ಕೇವಲ 227 ಎಸೆತಗಳು… ವೈಭವ್ ಆರ್ಭಟಕ್ಕೆ ಐಪಿಎಲ್ ದಾಖಲೆ ಉಡೀಸ್

Updated on: Apr 23, 2026 | 7:13 AM

Vaibhav Sooryavanshi Records: ಐಪಿಎಲ್​ನ 32ನೇ ಪಂದ್ಯದ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡದ ಸ್ಫೋಟಕ ಬ್ಯಾಟರ್ ವೈಭವ್ ಸೂರ್ಯವಂಶಿ, ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಪೃಥ್ವಿ ಶಾ ಅವರ ದಾಖಲೆಯನ್ನು ಮುರಿದು ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಈ ದಾಖಲೆಗಳೊಂದಿಗೆ ಐಪಿಎಲ್‌ನಲ್ಲಿ ಅತಿ ವೇಗವಾಗಿ ಹಾಗೂ ಅತಿ ಕಿರಿಯ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

1 / 6
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವೈಭವ್ ಸೂರ್ಯವಂಶಿ (Vaibhav Sooryavanshi) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಕೇವಲ 227 ಎಸೆತಗಳಲ್ಲಿ ಎಂಬುದು ವಿಶೇಷ. ಈ 227 ಎಸೆತಗಳ ಮೂಲಕ ವೈಭವ್ ಮುರಿದಿರುವುದು ಗ್ಲೆನ್ ಮ್ಯಾಕ್ಸ್​​ವೆಲ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು..!

2 / 6
ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 32ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಕೇವಲ 8 ರನ್​ ಮಾತ್ರ ಕಲೆಹಾಕಿದ್ದರು. ಈ ಎಂಟು ರನ್​ಗಳೊಂದಿಗೆ ವೈಭವ್ ಐಪಿಎಲ್​ನಲ್ಲಿ 500 ರನ್​ಗಳನ್ನು ಪೂರೈಸಿದ್ದಾರೆ.

3 / 6
ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತೀ ಕಡಿಮೆ ಎಸೆತಗಳಲ್ಲಿ 500 ರನ್​ ಗಳಿಸಿದ ಬ್ಯಾಟರ್ ಎಂಬ ಭರ್ಜರಿ ದಾಖಲೆಯನ್ನು ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾದ ಸ್ಫೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್​​ವೆಲ್ ಹೆಸರಿನಲ್ಲಿತ್ತು. 

4 / 6
ಇಂಡಿಯನ್ ಪ್ರೀಮಿಯರ್ ಲೀಗ್​ನ ಆರಂಭದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದ ಗ್ಲೆನ್ ಮ್ಯಾಕ್ಸ್​ವೆಲ್ 260 ಎಸೆತಗಳ ಮೂಲಕ 500 ರನ್ ಪೂರೈಸಿದ್ದರು. ಈ ಮೂಲಕ ಐಪಿಎಲ್​ನಲ್ಲಿ ಕನಿಷ್ಠ ಎಸೆತಗಳ ಮೂಲಕ ಐನೂರು ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದರು.

5 / 6
ಇದೀಗ ಈ ದಾಖಲೆಯನ್ನು ವೈಭವ್ ಸೂರ್ಯವಂಶಿ ಅಳಿಸಿ ಹಾಕಿದ್ದಾರೆ. ಐಪಿಎಲ್​ನಲ್ಲಿ ಈವರೆಗೆ 14 ಇನಿಂಗ್ಸ್ ಆಡಿರುವ ವೈಭವ್ ಕೇವಲ 227 ಎಸೆತಗಳಲ್ಲಿ 500+ ರನ್ ಕಲೆಹಾಕಿದ್ದಾರೆ. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಅತೀ ಕಡಿಮೆ ಎಸೆತಗಳಲ್ಲಿ 500 ರನ್ ಪೂರೈಸಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

6 / 6
ಹಾಗೆಯೇ ಐಪಿಎಲ್​ ಇತಿಹಾಸದಲ್ಲಿ 500 ರನ್ ಕಲೆಹಾಕಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ದಾಖಲೆ ಕೂಡ ವೈಭವ್ ಸೂರ್ಯವಂಶಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಪೃಥ್ವಿ ಶಾ (19 ವರ್ಷ) ಹೆಸರಿನಲ್ಲಿತ್ತು. ಇದೀಗ 15ನೇ ವಯಸ್ಸಿನಲ್ಲಿ ಐನೂರು ರನ್​ಗಳಿಸುವ ಮೂಲಕ ವೈಭವ್ ಸೂರ್ಯವಂಶಿ ಹೊಸ ಇತಿಹಾಸ ಬರೆದಿದ್ದಾರೆ.

Follow Us