AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: ಪಂದ್ಯ ಶ್ರೇಷ್ಠ, ಸರಣಿ ಶ್ರೇಷ್ಠ ಗೆದ್ದು ಸಚಿನ್ ದಾಖಲೆ ಮುರಿದ ವೈಭವ್

Vaibhav Sooryavanshi Breaks Sachin's Record: ವೈಭವ್ ಸೂರ್ಯವಂಶಿ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ 81 ರನ್ ಗಳಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದರು. 15 ವರ್ಷ 121 ದಿನಗಳಲ್ಲಿ ಈ ಸಾಧನೆ ಮಾಡುವ ಮೂಲಕ, ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿದು ಅತಿ ಕಿರಿಯ ಭಾರತೀಯ ಪಂದ್ಯಶ್ರೇಷ್ಠರಾದರು. ಸರಣಿಶ್ರೇಷ್ಠ ಪ್ರಶಸ್ತಿಯನ್ನು ಸಹ ಗೆದ್ದ ವೈಭವ್, ಟಿ20 ಕ್ರಿಕೆಟ್‌ನಲ್ಲಿ ಭಾರತೀಯ ಕ್ರಿಕೆಟ್‌ನ ಭವಿಷ್ಯದ ಆಶಾಕಿರಣವಾಗಿದ್ದಾರೆ.

ಪೃಥ್ವಿಶಂಕರ
|

Updated on: Jul 27, 2026 | 3:13 PM

Share
ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ 81 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಈ ಇನ್ನಿಂಗ್ಸ್‌ಗಾಗಿ, ವೈಭವ್​ಗೆ ಪಂದ್ಯಶ್ರೇಷ್ಠ ಪ್ರಶಸ್ತಿಯೂ ಲಭಿಸಿತು. ಈ ಮೂಲಕ ವೈಭವ್ ಪುರುಷರ ಕ್ರಿಕೆಟ್‌ನ ಯಾವುದೇ ಸ್ವರೂಪದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದ ಅತ್ಯಂತ ಕಿರಿಯ ಭಾರತೀಯ ಆಟಗಾರನೆಂಬ ದಾಖಲೆ ಕೂಡ ನಿರ್ಮಿಸಿದರು(PC-BCCI).

1 / 5
ಇದರ ಜೊತೆಗೆ ಈ ಮೊದಲು ಈ ದಾಖಲೆಯನ್ನು ಹೊಂದಿದ್ದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದರು. ಇದಲ್ಲದೆ, ವೈಭವ್ ಅವರನ್ನು ಸರಣಿಶ್ರೇಷ್ಠ ಎಂದು ಹೆಸರಿಸಲಾಯಿತು, ಸರಣಿಶ್ರೇಷ್ಠ ಪ್ರಶಸ್ತಿಯನ್ನು ಗೆದ್ದ ಅತ್ಯಂತ ಕಿರಿಯ ಭಾರತೀಯ ಪುರುಷ ಕ್ರಿಕೆಟಿಗರಾದರು(PC-PTI).

2 / 5
ಈ ಮೊದಲು ಪುರುಷರ ಕ್ರಿಕೆಟ್‌ನಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ ಅತ್ಯಂತ ಕಿರಿಯ ಭಾರತೀಯ ಬ್ಯಾಟ್ಸ್‌ಮನ್ ಎಂಬ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು. ಸಚಿನ್ 17 ವರ್ಷ 112 ದಿನಗಳಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ್ದರು. ಆದರೆ ವೈಭವ್ 15 ವರ್ಷ 121 ದಿನಗಳಲ್ಲಿ ಈ ಸಾಧನೆ ಮಾಡುವ ಮೂಲಕ, ಸಚಿನ್ ಅವರನ್ನು ಹಿಂದಿಕ್ಕಿದರು(PC-PTI).

3 / 5
ಹಾಗೆಯೇ ವೈಭವ್ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಈ ಪ್ರಶಸ್ತಿಯನ್ನು ಗೆದ್ದ ಅತ್ಯಂತ ಕಿರಿಯ ಭಾರತೀಯ ಮತ್ತು ಸರಣಿಶ್ರೇಷ್ಠ ಪ್ರಶಸ್ತಿಯನ್ನು ಗೆದ್ದ ಅತ್ಯಂತ ಕಿರಿಯ ಭಾರತೀಯ ಪುರುಷ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆದಾಗ್ಯೂ, ಟೆಸ್ಟ್ ಮತ್ತು ಏಕದಿನ ಪಂದ್ಯಗಳಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದ ದಾಖಲೆ ಇನ್ನೂ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ(PC-PTI).

4 / 5
ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಟಿ20ಐ ಸರಣಿಯಲ್ಲಿ ವೈಭವ್ ಸೂರ್ಯವಂಶಿ ಅದ್ಭುತ ಪ್ರದರ್ಶನ ನೀಡಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಮೂರು ಪಂದ್ಯಗಳಲ್ಲಿ, ವೈಭವ್ 77 ಎಸೆತಗಳಲ್ಲಿ 196.10 ಸ್ಟ್ರೈಕ್ ರೇಟ್‌ನಲ್ಲಿ ಒಟ್ಟು 151 ರನ್ ಗಳಿಸಿದರು. ಇದರಲ್ಲಿ ಎರಡು ಅರ್ಧಶತಕಗಳು ಸೇರಿದ್ದವು(PC-PTI).

5 / 5
Follow Us
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು

ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು

ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!

ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ

ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!

ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ

ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ

ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್

ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!

ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ