10 ಭರ್ಜರಿ ಸಿಕ್ಸ್, 13 ಫೋರ್​: ತೂಫಾನ್ ಸೆಂಚುರಿ ಸಿಡಿಸಿ ವಿಶ್ವ ದಾಖಲೆ ಬರೆದ ವೈಭವ್ ಸೂರ್ಯವಂಶಿ

Updated on: Jul 06, 2025 | 7:23 AM

England U19 vs India U19: ಇಂಗ್ಲೆಂಡ್ ಅಂಡರ್-19 ತಂಡದ ವಿರುದ್ಧದ 4ನೇ ಏಕದಿನ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ (143) ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದ ನೆರವಿನೊಂದಿಗೆ ಭಾರತ ಅಂಡರ್ 19 ತಂಡ 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 363 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ಅಂಡರ್ 19 ತಂಡ 308 ರನ್​ಗಳಿಸಿ ಆಲೌಟ್ ಆಗಿದೆ.

1 / 6
ಭಾರತದ ಯಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ (Vaibhav Suryavanshi) ಏಕದಿನ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ವಿಸ್ಫೋಟಕ ಸೆಂಚುರಿ ಸಿಡಿಸುವ ಮೂಲಕ. ವೋರ್ಸೆಸ್ಟರ್​ನಲ್ಲಿ ನಡೆದ ಇಂಗ್ಲೆಂಡ್ ಅಂಡರ್-19 ತಂಡದ ವಿರುದ್ಧದ ಪಂದ್ಯದಲ್ಲಿ ಭಾರತ ಅಂಡರ್-19 ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

2 / 6
ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ವೈಭವ್ ಆಂಗ್ಲ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದರು. ಪರಿಣಾಮ ಯುವ ಎಡಗೈ ದಾಂಡಿಗನ ಬ್ಯಾಟ್​ನಿಂದ ಕೇವಲ 52 ಎಸೆತಗಳಲ್ಲಿ ಶತಕ ಮೂಡಿಬಂತು. ಇದರೊಂದಿಗೆ ಯೂತ್ ಒಡಿಐ ಕ್ರಿಕೆಟ್​ನಲ್ಲಿ ಅತೀ ವೇಗದ ಶತಕ ಸಿಡಿಸಿದ ವಿಶ್ವ ದಾಖಲೆ ವೈಭವ್ ಪಾಲಾಯಿತು.

3 / 6
ಇದಕ್ಕೂ ಮುನ್ನ ಈ ದಾಖಲೆ ಪಾಕಿಸ್ತಾನದ ಕಮ್ರಾನ್ ಗುಲಾಮ್ ಹೆಸರಿನಲ್ಲಿತ್ತು. 2013 ರಲ್ಲಿ ಇಂಗ್ಲೆಂಡ್ ವಿರುದ್ಧ ಕಮ್ರಾನ್ ಕೇವಲ 53 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಈ ದಾಖಲೆ ಬರೆದಿದ್ದರು. ಇದೀಗ 52 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ ವೈಭವ್ ಸೂರ್ಯವಂಶಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

4 / 6
ಅಷ್ಟೇ ಅಲ್ಲದೆ ಯೂತ್ ಒಡಿಐ ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಕೂಡ ವೈಭವ್ ಸೂರ್ಯವಂಶಿ ಪಾಲಾಗಿದೆ. ಈ ಮೊದಲು ಈ ದಾಖಲೆ ಬಾಂಗ್ಲಾದೇಶ್ ತಂಡದ ನಜ್ಮುಲ್ ಹೊಸೈನ್ ಶಾಂತೊ ಹೆಸರಿನಲ್ಲಿತ್ತು.  2013 ರಲ್ಲಿ ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದಾಗ ನಜ್ಮುಲ್ ಹೊಸೈನ್ ಶಾಂತೊ ಅವರ ವಯಸ್ಸು 14 ವರ್ಷ 241 ದಿನಗಳು ಮಾತ್ರ.

5 / 6
ಇದೀಗ 14 ವರ್ಷ, 100 ದಿನಗಳ ವಯಸ್ಸಿನಲ್ಲಿ ವೈಭವ್ ಸೂರ್ಯವಂಶಿ ಶತಕ ಸಿಡಿಸಿದ್ದಾರೆ. ಈ ಮೂಲಕ ಯೂತ್ ಒಡಿಐ ಕ್ರಿಕೆಟ್​ನಲ್ಲಿ ಅತೀ ವೇಗದ ಸೆಂಚುರಿ ಸಿಡಿಸಿದ., ಅತ್ಯಂತ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆಗಳನ್ನು ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ವೈಭವ್ ಸೂರ್ಯವಂಶಿ ತಮ್ಮದಾಗಿಸಿಕೊಂಡಿದ್ದಾರೆ.

6 / 6
ಇನ್ನು ಈ ಪಂದ್ಯದಲ್ಲಿ 78 ಎಸೆತಗಳನ್ನು ಎದುರಿಸಿದ ವೈಭವ್ ಸೂರ್ಯವಂಶಿ 10 ಭರ್ಜರಿ ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ 143 ರನ್​ ಚಚ್ಚಿದರು. ಈ ಭರ್ಜರಿ ಶತಕದ ನೆರವಿನೊಂದಿಗೆ ಭಾರತ ಅಂಡರ್ 19 ತಂಡ 50 ಓವರ್​ಗಳಲ್ಲಿ 363 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ಅಂಡರ್-19 ತಂಡವು 308 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ-U19 ತಂಡವು 55 ರನ್​ಗಳ ಭರ್ಜರಿ ಜಯ ಸಾಧಿಸಿದೆ.

Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us