ಒಂದಲ್ಲ, ಎರಡಲ್ಲ… ವೈಭವ್ ಸೂರ್ಯವಂಶಿಗೆ ಸಿಕ್ಕ ಪ್ರಶಸ್ತಿಗಳ ಪಟ್ಟಿ ಇಲ್ಲಿದೆ
Vaibhav Sooryavanshi All Awards: ಇಂಡಿಯನ್ ಪ್ರೀಮಿಯರ್ ಲೀಗ್ನ ಹೊಸ ಸೆನ್ಸೇಷನ್ ವೈಭವ್ ಸೂರ್ಯವಂಶಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿ ಹಾಗೂ ಜೋಸ್ ಬಟ್ಲರ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ. ಅಂದರೆ ಈ ಇಬ್ಬರು ಐಪಿಎಲ್ ಸೀಸನ್ವೊಂದರಲ್ಲಿ ತಲಾ 4 ಪ್ರಶಸ್ತಿಗಳನ್ನು ಪಡೆದು ದಾಖಲೆ ನಿರ್ಮಿಸಿದ್ದರು. ಇದೀಗ ವೈಭವ್ ಸೂರ್ಯವಂಶಿ ಈ ದಾಖಲೆ ಮುರಿದಿದ್ದಾರೆ.
Updated on: Jun 01, 2026 | 9:11 AM

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (IPL 2026) ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿ ಹಲವು ದಾಖಲೆ ಬರೆದ ವೈಭವ್ ಸೂರ್ಯವಂಶಿ (Vaibhav Sooryavanshi) ಇದೀಗ ಪ್ರಶಸ್ತಿ ಪಡೆಯುವುದರಲ್ಲೂ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಒಂದೇ ಸೀಸನ್ನಲ್ಲಿ 5 ಅವಾರ್ಡ್ಗಳನ್ನು ಬಾಚಿಕೊಳ್ಳುವ ಮೂಲಕ ಎಂಬುದು ವಿಶೇಷ. ಹಾಗಿದ್ರೆ ಯುವ ದಾಂಡಿಗ ಪಡೆದಿರುವ ಪ್ರಶಸ್ತಿಗಳಾವುವು ಎಂದು ನೋಡುವುದಾದರೆ... (PC: IPL)

ಮೋಸ್ಟ್ ವ್ಯಾಲ್ಯೂಬಲ್ ಪ್ಲೇಯರ್ (MVP): ಈ ಬಾರಿಯ ಟೂರ್ನಿಯಲ್ಲಿ ಕಣಕ್ಕಿಳಿದ ಪ್ಲೇಯರ್ಗಳಲ್ಲಿ ಅತ್ಯಂತ ಮೌಲ್ಯಯುತ ಆಟಗಾರ ವೈಭವ್ ಸೂರ್ಯವಂಶಿ. ಒಟ್ಟು 436.5 ಎಂವಿಪಿ ಅಂಕಗಳನ್ನು ಪಡೆದಿರುವ ವೈಭವ್ 10 ಲಕ್ಷ ರೂ. ನಗದು ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL)

ಆರೆಂಜ್ ಕ್ಯಾಪ್: 16 ಪಂದ್ಯಗಳಲ್ಲಿ ಒಟ್ಟು 776 ರನ್ ಬಾರಿಸುವ ಮೂಲಕ ವೈಭವ್ ಸೂರ್ಯವಂಶಿ ಈ ಬಾರಿಯ ಟೂರ್ನಿಯ 'ರನ್ ಸರದಾರ' ಎನಿಸಿಕೊಂಡಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್ ಪ್ರಶಸ್ತಿಯನ್ನು 10 ಲಕ್ಷ ರೂ. ನಗದು ಬಹುಮಾನ ಪಡೆದಿದ್ದಾರೆ. (PC: IPL)

ಎಮರ್ಜಿಂಗ್ ಪ್ಲೇಯರ್ ಆಫ್ ದಿ ಸೀಸನ್: ಈ ವರ್ಷದ ಉದಯೋನ್ಮುಖ ಆಟಗಾರ ಪ್ರಶಸ್ತಿ ಕೂಡ ವೈಭವ್ ಸೂರ್ಯವಂಶಿ ಪಾಲಾಗಿದೆ. ಇದಕ್ಕಾಗಿ 10 ಲಕ್ಷ ರೂ. ನಗದು ಬಹುಮಾನ ಪಡೆದುಕೊಂಡಿದ್ದಾರೆ. (PC: IPL)

ಸೂಪರ್ ಸ್ಟ್ರೈಕರ್ ಆಫ್ ದಿ ಸೀಸನ್: ಈ ಬಾರಿಯ ಟೂರ್ನಿಯಲ್ಲಿ 237.30ರ ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸಿರುವ ವೈಭವ್ ಸೂಪರ್ ಸ್ಟ್ರೈಕರ್ ಆಫ್ ದಿ ಸೀಸನ್ ಎನಿಸಿಕೊಂಡಿದ್ದಾರೆ. ಈ ಮೂಲಕ ಟಾಟಾ ಸಿಯೆರಾ ಕಾರನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL)

ಸೂಪರ್ ಸಿಕ್ಸರ್ಸ್ ಆಫ್ ದಿ ಸೀಸನ್: 16 ಇನಿಂಗ್ಸ್ಗಳಲ್ಲಿ 72 ಸಿಕ್ಸ್ ಸಿಡಿಸಿರುವ ವೈಭವ್ ಸೂರ್ಯವಂಶಿ ಈ ಬಾರಿಯ ಟೂರ್ನಿಯ ಸೂಪರ್ ಸಿಕ್ಸರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕಾಗಿ 10 ಲಕ್ಷ ರೂ. ನಗದು ಬಹುಮಾನ ಪಡೆದುಕೊಂಡಿದ್ದಾರೆ. (PC: IPL)

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




