AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: ಮತ್ತೊಂದು ವಿಶ್ವ ದಾಖಲೆ ನಿರ್ಮಿಸಿದ ವೈಭವ್ ಸೂರ್ಯವಂಶಿ

Vaibhav Sooryavanshi Breaks Another World Record: ವೈಭವ್ ಸೂರ್ಯವಂಶಿ ಜಿಂಬಾಬ್ವೆ ವಿರುದ್ಧದ T20 ಸರಣಿಯಲ್ಲಿ ಎರಡು ವಿಶ್ವ ದಾಖಲೆಗಳನ್ನು ನಿರ್ಮಿಸಿದ್ದಾರೆ. 16 ವರ್ಷ ವಯಸ್ಸಿಗೂ ಮುನ್ನ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಎರಡು 50+ ಸ್ಕೋರ್‌ಗಳನ್ನು ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. 15 ವರ್ಷ 121 ದಿನಗಳಲ್ಲಿ ಈ ಸಾಧನೆ ಮಾಡಿದ್ದು, ಕಿರಿಯ ಅರ್ಧಶತಕದ ದಾಖಲೆಯನ್ನೂ ಹೊಂದಿದ್ದಾರೆ. ಇವರ ಸ್ಫೋಟಕ ಆಟ ಭವಿಷ್ಯದ ಭರವಸೆಯಾಗಿದೆ.

ಪೃಥ್ವಿಶಂಕರ
|

Updated on: Jul 26, 2026 | 6:49 PM

Share
ಜಿಂಬಾಬ್ವೆ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 192 ರನ್ ಕಲೆಹಾಕಿತು. ತಂಡದ ಪರ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ 81 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಕೇವಲ 19 ರನ್​​ಗಳಿಂದ ಚೊಚ್ಚಲ ಅಂತರರಾಷ್ಟ್ರೀಯ ಶತಕದಿಂದ ವೈಭವ್ ವಂಚಿತರಾದರೂ ಮತ್ತೊಂದು ವಿಶ್ವದಾಖಲೆಯನ್ನು ಸೃಷ್ಟಿಸಿದರು(PC-BCCI).

1 / 5
ಜಿಂಬಾಬ್ವೆ ವಿರುದ್ಧದ ಈ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ವೈಭವ್ ಬಾರಿಸಿದ ಎರಡನೇ ಶತಕ ಇದಾಗಿದೆ. ಮೊದಲ ಅರ್ಧಶತಕ ಬಾರಿಸುವ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅರ್ಧಶತಕ ಬಾರಿಸಿದ ಅತಿ ಕಿರಿಯ ಆಟಗಾರನೆಂಬ ವಿಶ್ವ ದಾಖಲೆ ನಿರ್ಮಿಸಿದ್ದ ವೈಭವ್ ಇದೀಗ ಎರಡನೇ ಅರ್ಧಶತಕದೊಂದಿಗೆ, ನೇಪಾಳದ ಬ್ಯಾಟ್ಸ್‌ಮನ್ ಕುಶಾಲ್ ಮಾಲಾ ಅವರ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಸಹ ಮುರಿದರು(PC-BCCI).

2 / 5
ಜಿಂಬಾಬ್ವೆ ವಿರುದ್ಧದ ಎರಡನೇ ಪಂದ್ಯದಲ್ಲಿ ವೈಭವ್ 31 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ 16 ವರ್ಷ ವಯಸ್ಸಿಗೂ ಮುನ್ನ ಪುರುಷರ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಎರಡು ಬಾರಿ 50+ ಸ್ಕೋರ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ವಿಶ್ವ ದಾಖಲೆ ವೈಭವ್ ಪಾಲಾಗುದೆ. 16 ವರ್ಷ ವಯಸ್ಸಿಗೂ ಮುನ್ನ ಒಮ್ಮೆ 50+ ಸ್ಕೋರ್ ಗಳಿಸಿದ್ದ ನೇಪಾಳದ ಬ್ಯಾಟ್ಸ್‌ಮನ್ ಕುಶಾಲ್ ಮಾಲಾ ಅವರ ದಾಖಲೆಯನ್ನು ವೈಭವ್ ಮುರಿದರು(PC-BCCI).

3 / 5
ವೈಭವ್ 15 ವರ್ಷ 118 ದಿನಗಳಲ್ಲಿ ಜಿಂಬಾಬ್ವೆ ತಂಡದ ವಿರುದ್ಧ ತಮ್ಮ ಮೊದಲ ಅಂತರರಾಷ್ಟ್ರೀಯ ಅರ್ಧಶತಕವನ್ನು ಬಾರಿಸಿದರೆ, ಇದೀಗ 15 ವರ್ಷ 121 ದಿನಗಳಲ್ಲಿ ಎರಡನೇ ಅರ್ಧಶತಕ ಕಲೆಹಾಕಿದ್ದಾರೆ. ಜಿಂಬಾಬ್ವೆ ವಿರುದ್ಧದ ಮೂರನೇ ಪಂದ್ಯದಲ್ಲಿ ವೈಭವ್ 49 ಎಸೆತಗಳಲ್ಲಿ 81 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ವೈಭವ್ ತಮ್ಮ ಇನ್ನಿಂಗ್ಸ್‌ನಲ್ಲಿ 4 ಸಿಕ್ಸರ್‌ಗಳು ಮತ್ತು 8 ಬೌಂಡರಿಗಳನ್ನು ಬಾರಿಸಿದರು. ಇದು ಜಿಂಬಾಬ್ವೆ ವಿರುದ್ಧದ ಟಿ20ಕ್ರಿಕೆಟ್​ನಲ್ಲಿ ವೈಭವ್ ಅವರ ಅತ್ಯುತ್ತಮ ಸ್ಕೋರ್ ಆಗಿದೆ(PC-BCCI).

4 / 5
ಹಾಗೆಯೇ ಮೊದಲ ಐದು ಅಥವಾ ಆರು ಅಂತರರಾಷ್ಟ್ರೀಯ ಪಂದ್ಯಗಳ ನಂತರ ವೈಭವ್ ಸೂರ್ಯವಂಶಿ ಅವರ ಸ್ಟ್ರೈಕ್ ರೇಟ್ 211 ಕ್ಕಿಂತ ಹೆಚ್ಚಾಗಿದೆ. ಈ ಮೂಲಕ ವೈಭವ್ ತಮ್ಮ ಮೊದಲ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಕೆಲವೇ ಎಸೆತಗಳಲ್ಲಿ ಇಷ್ಟು ವೇಗವಾಗಿ ರನ್ ಗಳಿಸಿದ ಏಕೈಕ ಯುವ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ(PC-BCCI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಕಳೆದ ಒಂದು ದಶಕದಿಂದ ಕನ್ನಡದ ನಂ.1 ಸುದ್ದಿ ವಾಹಿನಿ ಟಿವಿ9 ಕನ್ನಡದೊಂದಿಗೆ ಪತ್ರಿಕೋದ್ಯಮದ ಪಯಣ ಮುಂದುವರಿಸಿದ್ದೇನೆ. ಕ್ರೀಡಾ ಜಗತ್ತಿನ ಆಗುಹೋಗುಗಳು, ಆಟಗಾರರ ಸಾಧನೆಗಳು, ಮೈದಾನದ ರೋಚಕ ಕ್ಷಣಗಳು ಹಾಗೂ ಕ್ರೀಡೆಯ ಹಿಂದಿನ ಆಸಕ್ತಿದಾಯಕ ಕಥನಗಳನ್ನು ಅಕ್ಷರಗಳ ಮೂಲಕ ಓದುಗರಿಗೆ ತಲುಪಿಸುವುದು ನನ್ನ ವೃತ್ತಿ ಮತ್ತು ಪ್ರವೃತ್ತಿ. ಕ್ರೀಡೆಯನ್ನು ಕೇವಲ ಆಟವಾಗಿ ನೋಡದೆ, ಅದರೊಳಗಿನ ಪರಿಶ್ರಮ, ಹೋರಾಟ, ಸಾಧನೆ ಮತ್ತು ಭಾವನೆಗಳನ್ನು ಗುರುತಿಸಿ ಬರವಣಿಗೆಯಲ್ಲಿ ಕಟ್ಟಿಕೊಡುವುದು ನನ್ನ ಪ್ರಯತ್ನ. ಮೂಲತಃ ಹಾಸನ ಜಿಲ್ಲೆಯವನು. ಹಾಸನದ ನೆಲದ ಸೊಗಡು ಮತ್ತು ಕನ್ನಡದ ಮೇಲಿನ ಅಭಿಮಾನ ನನ್ನ ಹೆಮ್ಮೆ. ವೃತ್ತಿಪರತೆಯೊಂದಿಗೆ ಹೊಸ ವಿಷಯಗಳನ್ನು ಕಲಿಯುತ್ತಾ, ಕ್ರೀಡಾ ಪತ್ರಿಕೋದ್ಯಮದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುವ ಹಂಬಲ ನನ್ನದು.

Read More
Follow Us
ಮತ್ತೆ ತಲೆ ಓಡಿಸಿದ ಯಶಸ್, ಗೊಂದಲದಲ್ಲಿ ಮನೆ ಮಂದಿ: ವಿಡಿಯೋ

ಮರಿಗಳಿಗೆ ರಕ್ಷಣಾ ಕೋಟೆ ಕಟ್ಟಿ ಸಾಗುತ್ತಿರುವ 39 ಕಾಡಾನೆಗಳ ದಂಡು

ಜಾಮೀನು ರದ್ದು: ಮನೆಯಿಂದ ಕಣ್ಣೀರು ಹಾಕುತ್ತಾ ಹೊರಬಂದ ವಿನಯ್ ಕುಲಕರ್ಣಿ

ಆಶಾ ಕಾರ್ಯಕರ್ತರ ಬಗ್ಗೆ ನೀಡಿದ್ದ ಹೇಳಿಕೆಗೆ ಸಚಿವ ನರೇಂದ್ರಸ್ವಾಮಿ ವಿಷಾದ

ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ

ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ

ಕಾರವಾರ: ದಿಶಾ ಸಮಿತಿ ಸಭೆಯಲ್ಲಿ 'ವಂದೇ ಮಾತರಂ' ಜಟಾಪಟಿ

ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು

ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ

'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'