ಕೈ ಕೊಟ್ಟ ಅದೃಷ್ಟ… ಡಕ್ ವೈಭವ್ ಸೂರ್ಯವಂಶಿ ಗೋಲ್ಡನ್ ಡಕ್..!
Australia U19 vs India U19: ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧದ ಯೂತ್ ಟೆಸ್ಟ್ನಲ್ಲಿ ಭಾರತ ಅಂಡರ್-19 ತಂಡ ಭರ್ಜರಿ ಜಯ ಸಾಧಿಸಿದೆ. ಮೆಕೆನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್ನಲ್ಲಿ 135 ರನ್ಗಳಿಸಿದರೆ, ಭಾ್ತ 171 ರನ್ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಆಸ್ಟ್ರೇಲಿಯಾ 116 ರನ್ಗಳಿಗೆ ಆಲೌಟ್ ಆಗಿದೆ. ಅದರಂತೆ 84 ರನ್ಗಳ ಗುರಿ ಬೆನ್ನತ್ತುವ ಮೂಲಕ ಭಾರತ ತಂಡ 7 ವಿಕೆಟ್ಗಳ ಜಯ ಸಾಧಿಸಿದೆ.
Updated on: Oct 08, 2025 | 12:53 PM

ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧದ ಯೂತ್ ಟೆಸ್ಟ್ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ವೈಭವ್ ಸೂರ್ಯವಂಶಿ ( Vaibhav Suryavanshi) ಬ್ಯಾಕ್ ಟು ಬ್ಯಾಕ್ ಇನಿಂಗ್ಸ್ಗಳಲ್ಲಿ ವಿಫಲರಾಗಿದ್ದಾರೆ. ಅದರಲ್ಲೂ ಇದೇ ಮೊದಲ ಬಾರಿಗೆ ಯುವ ದಾಂಡಿಗ ಟೆಸ್ಟ್ನಲ್ಲಿ ಶೂನ್ಯಕ್ಕೆ ಔಟಾಗಿದ್ದಾರೆ.

ವೈಭವ್ ಸೂರ್ಯವಂಶಿ ಅಂಡರ್-19 ವೃತ್ತಿಜೀವನದಲ್ಲಿ ಆಸ್ಟ್ರೇಲಿಯಾ ವಿರುದ್ಧ ಈವರೆಗೆ 4 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಈ ನಾಲ್ಕು ಪಂದ್ಯಗಳ ಮೂಲಕ ಕಲೆಹಾಕಿರುವುದು ಬರೋಬ್ಬರಿ 241 ರನ್ಗಳು. ಅಂದರೆ ಆಸೀಸ್ ಬೌಲರ್ಗಳ ವಿರುದ್ಧ 60ರ ಸರಾಸರಿಯಲ್ಲಿ ರನ್ ಪೇರಿಸಿದ್ದಾರೆ.

ಅದರಲ್ಲೂ ಆಸ್ಟ್ರೇಲಿಯಾ ಅಂಡರ್-19 ತಂಡದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದರು. ಬ್ರಿಸ್ಬೇನ್ನಲ್ಲಿ ನಡೆದ ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ 86 ಎಸೆತಗಳಲ್ಲಿ 8 ಸಿಕ್ಸ್ ಹಾಗೂ 9 ಫೋರ್ಗಳೊಂದಿಗೆ 113 ರನ್ ಬಾರಿಸಿ ಮಿಂಚಿದ್ದರು.

ಆದರೆ ದ್ವಿತೀಯ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದಿರುವ ವೈಭವ್ ಸೂರ್ಯವಂಶಿ ಮೊದಲ ಇನಿಂಗ್ಸ್ನಲ್ಲಿ ಕೇವಲ 20 ರನ್ಗಳಿಸಿ ಔಟಾಗಿದ್ದರು. ಇದೀಗ ದ್ವಿತೀಯ ಇನಿಂಗ್ಸ್ನಲ್ಲಿ ತಾನೆದುರಿಸಿದ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿ ಗೋಲ್ಡನ್ ಡಕ್ ಆಗಿದ್ದಾರೆ.

ವೈಭವ್ ಸೂರ್ಯವಂಶಿ ಅವರ ಈ ವೈಫಲ್ಯದ ಹೊರತಾಗಿಯೂ ಈ ಮ್ಯಾಚ್ನಲ್ಲಿ ಗೆಲುವು ದಾಖಲಿಸುವಲ್ಲಿ ಭಾರತ ಅಂಡರ್-19 ತಂಡ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್ನಲ್ಲಿ 135 ರನ್ಗಳಿಸಿದರೆ, ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ನಲ್ಲಿ 171 ರನ್ ಕಲೆಹಾಕಿತು. ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಆಸ್ಟ್ರೇಲಿಯಾ 116 ರನ್ಗಳಿಗೆ ಆಲೌಟ್ ಆಗಿದೆ. ಅದರಂತೆ 84 ರನ್ಗಳ ಗುರಿ ಪಡೆದ ಭಾರತ ತಂಡವು 3 ವಿಕೆಟ್ ನಷ್ಟಕ್ಕೆ ಗುರಿ ತಲುಪುವ ಮೂಲಕ 7 ವಿಕೆಟ್ಗಳ ಜಯ ಸಾಧಿಸಿದೆ.
