
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅಬ್ಬರಿಸುವ ಮೂಲಕ ವೈಭವ್ ಸೂರ್ಯವಂಶಿ (Vaibhav Sooryavanshi ) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಸಿಕ್ಸರ್ಗಳ ಸುರಿಮಳೆಯೊಂದಿಗೆ. ಅಂದರೆ ಸಿಕ್ಸರ್ ಸಿಡಿಸಿಯೇ ಇದೀಗ ವೈಭವ್ ಸೂರ್ಯವಂಶಿ ಎರಡು ಭರ್ಜರಿ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ್ದಾರೆ. (PC: IPL)

ಜೈಪುರದಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ 16 ಎಸೆತಗಳಲ್ಲಿ 3 ಭರ್ಜರಿ ಸಿಕ್ಸರ್ಗಳೊಂದಿಗೆ 36 ರನ್ ಬಾರಿಸಿದ್ದರು. ಈ ಮೂರು ಸಿಕ್ಸ್ಗಳೊಂದಿಗೆ ವೈಭವ್ ಟಿ20 ಕ್ರಿಕೆಟ್ನಲ್ಲಿ 100 ಸಿಕ್ಸರ್ಗಳನ್ನು ಪೂರೈಸಿದ್ದಾರೆ. (PC: IPL)

ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತೀ ವೇಗವಾಗಿ 100 ಸಿಕ್ಸ್ ಸಿಡಿಸಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಂದರೆ ಟಿ20 ಕ್ರಿಕೆಟ್ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ ಹಾಗೂ ಅತೀ ಕಡಿಮೆ ಇನಿಂಗ್ಸ್ಗಳಲ್ಲಿ 100 ಸಿಕ್ಸರ್ಗಳ ಮೈಲುಗಲ್ಲು ಮುಟ್ಟಿದ ದಾಂಡಿಗ ಎನಿಸಿಕೊಂಡಿದ್ದಾರೆ. (PC: IPL)

ಇದಕ್ಕೂ ಮುನ್ನ ಈ ಭರ್ಜರಿ ವಿಶ್ವ ದಾಖಲೆ ಆಸ್ಟ್ರೀಯಾ ತಂಡದ ಕರಣ್ಬೀರ್ ಸಿಂಗ್ ಹೆಸರಿನಲ್ಲಿತ್ತು. ಕರಣ್ಬೀರ್ ಸಿಂಗ್ ಕೇವಲ 33 ಇನಿಂಗ್ಸ್ಗಳ ಮೂಲಕ 100 ಸಿಕ್ಸರ್ಗಳನ್ನು ಸಿಡಿಸಿದ್ದರು. ಹಾಗೆಯೇ ಈ 100 ಸಿಕ್ಸರ್ಗಳನ್ನು ಬಾರಿಸಲು ತೆಗೆದುಕೊಂಡಿದ್ದು ಕೇವಲ 817 ಎಸೆತಗಳನ್ನು ಮಾತ್ರ. ಈ ಮೂಲಕ ಟಿ20 ಇತಿಹಾಸದಲ್ಲೇ ಅತೀ ಕಡಿಮೆ ಎಸೆತಗಳಲ್ಲಿ ಹಾಗೂ ಕನಿಷ್ಠ ಇನಿಂಗ್ಸ್ಗಳಲ್ಲಿ 100 ಸಿಕ್ಸ್ ಸಿಡಿಸಿದ ಬ್ಯಾಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದರು. (PC: Wisden)

ಇದೀಗ ವೈಭವ್ ಸೂರ್ಯವಂಶಿ ಈ ಎರಡು ವಿಶ್ವ ದಾಖಲೆಗಳನ್ನು ಧೂಳೀಪಟ ಮಾಡಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡದ ಯುವ ದಾಂಡಿಗ ಕೇವಲ 29 ಇನಿಂಗ್ಸ್ಗಳ ಮೂಲಕ 100 ಸಿಕ್ಸ್ಗಳನ್ನು ಬಾರಿಸಿದ್ದಾರೆ. ಹಾಗೆಯೇ 100 ಸಿಕ್ಸರ್ಗಳ ಸಾಧನೆ ಮಾಡಲು ತೆಗೆದುಕೊಂಡಿರುವುದು ಕೇವಲ 514 ಎಸೆತಗಳನ್ನು ಮಾತ್ರ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಕಡಿಮೆ ಇನಿಂಗ್ಸ್ ಹಾಗೂ ಅತೀ ಕಡಿಮೆ ಎಸೆತಗಳಲ್ಲಿ 100 ಸಿಕ್ಸರ್ಗಳನ್ನು ಬಾರಿಸಿದ ವಿಶ್ವ ದಾಖಲೆಯನ್ನು ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ. (PC: IPL)