AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಭವ್ ಅಬ್ಬರಕ್ಕೆ ಕಿಂಗ್ ಕೊಹ್ಲಿಯ ದಾಖಲೆ ಶೇಕಿಂಗ್..!

Vaibhav Suryavanshi Records: ವೈಭವ್ ಸೂರ್ಯವಂಶಿ ಟಿ೨೦ ಕ್ರಿಕೆಟ್‌ನಲ್ಲಿ ಈ ವರ್ಷ ಮೂರು ಶತಕ ಬಾರಿಸಿದ್ದಾರೆ. ಐಪಿಎಲ್ ನಲ್ಲಿ 35 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದ ವೈಭವ್, ರೈಸಿಂಗ್‌ ಸ್ಟಾರ್ಸ್ ಏಷ್ಯಾಕಪ್ ಟೂರ್ನಿಯಲ್ಲಿ ಕೇವಲ 32 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಇದೀಗ ಸೈಯ್ಯದ್ ಮುಷ್ತಾಕ್ ಅಲಿ ಟಿ೨೦ ಟೂರ್ನಿಯಲ್ಲಿ ಬಿಹಾರ ಪರ 58 ಎಸೆತಗಳಲ್ಲಿ ಶತಕ ಬಾರಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 03, 2025 | 7:53 AM

Share
ಟಿ20 ಫಾರ್ಮ್ಯಾಟ್ ನಲ್ಲಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ವೈಭವ್ ಸೂರ್ಯವಂಶಿ (Vaibhav Suryavanshi) ಮುಂದೆ ಭರ್ಜರಿ ದಾಖಲೆಯೊಂದಿದೆ. ಅದು ಸಹ ವಿರಾಟ್ ಕೊಹ್ಲಿಯ ಗ್ರೇಟೆಸ್ಟ್ ರೆಕಾರ್ಡ್. ಈ ದಾಖಲೆ ಮುರಿಯುವ ಹೊಸ್ತಿಲಲ್ಲಿದ್ದಾರೆ 14 ವರ್ಷದ ಯುವ ಎಡಗೈ ದಾಂಡಿಗ.

1 / 5
ಟಿ೨೦ ಕ್ರಿಕೆಟ್‌ನಲ್ಲಿ ಒಂದೇ ವರ್ಷ ಅತ್ಯಧಿಕ ಸೆಂಚುರಿ ಬಾರಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ವಿರಾಟ್ ಕೊಹ್ಲಿಯ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ ಐಪಿಎಲ್ 2016 ರಲ್ಲಿ ಬರೋಬ್ಬರಿ 4 ಸೆಂಚುರಿ ಸಿಡಿಸಿ ಈ ಭರ್ಜರಿ ದಾಖಲೆ ನಿರ್ಮಿಸಿದ್ದರು. ಈ ದಾಖಲೆ ಮುರಿಯಲು ವೈಭವ್ ಸೂರ್ಯವಂಶಿಗೆ ಉತ್ತಮ ಅವಕಾಶವಿದೆ.

2 / 5
ಐಪಿಎಲ್ 2025 ರಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ವೈಭವ್ ಸೂರ್ಯವಂಶಿ ಕೇವಲ 35 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿ ಇತಿಹಾಸ ನಿರ್ಮಿಸಿದ್ದರು. ಇದಾದ ಬಳಿಕ ರೈಸಿಂಗ್‌ ಸ್ಟಾರ್ಸ್ ಏಷ್ಯಾಕಪ್ ಟಿ೨೦ ಟೂರ್ನಿಯಲ್ಲಿ ಯುಎಇ ವಿರುದ್ಧ ಶರವೇಗದ ಶತಕ ಬಾರಿಸಿದ್ದರು. 

3 / 5
ಇದೀಗ ಸೈಯ್ಯದ್ ಮುಷ್ತಾಕ್ ಅಲಿ ಟಿ೨೦ ಟೂರ್ನಿಯಲ್ಲಿ ಮಹಾರಾಷ್ಟ್ರ ವಿರುದ್ಧ ಸೆಂಚುರಿ ಸಿಡಿಸಿದ್ದಾರೆ. ಈ ಮೂಲಕ 2025 ರಲ್ಲಿ ಒಟ್ಟು ಮೂರು ಶತಕ ಗಳಿಸಿದ್ದಾರೆ. ಇನ್ನೊಂದು ಸೆಂಚುರಿ ಬಾರಿಸಿದರೆ ವಿರಾಟ್ ಕೊಹ್ಲಿಯ ದಾಖಲೆಯನ್ನು ಸರಿಗಟ್ಟಬಹುದು.

4 / 5
ಇನ್ನು ವಿರಾಟ್ ಕೊಹ್ಲಿಯ ಭರ್ಜರಿ ದಾಖಲೆ ಮುರಿಯಲು ವೈಭವ್ ಎರಡು ಶತಕಗಳನ್ನು ಬಾರಿಸಲೇಬೇಕು. ಆದರೆ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಬಿಹಾರ ಪರ ಕಣಕ್ಕಿಳಿಯುತ್ತಿರುವ ವೈಭವ್ ಸೂರ್ಯವಂಶಿ ಮುಂದೆ ಇನ್ನು ಕೇವಲ ಮೂರು ಮ್ಯಾಚ್​ಗಳು ಮಾತ್ರ ಇದೆ. ಈ ಮೂರು ಪಂದ್ಯಗಳಲ್ಲಿ 2 ಶತಕ ಬಾರಿಸಿದರೆ ಟಿ೨೦ ಕ್ರಿಕೆಟ್ ಇತಿಹಾಸದಲ್ಲೇ ಒಂದೇ ವರ್ಷ ಅತ್ಯಧಿಕ ಸೆಂಚುರಿ ಬಾರಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ವೈಭವ್ ಸೂರ್ಯವಂಶಿ ಪಾಲಾಗಲಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ