AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಭವ್ ಬಿರುಗಾಳಿಗೆ ಕ್ರಿಸ್ ಗೇಲ್​ಗೆ ಶ್ರೇಷ್ಠ ದಾಖಲೆಯೇ ಶೇಕಿಂಗ್..!

Vaibhav Sooryavanshi: ವೈಭವ್ ಸೂರ್ಯವಂಶಿ ಐಪಿಎಲ್​ ಇನಿಂಗ್ಸ್​ವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ವೈಭವ್ 12 ಸಿಕ್ಸರ್ ಸಿಡಿಸಿ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ ಐಪಿಎಲ್ ಇತಿಹಾಸದಲ್ಲೇ ಇನ್ನಿಂಗ್ಸ್‌ನ ಮೊದಲ ಓವರ್‌ನಲ್ಲಿ ನಾಲ್ಕು ಸಿಕ್ಸರ್ ಸಿಡಿಸಿದ ಮೊದಲ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಇದೀಗ ಕ್ರಿಸ್ ಗೇಲ್ ಹೆಸರಿನಲ್ಲಿರುವ ಭರ್ಜರಿ ದಾಖಲೆಯತ್ತ ಯುವ ಎಡಗೈ ದಾಂಡಿಗ ದಾಂಗುಡಿ ಇಟ್ಟಿದ್ದಾರೆ.

ಝಾಹಿರ್ ಯೂಸುಫ್
|

Updated on: Apr 29, 2026 | 1:52 PM

Share
IPL 2026: ಅನುಭವಿ ಬೌಲರ್‌ಗಳ ನಿದ್ದೆಗೆಡಿಸುತ್ತಿರುವ ರಾಜಸ್ಥಾನ ರಾಯಲ್ಸ್ ತಂಡದ ಉದಯೋನ್ಮುಖ ತಾರೆ ವೈಭವ್ ಸೂರ್ಯವಂಶಿ (Vaibhav Sooryavanshi), ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಐಪಿಎಲ್ ಇತಿಹಾಸದ ಬೃಹತ್ ದಾಖಲೆಯನ್ನು ಪುಡಿಪುಡಿ ಮಾಡುವ ಹಾದಿಯಲ್ಲಿದ್ದಾರೆ. ಅದು ಕ್ರಿಸ್​ ಗೇಲ್ ಬರೆದಿಟ್ಟಿರುವ ಭರ್ಜರಿ ದಾಖಲೆಯನ್ನು ಎಂಬುದು ವಿಶೇಷ.

1 / 5
ಈ ಬಾರಿಯ ಐಪಿಎಲ್​ನಲ್ಲಿ ಈವರೆಗೆ 9 ಇನಿಂಗ್ಸ್ ಆಡಿರುವ ವೈಭವ್ ಸೂರ್ಯವಂಶಿ ಬರೋಬ್ಬರಿ 37 ಸಿಕ್ಸರ್​ಗಳನ್ನು ಸಿಡಿಸಿದ್ದಾರೆ. ಈ ಸಿಕ್ಸರ್​ಗಳೊಂದಿಗೆ ಐಪಿಎಲ್​ ಸೀಸನ್​ವೊಂದರಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಬರೆಯುವತ್ತ ಹೆಜ್ಜೆಯನ್ನಿಟ್ಟಿದ್ದಾರೆ.

2 / 5
ಐಪಿಎಲ್ ಸೀಸನ್​ವೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. 2012 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ಕ್ರಿಸ್ ಗೇಲ್ 14 ಇನಿಂಗ್ಸ್​ಗಳ ಮೂಲಕ ಒಟ್ಟು 59 ಸಿಕ್ಸರ್ ಸಿಡಿಸಿದ್ದರು. ಈ ಮೂಲಕ ಐಪಿಎಲ್ ಆವೃತ್ತಿಯೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ದಾಖಲೆ ನಿರ್ಮಿಸಿದ್ದರು.

3 / 5
ಇದೀಗ ಈ ದಾಖಲೆಯತ್ತ ವೈಭವ್ ಸೂರ್ಯವಂಶಿ ದಾಂಗುಡಿಯಿಟ್ಟಿದ್ದಾರೆ. ಈಗಾಗಲೇ 9 ಇನಿಂಗ್ಸ್​ಗಳ ಮೂಲಕ 37 ಸಿಕ್ಸ್ ಸಿಡಿಸಿರುವ ವೈಭವ್ ಸೂರ್ಯವಂಶಿ ಮುಂದಿನ 5 ಪಂದ್ಯಗಳ ಮೂಲಕ 23 ಸಿಕ್ಸ್​ ಬಾರಿಸುವ ನಿರೀಕ್ಷೆಯಿದೆ. ಈ 23 ಸಿಕ್ಸರ್​ಗಳು ಮೂಡಿಬಂದರೆ ಕ್ರಿಸ್ ಗೇಲ್ ಹೆಸರಿನಲ್ಲಿರುವ ಸಾರ್ವಕಾಲೀಕ ದಾಖಲೆ ವೈಭವ್ ಸೂರ್ಯವಂಶಿ ಪಾಲಾಗಲಿದೆ.

4 / 5
ರಾಜಸ್ಥಾನ್ ರಾಯಲ್ಸ್ ತಂಡವು ತನ್ನ ಮುಂದಿನ ಪಂದ್ಯಗಳನ್ನು ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಟೈಟಾನ್ಸ್, ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಈ ಐದು ಪಂದ್ಯಗಳಲ್ಲಿ ವೈಭವ್ 23 ಸಿಕ್ಸರ್​ ಸಿಡಿಸಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

5 / 5
Follow Us
ಕರ್ನಾಟಕದ ಹಲವು ಜೈಲುಗಳಲ್ಲಿ ಬರೋಬ್ಬರಿ 410 ಮೊಬೈಲ್‌ ಸೀಜ್

ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ತಡರಾತ್ರಿ ಮಳೆಗೆ ತತ್ತರಿಸಿದ ಬೆಂಗಳೂರು!
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ

ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ

ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್

7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್

ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು

ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್

ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ