- Kannada News Photo gallery Cricket photos Vaibhav Sooryavanshi: The New Sixer King Chasing Gayle's Legend.
ವೈಭವ್ ಬಿರುಗಾಳಿಗೆ ಕ್ರಿಸ್ ಗೇಲ್ಗೆ ಶ್ರೇಷ್ಠ ದಾಖಲೆಯೇ ಶೇಕಿಂಗ್..!
Vaibhav Sooryavanshi: ವೈಭವ್ ಸೂರ್ಯವಂಶಿ ಐಪಿಎಲ್ ಇನಿಂಗ್ಸ್ವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ವೈಭವ್ 12 ಸಿಕ್ಸರ್ ಸಿಡಿಸಿ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ ಐಪಿಎಲ್ ಇತಿಹಾಸದಲ್ಲೇ ಇನ್ನಿಂಗ್ಸ್‌ನ ಮೊದಲ ಓವರ್‌ನಲ್ಲಿ ನಾಲ್ಕು ಸಿಕ್ಸರ್ ಸಿಡಿಸಿದ ಮೊದಲ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಇದೀಗ ಕ್ರಿಸ್ ಗೇಲ್ ಹೆಸರಿನಲ್ಲಿರುವ ಭರ್ಜರಿ ದಾಖಲೆಯತ್ತ ಯುವ ಎಡಗೈ ದಾಂಡಿಗ ದಾಂಗುಡಿ ಇಟ್ಟಿದ್ದಾರೆ.
Updated on: Apr 29, 2026 | 1:52 PM

IPL 2026: ಅನುಭವಿ ಬೌಲರ್‌ಗಳ ನಿದ್ದೆಗೆಡಿಸುತ್ತಿರುವ ರಾಜಸ್ಥಾನ ರಾಯಲ್ಸ್ ತಂಡದ ಉದಯೋನ್ಮುಖ ತಾರೆ ವೈಭವ್ ಸೂರ್ಯವಂಶಿ (Vaibhav Sooryavanshi), ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಐಪಿಎಲ್ ಇತಿಹಾಸದ ಬೃಹತ್ ದಾಖಲೆಯನ್ನು ಪುಡಿಪುಡಿ ಮಾಡುವ ಹಾದಿಯಲ್ಲಿದ್ದಾರೆ. ಅದು ಕ್ರಿಸ್ ಗೇಲ್ ಬರೆದಿಟ್ಟಿರುವ ಭರ್ಜರಿ ದಾಖಲೆಯನ್ನು ಎಂಬುದು ವಿಶೇಷ.

ಈ ಬಾರಿಯ ಐಪಿಎಲ್ನಲ್ಲಿ ಈವರೆಗೆ 9 ಇನಿಂಗ್ಸ್ ಆಡಿರುವ ವೈಭವ್ ಸೂರ್ಯವಂಶಿ ಬರೋಬ್ಬರಿ 37 ಸಿಕ್ಸರ್ಗಳನ್ನು ಸಿಡಿಸಿದ್ದಾರೆ. ಈ ಸಿಕ್ಸರ್ಗಳೊಂದಿಗೆ ಐಪಿಎಲ್ ಸೀಸನ್ವೊಂದರಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಬರೆಯುವತ್ತ ಹೆಜ್ಜೆಯನ್ನಿಟ್ಟಿದ್ದಾರೆ.

ಐಪಿಎಲ್ ಸೀಸನ್ವೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. 2012 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ಕ್ರಿಸ್ ಗೇಲ್ 14 ಇನಿಂಗ್ಸ್ಗಳ ಮೂಲಕ ಒಟ್ಟು 59 ಸಿಕ್ಸರ್ ಸಿಡಿಸಿದ್ದರು. ಈ ಮೂಲಕ ಐಪಿಎಲ್ ಆವೃತ್ತಿಯೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ದಾಖಲೆ ನಿರ್ಮಿಸಿದ್ದರು.

ಇದೀಗ ಈ ದಾಖಲೆಯತ್ತ ವೈಭವ್ ಸೂರ್ಯವಂಶಿ ದಾಂಗುಡಿಯಿಟ್ಟಿದ್ದಾರೆ. ಈಗಾಗಲೇ 9 ಇನಿಂಗ್ಸ್ಗಳ ಮೂಲಕ 37 ಸಿಕ್ಸ್ ಸಿಡಿಸಿರುವ ವೈಭವ್ ಸೂರ್ಯವಂಶಿ ಮುಂದಿನ 5 ಪಂದ್ಯಗಳ ಮೂಲಕ 23 ಸಿಕ್ಸ್ ಬಾರಿಸುವ ನಿರೀಕ್ಷೆಯಿದೆ. ಈ 23 ಸಿಕ್ಸರ್ಗಳು ಮೂಡಿಬಂದರೆ ಕ್ರಿಸ್ ಗೇಲ್ ಹೆಸರಿನಲ್ಲಿರುವ ಸಾರ್ವಕಾಲೀಕ ದಾಖಲೆ ವೈಭವ್ ಸೂರ್ಯವಂಶಿ ಪಾಲಾಗಲಿದೆ.

ರಾಜಸ್ಥಾನ್ ರಾಯಲ್ಸ್ ತಂಡವು ತನ್ನ ಮುಂದಿನ ಪಂದ್ಯಗಳನ್ನು ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಟೈಟಾನ್ಸ್, ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಈ ಐದು ಪಂದ್ಯಗಳಲ್ಲಿ ವೈಭವ್ 23 ಸಿಕ್ಸರ್ ಸಿಡಿಸಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.




