ಗಳ ಗಡಿ ತಲುಪಿದರೆ, ರೋಹಿತ್ ನಾಯಕನಾಗಿ ನಾಲ್ಕು ಬಾರಿ 50 ರನ್‌ಗಳ ಗಡಿ ದಾಟಿದ್ದಾರೆ.

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ

ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ

ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ

‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?

11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು

ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ

ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ

ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ

ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು