- TV9 Kannada Photo gallery Cricket photos Asian Games 2026 Gold: India Triumphs, Vaibhav Sooryavanshi Youngest Medalist
ಏಷ್ಯನ್ ಗೇಮ್ಸ್ನಲ್ಲಿ ಚಿನ್ನ ಗೆದ್ದ ಅತ್ಯಂತ ಕಿರಿಯ ಭಾರತೀಯ ವೈಭವ್ ಸೂರ್ಯವಂಶಿ
2026ರ ಏಷ್ಯನ್ ಕ್ರೀಡಾಕೂಟದಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ಟೀಂ ಇಂಡಿಯಾ ಪಾಕಿಸ್ತಾನವನ್ನು ಸೋಲಿಸಿ ಚಿನ್ನದ ಪದಕ ಗೆದ್ದಿದೆ. ಈ ಐತಿಹಾಸಿಕ ವಿಜಯದಲ್ಲಿ 15 ವರ್ಷದ ವೈಭವ್ ಸೂರ್ಯವಂಶಿ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ಭಾರತದ ಅತ್ಯಂತ ಕಿರಿಯ ಆಟಗಾರರಾಗಿ ದಾಖಲೆ ನಿರ್ಮಿಸಿದ್ದಾರೆ. ಸದ್ಯ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಸಜ್ಜಾಗಿರುವ ವೈಭವ್ ಪ್ರದರ್ಶನ ಎಲ್ಲರ ಗಮನ ಸೆಳೆದಿದೆ.
Updated on: Oct 04, 2026 | 4:28 PM

ಶ್ರೇಯಸ್ ಅಯ್ಯರ್ ನಾಯಕತ್ವದ ಟೀಂ ಇಂಡಿಯಾ 2026 ರ ಏಷ್ಯನ್ ಕ್ರೀಡಾಕೂಟದ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಚಿನ್ನದ ಪದಕ ಗೆದ್ದುಕೊಂಡಿತು. ಇದು ಈ ಕ್ರೀಡಾಕೂಟದಲ್ಲಿ ಟೀಂ ಇಂಡಿಯಾದ ಸತತ ಎರಡನೇ ಪದಕವಾಗಿದೆ. ಇನ್ನು ಇದೇ ಪಂದ್ಯದಲ್ಲಿ ಟೀಂ ಇಂಡಿಯಾದ ಯುವ ಆರಂಭಿಕ ಬ್ಯಾಟ್ಸ್‌ಮನ್ 15 ವರ್ಷದ ವೈಭವ್ ಸೂರ್ಯವಂಶಿ ಕೂಡ ಆಡಿದ್ದರು(PC-BCCI x).

ಈ ಕ್ರೀಡಾಕೂಟದಲ್ಲಿ ವೈಭವ್ ಸೂರ್ಯವಂಶಿ ಬ್ಯಾಟ್ ಮೂಲಕ ಅಬ್ಬರಿಸದಿದ್ದರೂ ಏಷ್ಯನ್ ಕ್ರೀಡಾಕೂಟದ ಇತಿಹಾಸದಲ್ಲಿ ಭಾರತದ ಪರ ಚಿನ್ನದ ಪದಕ ಗೆದ್ದ ಅತ್ಯಂತ ಕಿರಿಯ ಆಟಗಾರ ಎಂಬ ಐತಿಹಾಸಿಕ ದಾಖಲೆಯನ್ನು ಸೃಷ್ಟಿಸಿದ್ದಾರೆ. ವೈಭವ್ಗೂ ಮೊದಲು ಈ ದಾಖಲೆಯನ್ನು 2018 ರ ಏಷ್ಯನ್ ಕ್ರೀಡಾಕೂಟದಲ್ಲಿ 16 ನೇ ವಯಸ್ಸಿನಲ್ಲಿ ಚಿನ್ನದ ಪದಕ ಗೆದ್ದ ಶೂಟರ್ ಸೌರಭ್ ಚೌಧರಿ ಹೊಂದಿದ್ದರು(PC-PTI).

ಅಲ್ಲದೆ ವೈಭವ್ ಸೂರ್ಯವಂಶಿ ಏಷ್ಯನ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಭಾರತದ ಎರಡನೇ ಕಿರಿಯ ಆಟಗಾರನೆನಿಸಿಕೊಂಡರು. ಈ ದಾಖಲೆಯನ್ನು ಸ್ಪೀಡ್ ಸ್ಕೇಟರ್ ಸಂಜನಾ ಬತುಲಾ ಹೊಂದಿದ್ದು, ಅವರು 15 ವರ್ಷ, 3 ತಿಂಗಳು ಮತ್ತು 11 ದಿನಗಳಲ್ಲಿ 2023 ರಲ್ಲಿ ಹ್ಯಾಂಗ್‌ಝೌನಲ್ಲಿ ನಡೆದ ಮಹಿಳೆಯರ ಸ್ಪೀಡ್ ಸ್ಕೇಟಿಂಗ್ 3000 ಮೀಟರ್ ರಿಲೇಯಲ್ಲಿ ಕಂಚಿನ ಪದಕ ಗೆದ್ದಿದ್ದರು(PC-PTI).

ಇನ್ನು ಪಾಕಿಸ್ತಾನ ವಿರುದ್ಧದ ಫೈನಲ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ದೊಡ್ಡ ಇನ್ನಿಂಗ್ಸ್ ಆಡುತ್ತಾರೆಂದು ನಿರೀಕ್ಷಿಸಲಾಗಿತ್ತು. ಆದರೆ ಫೈನಲ್‌ನಲ್ಲಿ ಅವರು ನಿರೀಕ್ಷೆಗಳನ್ನು ಪೂರೈಸಲು ವಿಫಲರಾದರು. ತಮ್ಮ ಇನ್ನಿಂಗ್ಸ್‌ನಲ್ಲಿ 9 ಎಸೆತಗಳನ್ನು ಎದುರಿಸಿದ ವೈಭವ್ 15 ರನ್ ಬಾರಿಸಿದರು. ಆದಾಗ್ಯೂ, ಅವರನ್ನು ಮೂರನೇ ಓವರ್‌ನಲ್ಲಿ ಪಾಕಿಸ್ತಾನದ ಆಲ್‌ರೌಂಡರ್ ಸ್ಯಾಮ್ ಅಯೂಬ್ ಔಟ್ ಮಾಡಿದರು(PC-PTI).

2026 ರ ಏಷ್ಯನ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದ ನಂತರ ತವರಿಗೆ ಮರಳುತ್ತಿರುವ ಟೀಂ ಇಂಡಿಯಾ, ಅಕ್ಟೋಬರ್ 6 ರಿಂದ ವೆಸ್ಟ್ ಇಂಡೀಸ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಈ ಟಿ20ಸರಣಿಯಲ್ಲಿ ವೈಭವ್ ಸೂರ್ಯವಂಶಿ ಅವರ ಪ್ರದರ್ಶನದ ಮೇಲೆ ಎಲ್ಲರ ಗಮನವಿರಲಿದೆ. ಆದಾಗ್ಯೂ ಈ ಸರಣಿಯಲ್ಲಿ ಅವರಿಗೆ ಆಡುವ ಅವಕಾಶ ಸಿಗುತ್ತಾ ಎಂಬುದನ್ನು ಕಾದುನೋಡಬೇಕಿದೆ(PC-BCCI x).

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.
Read More



