
ಹರಾರೆಯಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಈ ಗೆಲುವಿನೊಂದಿಗೆ ಶ್ರೇಯಸ್ ಅಯ್ಯರ್ ನಾಯಕನಾಗಿ ತಮ್ಮ ಗೆಲುವಿನ ಖಾತೆಯನ್ನು ತೆರೆದರು. ತಂಡದ ಈ ಸುಲಭ ಗೆಲುವಿನಲ್ಲಿ ವೈಭವ್ ಸೂರ್ಯವಂಶಿ ಸಿಡಿಸಿದ 18 ಎಸೆತಗಳಲ್ಲಿ ಅರ್ಧಶತಕ ಪ್ರಮುಖ ಪಾತ್ರವಹಿಸಿತು(PC-PTI).

ವಾಸ್ತವವಾಗಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯೊಂದಿಗೆ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದ ವೈಭವ್, ಆ ಸರಣಿಯಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ಆದಾಗ್ಯೂ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ ಅತಿ ಕಿರಿಯ ಆಟಗಾರನೆಂಬ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದ್ದರು. ವೈಭವ್ಗೂ ಮೊದಲು ಈ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು(PC-PTI).

ಇದೀಗ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ವೈಭವ್ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅರ್ಧಶತಕ ಬಾರಿಸಿದ ಅತಿ ಕಿರಿಯ ಆಟಗಾರನೆಂಬ ದಾಖಲೆಯನ್ನು ನಿರ್ಮಿಸಿದ್ದಾರೆ. ವೈಭವ್ 15 ವರ್ಷ ಮತ್ತು 118 ದಿನಗಳ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದು, ಈ ವಿಚಾರದಲ್ಲೂ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ್ದಾರೆ(PC-PTI).

16 ವರ್ಷ 205 ದಿನ ವಯಸ್ಸಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದ ಸಚಿನ್ ತೆಂಡೂಲ್ಕರ್ ತಮ್ಮ ಅಂತರರಾಷ್ಟ್ರೀಯ ಚೊಚ್ಚಲ ಅರ್ಧಶತಕವನ್ನು 16 ವರ್ಷ 213 ದಿನ ವಯಸ್ಸಿನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಬಾರಿಸಿದ್ದರು. ಅಂದರೆ ಸಚಿನ್ ಪಾದಾರ್ಪಣೆ ಮಾಡಿದ 8 ದಿನಗಳ ಅಂತರದಲ್ಲಿ ತಮ್ಮ ಮೊದಲ ಅರ್ಧಶತಕ ಕಲೆಹಾಕಿದ್ದರು(PC-PTI).

ಇದೀಗ ವೈಭವ್ ಸೂರ್ಯವಂಶಿ 15 ವರ್ಷ ಮತ್ತು 118 ದಿನಗಳ ವಯಸ್ಸಿನಲ್ಲಿ ಮೊದಲ ಅಂತರರಾಷ್ಟ್ರೀಯ ಅರ್ಧಶತಕ ಬಾರಿಸುವ ಮೂಲಕ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ಎರಡು ದಾಖಲೆಗಳನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ(PC-PTI).