
ಯೂತ್ ಕ್ರಿಕೆಟ್‌ನಲ್ಲಿ ವೈಭವ್ ಸೂರ್ಯವಂಶಿ (Vaibhav suryavanshi) ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ಪಾಕಿಸ್ತಾನದ ದಾಂಡಿಗ ಅಹಮದ್ ಶೆಹಝಾದ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಸೌತ್ ಆಫ್ರಿಕಾ ಅಂಡರ್-19 ತಂಡದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಕೇವಲ 74 ಎಸೆತಗಳಲ್ಲಿ 10 ಸಿಕ್ಸ್ ಹಾಗೂ 9 ಫೋರ್ ಗಳೊಂದಿಗೆ 127 ರನ್ ಬಾರಿಸಿದ್ದರು.

ಈ ಭರ್ಜರಿ ಶತಕದೊಂದಿಗೆ ಯೂತ್ ಕ್ರಿಕೆಟ್‌ನಲ್ಲಿ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ನಾಯಕ ಎಂಬ ಹೆಗ್ಗಳಿಕೆಯನ್ನು ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಪಾಕಿಸ್ತಾನದ ಅಹಮದ್ ಶೆಹಝಾದ್ ಹೆಸರಿನಲ್ಲಿತ್ತು.

2007 ರಲ್ಲಿ ಪಾಕಿಸ್ತಾನ್ ಅಂಡರ್-19 ತಂಡವನ್ನು ಮುನ್ನಡೆಸಿದ್ದ 15 ವರ್ಷದ ಅಹಮದ್ ಶೆಹಝಾದ್ ಇಂಗ್ಲೆಂಡ್ ವಿರುದ್ಧ 167 ರನ್ ಗಳ ಭರ್ಜರಿ ಇನಿಂಗ್ಸ್ ಆಡಿದ್ದರು. ಈ ಮೂಲಕ ಯೂತ್ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ಕ್ಯಾಪ್ಟನ್ ಎನಿಸಿಕೊಂಡಿದ್ದರು.

ಇದೀಗ ಈ ವಿಶ್ವ ದಾಖಲೆಯನ್ನು ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ. 14ನೇ ವಯಸ್ಸಿನಲ್ಲಿ ನಾಯಕನಾಗಿ ಕಣಕ್ಕಿಳಿದು ಭರ್ಜರಿ ಶತಕ ಸಿಡಿಸುವ ಮೂಲಕ ವೈಭವ್ ಯೂತ್ ಕ್ರಿಕೆಟ್‌ನಲ್ಲಿ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ಕಪ್ತಾನ ಎಂಬ ವಿಶ್ವ ದಾಖಲೆ ಬರೆದಿದ್ದಾರೆ.