ವೈಭವ್ ಸೂರ್ಯವಂಶಿ ಅಬ್ಬರದ ಮುಂದೆ ಕಣ್ಮರೆಯಾದ ಕೊಹ್ಲಿ, ಧೋನಿ

Updated on: Dec 05, 2025 | 6:00 PM

Vaibhav Suryavanshi: 2025ರಲ್ಲಿ 14 ವರ್ಷದ ವೈಭವ್ ಸೂರ್ಯವಂಶಿ ಭಾರತ ಕ್ರಿಕೆಟ್‌ನಲ್ಲಿ ದೊಡ್ಡ ಸಂಚಲನ ಮೂಡಿಸಿದ್ದಾರೆ. ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಿರಿಯ ವಯಸ್ಸಿನಲ್ಲಿ ಶತಕ ಬಾರಿಸಿ, ಭಾರತೀಯರಲ್ಲಿ ಅತಿ ವೇಗದ ಶತಕದ ದಾಖಲೆ ಬರೆದರು. ಗೂಗಲ್ ಟ್ರೆಂಡ್ಸ್‌ನಲ್ಲಿ ವಿರಾಟ್ ಕೊಹ್ಲಿ, ಧೋನಿಗಿಂತಲೂ ಹೆಚ್ಚು ಹುಡುಕಲ್ಪಟ್ಟ ಕ್ರಿಕೆಟಿಗನಾಗಿ ಹೊರಹೊಮ್ಮಿದ್ದಾರೆ. ಇವರು ಕೇವಲ 13ನೇ ವಯಸ್ಸಿನಲ್ಲಿ ಐಪಿಎಲ್‌ನಲ್ಲಿ ಖರೀದಿಸಲ್ಪಟ್ಟ ಕಿರಿಯ ಆಟಗಾರ. ವೈಭವ್ ಸೂರ್ಯವಂಶಿ ಭಾರತದ ಕ್ರಿಕೆಟ್‌ನ ಭವಿಷ್ಯದ ತಾರೆ.

1 / 6
2025 ರಲ್ಲಿ ಅದರಲ್ಲೂ ಭಾರತ ಕ್ರಿಕೆಟ್​ನಲ್ಲಿ ಸಾಕಷ್ಟು ಸದ್ದು ಮಾಡಿದ ಹೆಸರೆಂದರೆ ಅದು 14 ವರ್ಷದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ. ದೇಶಿ ಕ್ರಿಕೆಟ್​ನಲ್ಲಿ ತನ್ನ ಸಿಡಿಲಬ್ಬರದ ಬ್ಯಾಟಿಂಗ್‌ ಮೂಲಕ ಎಲ್ಲರ ಗಮನ ಸೆಳೆದಿದ್ದ ವೈಭವ್ ಸೂರ್ಯವಂಶಿಗೆ ವಿಶ್ವ ಮಟ್ಟದಲ್ಲಿ ಮಿಂಚುವ ಅವಕಾಶ ನೀಡಿದ್ದು ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್.

2 / 6
2025 ರ ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೇರಿಕೊಂಡಿದ್ದ ವೈಭವ್, ಸ್ಫೋಟಕ ಶತಕ ಬಾರಿಸುವ ಮೂಲಕ ವಿಶ್ವ ಕ್ರಿಕೆಟ್​ನಲ್ಲಿ ಎಲ್ಲರನ್ನು ಅಚ್ಚರಿಗೊಳಿಸಿದರು. ಅಲ್ಲಿಂದ ಸಿಕ್ಕ ಅವಕಾಶಗಳನ್ನು ಎರಡು ಕೈಗಳಿಂದ ಬಾಚಿಕೊಂಡಿರುವ ವೈಭವ್, ಭಾರತ ಅಂಡರ್ 19 ತಂಡದೊಂದಿಗೆ ಆಸ್ಟ್ರೇಲಿಯಾ, ಇಂಗ್ಲೆಂಡ್‌ ಪ್ರವಾಸ ಮಾಡಿ ಅಲ್ಲಿಯೂ ಶತಕಗಳ ಸುರಿಮಳೆಗೈದಿದ್ದರು.

3 / 6
ಇದೀಗ ದೇಶಿ ಟೂರ್ನಿ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಆಡುತ್ತಿರುವ ವೈಭವ್, ಇಲ್ಲಿಯೂ ಸಹ ರನ್​ಗಳ ಮಳೆ ಹರಿಸುತ್ತಿದ್ದಾರೆ. ತನ್ನ ಹೊಡಿಬಡಿ ಆಟದ ಮೂಲಕವೇ ಭಾರತ ಕ್ರಿಕೆಟ್​ನಲ್ಲಿ ಸಂಚಲನ ಮೂಡಿಸಿರುವ ವೈಭವ್ ಸೂರ್ಯವಂಶಿ, ಇದೀಗ ಒಂದು ವಿಷಯದಲ್ಲಿ ಕ್ರಿಕೆಟ್ ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ಮಹೇಂದ್ರ ಸಿಂಗ್ ಧೋನಿ ಅವರನ್ನೇ ಹಿಂದಿಕ್ಕಿದ್ದಾರೆ.

4 / 6
ವಾಸ್ತವವಾಗಿ ಗೂಗಲ್ ಟ್ರೆಂಡ್ಸ್ ಪ್ರಕಾರ, ವೈಭವ್ ಸೂರ್ಯವಂಶಿ 2025 ರಲ್ಲಿ ಅತಿ ಹೆಚ್ಚು ಹುಡುಕಲ್ಪಟ್ಟ ಭಾರತೀಯ ಕ್ರಿಕೆಟಿಗರಾಗಿದ್ದಾರೆ. ಅವರ ನಂತರ ಪ್ರಿಯಾಂಶ್ ಆರ್ಯ ಇದ್ದಾರೆ. ಅಭಿಷೇಕ್ ಶರ್ಮಾ ಮೂರನೇ ಸ್ಥಾನದಲ್ಲಿದ್ದಾರೆ. ಶೇಖ್ ರಶೀದ್ ನಾಲ್ಕನೇ ಸ್ಥಾನದಲ್ಲಿದ್ದರೆ, ಮಹಿಳಾ ಕ್ರಿಕೆಟರ್ ಜೆಮಿಮಾ ರೊಡ್ರಿಗಸ್ ಐದನೇ ಸ್ಥಾನದಲ್ಲಿದ್ದಾರೆ. ಅಚ್ಚರಿಯ ಸಂಗತಿಯೆಂದರೆ ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ಅವರ ಹೆಸರು ಈ ಪಟ್ಟಿಯಲ್ಲಿ ಟಾಪ್ -5 ರಲ್ಲಿಲ್ಲ.

5 / 6
ಮೇಲೆ ಹೇಳಿದಂತೆ ರಾಜಸ್ಥಾನ ಐಪಿಎಲ್ ಹರಾಜಿನಲ್ಲಿ ವೈಭವ್ ಅವರನ್ನು ಖರೀದಿಸಿದಾಗ ಅವರ ವಯಸ್ಸು ಕೇವಲ 13 ವರ್ಷವಾಗಿತ್ತು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಖರೀದಿಸಿದ ಅತ್ಯಂತ ಕಿರಿಯ ಕ್ರಿಕೆಟಿಗ ಎನಿಸಿಕೊಂಡಿದ್ದ ವೈಭವ್, ಇದರ ನಂತರ 14 ನೇ ವಯಸ್ಸಿನಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿ, ಐಪಿಎಲ್‌ಗೆ ಪಾದಾರ್ಪಣೆ ಮಾಡಿದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಂಡರು.

6 / 6
ನಂತರ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ಸಂಚಲನ ಮೂಡಿಸಿದ್ದ ವೈಭವ್, ಐಪಿಎಲ್‌ನಲ್ಲಿ ಅತಿವೇಗದ ಶತಕ ಸಿಡಿಸಿದ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದು ಐಪಿಎಲ್ ಇತಿಹಾಸದಲ್ಲಿ ಎರಡನೇ ವೇಗದ ಶತಕವೂ ಆಗಿದೆ. ಅಂದಿನಿಂದ, ವೈಭವ್ ಅವರ ಹೆಸರು ಸುದ್ದಿಯಲ್ಲಿದೆ.