AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

750 ಬ್ಯಾಟರ್​ಗಳಿಗೆ ಸಾಧ್ಯವಾಗಿಲ್ಲ… ಪ್ರಚಂಡ ದಾಖಲೆ ಬರೆದ ವೈಭವ್!

Vaibhav Sooryavanshi Record: ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ 38 ಎಸೆತಗಳನ್ನು ಎದುರಿಸಿದ ವೈಭವ್ 10 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 93 ರನ್​ ಚಚ್ಚಿದ್ದರು. ಈ ವಿಸ್ಫೋಟಕ ಬ್ಯಾಟಿಂಗ್​ನೊಂದಿಗೆ ವೈಭವ್ ಸೂರ್ಯವಂಶಿ ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on:May 20, 2026 | 7:15 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಈವರೆಗೆ 750 ಕ್ಕೂ ಹೆಚ್ಚು ಭಾರತೀಯರು ಕಣಕ್ಕಿಳಿದಿದ್ದಾರೆ. ಈ ಆಟಗಾರರಿಗೆ ಸಾಧ್ಯವಾಗದೇ ಇರುವುದನ್ನು 15 ವರ್ಷದ ವೈಭವ್ ಸೂರ್ಯವಂಶಿ (Vaibhav Sooryavanshi) ಸಾಧಿಸಿ ತೋರಿಸಿದ್ದಾರೆ. ಅದು ಕೂಡ ಸಿಕ್ಸರ್​ಗಳ ಸುರಿಮಳೆಯೊಂದಿಗೆ..! (PC: IPL)

1 / 6
ಹೌದು, ಐಪಿಎಲ್ ಇತಿಹಾಸದಲ್ಲಿ ಆವೃತ್ತಿಯೊಂದರಲ್ಲಿ 50+ ಸಿಕ್ಸ್ ಸಿಡಿಸಿದ ಮೊದಲ ಭಾರತೀಯ ಬ್ಯಾಟರ್ ಎಂಬ ಭರ್ಜರಿ ದಾಖಲೆಯೊಂದನ್ನು ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 10 ಸಿಕ್ಸ್ ಸಿಡಿಸುವ ಮೂಲಕ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ. (PC: IPL)

2 / 6
ಇದಕ್ಕೂ ಮುನ್ನ ಐಪಿಎಲ್​ ಸೀಸನ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಸನ್​ರೈಸರ್ಸ್ ಹೈದರಾಬಾದ್ ತಂಡದ ಅಭಿಷೇಕ್ ಶರ್ಮಾ ಹೆಸರಿನಲ್ಲಿತ್ತು. ಐಪಿಎಲ್ 2024 ರಲ್ಲಿ 42 ಸಿಕ್ಸ್ ಸಿಡಿಸುವ ಮೂಲಕ ಅಭಿಷೇಕ್ ಈ ದಾಖಲೆ ಬರೆದಿದ್ದರು. (PC: IPL)

3 / 6
ಆದರೆ ಈ ಬಾರಿಯ ಐಪಿಎಲ್​ ಮೂಲಕ ವೈಭವ್ ಸೂರ್ಯವಂಶಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. 13 ಪಂದ್ಯಗಳಲ್ಲಿ 53 ಸಿಕ್ಸ್ ಸಿಡಿಸುವ ಮೂಲಕ ವೈಭವ್ ಸೂರ್ಯವಂಶಿ ಐಪಿಎಲ್ ಆವೃತ್ತಿಯೊಂದರಲ್ಲಿ 50 ಕ್ಕಿಂತ ಹೆಚ್ಚು ಸಿಕ್ಸ್ ಬಾರಿಸಿದ ಮೊದಲ ಭಾರತೀಯ ಎನಿಸಿಕೊಂಡಿದ್ದಾರೆ. (PC: IPL)

4 / 6
ಅಷ್ಟೇ ಅಲ್ಲದೆ ಐಪಿಎಲ್​ವೊಂದರಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಈ ದಾಖಲೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಕ್ರಿಸ್ ಗೇಲ್. ವೆಸ್ಟ್ ಇಂಡೀಸ್ ದಾಂಡಿಗ 2012 ರಲ್ಲಿ ಬರೋಬ್ಬರಿ 59 ಸಿಕ್ಸ್ ಸಿಡಿಸಿ ಈ ದಾಖಲೆ ನಿರ್ಮಿಸಿದ್ದರು. (PC: IPL)

5 / 6
ಇದೀಗ ವೈಭವ್ ಸೂರ್ಯವಂಶಿ 13 ಇನಿಂಗ್ಸ್​ಗಳ ಮೂಲಕ 53 ಸಿಕ್ಸ್ ಸಿಡಿಸಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಅಷ್ಟೇ ಅಲ್ಲದೆ ಮುಂದಿನ ಪಂದ್ಯದಲ್ಲಿ 7 ಸಿಕ್ಸ್ ಸಿಡಿಸಿದರೆ ಐಪಿಎಲ್ ಆವೃತ್ತಿಯೊಂದರಲ್ಲಿ ಅತೀ ಹೆಚ್ಚು ಬಾರಿಸಿದ ಸಾರ್ವಕಾಲಿಕ ದಾಖಲೆ ವೈಭವ್ ಸೂರ್ಯವಂಶಿ ಪಾಲಾಗಲಿದೆ. (PC: IPL)

6 / 6

Published On - 7:08 am, Wed, 20 May 26

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ

ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!

ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು

ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?

‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ

ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ

ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ

ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ

ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ

ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ