AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: ಸಚಿನ್ ತೆಂಡೂಲ್ಕರ್ ಸಾರ್ವಕಾಲಿಕ ದಾಖಲೆ ಮುರಿದ ವೈಭವ್ ಸೂರ್ಯವಂಶಿ

Vaibhav Sooryavanshi breaks Sachin's Record: ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿತು. ಈ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದರು. 15 ವರ್ಷ 118 ದಿನಗಳ ವಯಸ್ಸಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅರ್ಧಶತಕ ಗಳಿಸಿದ ಕಿರಿಯ ಆಟಗಾರ ಎಂಬ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ವೈಭವ್ ಮುರಿದರು. ಇದು ಕ್ರಿಕೆಟ್ ಲೋಕದಲ್ಲಿ ಹೊಸ ಮೈಲಿಗಲ್ಲು.

ಪೃಥ್ವಿಶಂಕರ
|

Updated on: Jul 24, 2026 | 2:57 PM

Share
ಹರಾರೆಯಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್​ಗಳಿಂದ ಗೆದ್ದುಕೊಂಡಿತು. ಈ ಗೆಲುವಿನೊಂದಿಗೆ ಶ್ರೇಯಸ್ ಅಯ್ಯರ್ ನಾಯಕನಾಗಿ ತಮ್ಮ ಗೆಲುವಿನ ಖಾತೆಯನ್ನು ತೆರೆದರು. ತಂಡದ ಈ ಸುಲಭ ಗೆಲುವಿನಲ್ಲಿ ವೈಭವ್ ಸೂರ್ಯವಂಶಿ ಸಿಡಿಸಿದ 18 ಎಸೆತಗಳಲ್ಲಿ ಅರ್ಧಶತಕ ಪ್ರಮುಖ ಪಾತ್ರವಹಿಸಿತು(PC-PTI).

1 / 5
ವಾಸ್ತವವಾಗಿ ಇಂಗ್ಲೆಂಡ್‌ ವಿರುದ್ಧದ ಟಿ20 ಸರಣಿಯೊಂದಿಗೆ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ವೈಭವ್, ಆ ಸರಣಿಯಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ಆದಾಗ್ಯೂ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಅತಿ ಕಿರಿಯ ಆಟಗಾರನೆಂಬ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದ್ದರು. ವೈಭವ್​ಗೂ ಮೊದಲು ಈ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು(PC-PTI).

2 / 5
ಇದೀಗ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ವೈಭವ್ ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅರ್ಧಶತಕ ಬಾರಿಸಿದ ಅತಿ ಕಿರಿಯ ಆಟಗಾರನೆಂಬ ದಾಖಲೆಯನ್ನು ನಿರ್ಮಿಸಿದ್ದಾರೆ. ವೈಭವ್ 15 ವರ್ಷ ಮತ್ತು 118 ದಿನಗಳ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದು, ಈ ವಿಚಾರದಲ್ಲೂ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ್ದಾರೆ(PC-PTI).

3 / 5
16 ವರ್ಷ 205 ದಿನ ವಯಸ್ಸಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ಸಚಿನ್ ತೆಂಡೂಲ್ಕರ್ ತಮ್ಮ ಅಂತರರಾಷ್ಟ್ರೀಯ ಚೊಚ್ಚಲ ಅರ್ಧಶತಕವನ್ನು 16 ವರ್ಷ 213 ದಿನ ವಯಸ್ಸಿನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಬಾರಿಸಿದ್ದರು. ಅಂದರೆ ಸಚಿನ್ ಪಾದಾರ್ಪಣೆ ಮಾಡಿದ 8 ದಿನಗಳ ಅಂತರದಲ್ಲಿ ತಮ್ಮ ಮೊದಲ ಅರ್ಧಶತಕ ಕಲೆಹಾಕಿದ್ದರು(PC-PTI).

4 / 5
ಇದೀಗ ವೈಭವ್ ಸೂರ್ಯವಂಶಿ 15 ವರ್ಷ ಮತ್ತು 118 ದಿನಗಳ ವಯಸ್ಸಿನಲ್ಲಿ ಮೊದಲ ಅಂತರರಾಷ್ಟ್ರೀಯ ಅರ್ಧಶತಕ ಬಾರಿಸುವ ಮೂಲಕ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ಎರಡು ದಾಖಲೆಗಳನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ(PC-PTI).

5 / 5
Follow Us