- Kannada News Photo gallery Cricket photos vaibhav suryavanshi creates new history in u19 world cup 2026
ಮತ್ತೊಂದು ವಿಶ್ವ ದಾಖಲೆ ನಿರ್ಮಿಸಿದ ವೈಭವ್ ಸೂರ್ಯವಂಶಿ
Vaibhav Suryavanshi: ಬುಲವಾಯೊದಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ ಸೂಪರ್-6 ಪಂದ್ಯದಲ್ಲಿ ಅರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ 30 ಎಸೆತಗಳಲ್ಲಿ 4 ಭರ್ಜರಿ ಸಿಕ್ಸರ್ ಹಾಗೂ 4 ಫೋರ್ಗಳೊಂದಿಗೆ 52 ರನ್ ಬಾರಿಸಿದ್ದರು. ಈ ಭರ್ಜರಿ ಅರ್ಧಶತಕದೊಂದಿಗೆ ವೈಭವ್ ಸೂರ್ಯವಂಶಿ ವಿಶೇಷ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
Updated on: Jan 28, 2026 | 7:23 AM

ಯೂತ್ ಒಡಿಐ ಕ್ರಿಕೆಟ್ನಲ್ಲಿ ಅತೀ ವೇಗದ ಶತಕ ಸಿಡಿಸಿ ವಿಶ್ವ ದಾಖಲೆ ಬರೆದಿದ್ದ ವೈಭವ್ ಸೂರ್ಯವಂಶಿ (Vaibhav Suryavanshi) ಇದೀಗ ಮತ್ತೊಂದು ವರ್ಲ್ಡ್ ರೆಕಾರ್ಡ್ ನಿರ್ಮಿಸಿದ್ದಾರೆ. ಅದು ಕೂಡ ಅಂಡರ್-19 ವಿಶ್ವಕಪ್ನಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಎಂಬುದು ವಿಶೇಷ.

ಬುಲವಾಯೊದ ಕ್ವೀನ್ಸ್ ಪಾರ್ಕ್ ಮೈದಾನದಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ವೈಭವ್ ಸೂರ್ಯವಂಶಿ ಕೇವಲ 24 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು.

ಈ ಅರ್ಧಶತಕದೊಂದಿಗೆ ಅಂಡರ್-19 ವಿಶ್ವಕಪ್ನಲ್ಲಿ ಅತೀ ವೇಗದ ಹಾಫ್ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಕಿರಿಯರ ವಿಶ್ವಕಪ್ನಲ್ಲಿ ಅರ್ಧಶತಕ ಬಾರಿಸಿದಿ ಅತೀ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಅಫ್ಘಾನಿಸ್ತಾನದ ಶಾಹಿದುಲ್ಲಾ ಕಮಾಲ್ ಹೆಸರಿನಲ್ಲಿತ್ತು. 2014ರ ಅಂಡರ್ 19 ವಿಶ್ವಕಪ್ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅರ್ಧಶತಕ ಬಾರಿಸಿದಾಗ ಶಾಹಿದುಲ್ಲಾ ಕಮಾಲ್ ವಯಸ್ಸು 15 ವರ್ಷ, 19 ದಿನಗಳು. ಈ ಮೂಲಕ ಅಂಡರ್-19 ವಿಶ್ವಕಪ್ನಲ್ಲಿ ಹಾಫ್ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದರು.

ಇದೀಗ ಈ ದಾಖಲೆಯನ್ನು ವೈಭವ್ ಸೂರ್ಯವಂಶಿ ಮುರಿದಿದ್ದಾರೆ. ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ 52 ರನ್ ಸಿಡಿಸುವ ಮೂಲಕ 14 ವರ್ಷದ ವೈಭವ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಕಿರಿಯರ ವಿಶ್ವಕಪ್ ಟೂರ್ನಿಯಲ್ಲಿ ಹಾಫ್ ಸೆಂಚುರಿ ಬಾರಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
