AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆಯ ದಾಖಲೆ ಧೂಳೀಪಟ… ವೈಭವ್ ಈಗ ‘ಸಿಕ್ಸರ್ ಸುಲ್ತಾನ್’

Vaibhav Sooryavanshi Records: ಮೈದಾನಕ್ಕಿಳಿದರೆ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಬೌಲರ್‌ಗಳನ್ನು ನಡುಗಿಸುತ್ತಿರುವ ಈ ಯುವ ಎಡಗೈ ದಾಂಡಿಗ ವೈಭವ್ ಸೂರ್ಯವಂಶಿ ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಇತಿಹಾಸದೊಂದಿಗೆ ಪವರ್-ಹಿಟ್ಟಿಂಗ್‌ಗೆ ಹೊಸ ಭಾಷ್ಯ ಬರೆದಿದ್ದ ಅಭಿಷೇಕ್ ಶರ್ಮಾ ಅವರ ಆಲ್-ಟೈಮ್ ದಾಖಲೆಯನ್ನು ಮುರಿದಿದ್ದಾರೆ.

ಝಾಹಿರ್ ಯೂಸುಫ್
|

Updated on:May 18, 2026 | 10:14 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವೈಭವ್ ಸೂರ್ಯವಂಶಿ (Vaibhav Sooryavanshi) ಆರ್ಭಟ ಮುಂದುವರೆದಿದೆ. ಈ ಆರ್ಭಟದೊಂದಿಗೆ ಯುವ ಎಡಗೈ ದಾಂಡಿಗ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಕೂಡ ಸಿಡಿಲಬ್ಬರದ ಸರದಾರ ಅಭಿಷೇಕ್ ಶರ್ಮಾ ಹೆಸರಿನಲ್ಲಿದ್ದ ಅಮೋಘ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. (PC: IPL)

1 / 6
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ 21 ಎಸೆತಗಳಲ್ಲಿ 3 ಭರ್ಜರಿ ಸಿಕ್ಸರ್ ಹಾಗೂ 5 ಫೋರ್​ಗಳೊಂದಿಗೆ 46 ರನ್ ಬಾರಿಸಿದ್ದರು. (PC: IPL)

2 / 6
ಈ ಮೂರು ಸಿಕ್ಸರ್​ಗಳೊಂದಿಗೆ ವೈಭವ್ ಸೂರ್ಯವಂಶಿ ಐಪಿಎಲ್ ಆವೃತ್ತಿವೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ಭರ್ಜರಿ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಸನ್​ರೈಸರ್ಸ್ ಹೈದರಾಬಾದ್ ತಂಡದ ಅಭಿಷೇಕ್ ಶರ್ಮಾ ಹೆಸರಿನಲ್ಲಿತ್ತು. (PC: IPL)

3 / 6
2024ರ ಐಪಿಎಲ್​ ಸೀಸನ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಆರಂಭಿಕನಾಗಿ 16 ಇನಿಂಗ್ಸ್ ಆಡಿದ್ದ ಅಭಿಷೇಕ್ ಶರ್ಮಾ ಬರೋಬ್ಬರಿ 42 ಸಿಕ್ಸ್​ ಸಿಡಿಸಿದ್ದರು. ಈ ಮೂಲಕ ಐಪಿಎಲ್ ಸೀಸನ್​ವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು. (PC: IPL)

4 / 6
ಆದರೆ ಈ ಬಾರಿಯ ಐಪಿಎಲ್​ನಲ್ಲಿ ಆರ್ಭಟಿಸಿರುವ ಬಾಸ್ ಬೇಬಿ ಖ್ಯಾತಿಯ ವೈಭವ್ ಸೂರ್ಯವಂಶಿ ಕೇವಲ 12 ಇನಿಂಗ್ಸ್​ಗಳ ಮೂಲಕ 43 ಸಿಕ್ಸ್​ ಚಚ್ಚಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಸೀಸನ್​ವೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಭಾರತೀಯ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL)

5 / 6
ಇನ್ನು ಐಪಿಎಲ್ ಇತಿಹಾಸದಲ್ಲಿ ಸೀಸನ್​ವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಅಮೋಘ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. 2012 ರ ಐಪಿಎಲ್​ ಸೀಸನ್​ನಲ್ಲಿ ಆರ್​ಸಿಬಿ ಪರ ಕಣಕ್ಕಿಳಿದಿದ್ದ ಗೇಲ್ ಬರೋಬ್ಬರಿ 59 ಸಿಕ್ಸ್ ಸಿಡಿಸಿದ್ದರು. 14 ವರ್ಷಗಳ ಹಿಂದೆ ಬರೆದ ಈ ದಾಖಲೆಯನ್ನು ಇಂದಿಗೂ ಯಾರಿಗೂ ಮುರಿಯಲು ಸಾಧ್ಯವಾಗಿಲ್ಲ ಎಂಬುದು ವಿಶೇಷ. (PC: IPL)

6 / 6

Published On - 10:14 am, Mon, 18 May 26

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us