AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಭವ್ ಆರ್ಭಟಕ್ಕೆ ದಾಖಲೆಗಳೇ ಧೂಳೀಪಟ..!

Vaibhav Suryavanshi Records: ವಿಜಯ ಹಝಾರೆ ಟೂರ್ನಿಯಲ್ಲಿ ನಡೆದ ಅರುಣಾಚಲ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ ಬಿಹಾರ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ 84 ಎಸೆತಗಳಲ್ಲಿ 15 ಸಿಕ್ಸ್ ಹಾಗೂ 16 ಫೋರ್​ಗಳೊಂದಿಗೆ 190 ರನ್ ಬಾರಿಸಿದ್ದಾರೆ. ಈ ಸಿಡಿಲಬ್ಬರದೊಂದಿಗೆ ವೈಭವ್ ವಿಶ್ವ ದಾಖಲೆಯೊಂದಿಗೆ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 25, 2025 | 7:10 AM

Share
ಕ್ರಿಕೆಟ್ ಅಂಗಳದಲ್ಲಿ ವೈಭವ್ ಸೂರ್ಯವಂಶಿಯ (Vaibhav Suryavanshi)  ಪರಾಕ್ರಮ ಮುಂದುವರೆದಿದೆ. ಈವರೆಗೆ ಟಿ20 ಕ್ರಿಕೆಟ್​ನಲ್ಲಿ ಅಬ್ಬರಿಸುತ್ತಿದ್ದ ವೈಭವ್ ಇದೀಗ ಏಕದಿನ ಟೂರ್ನಿಯಲ್ಲೂ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಸಿಡಿಲಬ್ಬರದೊಂದಿಗೆ ಹಲವು ದಾಖಲೆಗಳನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

1 / 6
ಅತಿ ಕಿರಿಯ ಶತಕಧಾರಿ: ಅರುಣಾಚಲ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ 190 ರನ್​ ಸಿಡಿಸುವ ಮೂಲಕ 14 ವರ್ಷದ ವೈಭವ್ ಸೂರ್ಯವಂಶಿ ಪುರುಷರ ಲಿಸ್ಟ್ ಎ (ಏಕದಿನ) ಕ್ರಿಕೆಟ್​ನಲ್ಲಿ ಸೆಂಚುರಿ ಬಾರಿಸಿದ ವಿಶ್ವದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಂಡಿದ್ದಾರೆ.

2 / 6
ಅತಿ ವೇಗದ 150 ರನ್: ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲಿ ಅರುಣಾಚಲ ಪ್ರದೇಶ್ ವಿರುದ್ಧ ಕೇವಲ 54 ಎಸೆತಗಳಲ್ಲಿ 150 ರನ್ ಪೂರೈಸಿ ಅತೀ ಕಡಿಮೆ ಎಸೆತದಲ್ಲಿ 150 ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಮೂಲಕ ಎಬಿ ಡಿವಿಲಿಯರ್ಸ್ (64 ಎಸೆತ) ಅವರ ಹೆಸರಲ್ಲಿದ್ದ ವಿಶ್ವ ದಾಖಲೆಯನ್ನು ಮುರಿದಿದ್ದಾರೆ.

3 / 6
4ನೇ ವೇಗದ ಶತಕ: ಈ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಕೇವಲ 36 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಈ ಮೂಲಕ ಅನ್​ಮೋಲ್ ಪ್ರೀತ್, ಕೋರೆ ಅ್ಯಂಡರ್ಸನ್ ಹಾಗೂ ಗ್ರಹಾಂ ರೋಸ್​ ಬಳಿಕ ಅತ್ಯಂತ ವೇಗದ ಲಿಸ್ಟ್ ಎ ಶತಕ ಬಾರಿಸಿದ ವಿಶ್ವದ ನಾಲ್ಕನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. 

4 / 6
2ನೇ ವೇಗದ ಸೆಂಚುರಿ: ಲಿಸ್ಟ್ ಎ ಕ್ರಿಕೆಟ್​ನಲ್ಲಿ ಅತೀ ಕಡಿಮೆ ಎಸೆತಗಳಲ್ಲಿ ಶತಕ ಬಾರಿಸಿದ ಎರಡನೇ ಭಾರತೀಯ ದಾಂಡಿಗ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ 35 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ ಅನ್​ಮೋಲ್ ಪ್ರೀತ್ ಸಿಂಗ್ ಮೊದಲ ಸ್ಥಾನದಲ್ಲಿದ್ದಾರೆ.

5 / 6
ಸಿಕ್ಸರ್‌ಗಳ ದಾಖಲೆ: ಅರುಣಾಚಲ ಪ್ರದೇಶ್ ವಿರುದ್ಧದ ಪಂದ್ಯದಲ್ಲಿ 15 ಸಿಕ್ಸ್ ಸಿಡಿಸುವ ಮೂಲಕ ವಿಜಯ ಹಝಾರೆ ಟೂರ್ನಿಯ ಪಂದ್ಯವೊಂದರ ಇನಿಂಗ್ಸ್​ನಲ್ಲಿ 15 ಸಿಕ್ಸ್ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನೂ ಕೂಡ ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ.

6 / 6
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್

ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ

ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ

ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು

ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?

ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ

ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ

ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ

ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್