ಕೇವಲ ೨೪ ಎಸೆತಗಳಲ್ಲಿ ೧೦ ಸಿಕ್ಸ್ ಸಿಡಿಸಿದ ವೈಭವ್ ಸೂರ್ಯವಂಶಿ
South Africa U19 vs India U19, 2nd Youth ODI: ಸೌತ್ ಆಫ್ರಿಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭಾರತ ತಂಡವು ಭರ್ಜರಿ ಜಯ ಸಾಧಿಸಿದೆ. ಅದು ಕೂಡ ವೈಭವ್ ಸೂರ್ಯವಂಶಿಯ ಸಿಡಲಬ್ಬರದ ಬ್ಯಾಟಿಂಗ್ ನೆರವಿನೊಂದಿಗೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಕೇವಲ ೨೪ ಎಸೆತಗಳಲ್ಲಿ ೧೦ ಸಿಕ್ಸ್ ಸಿಡಿಸಿರುವುದು ವಿಶೇಷ.
Updated on: Jan 06, 2026 | 7:26 AM

ಭಾರತೀಯ ಕ್ರಿಕೆಟ್ನ ಹೊಸ ಸೆನ್ಸೇಷನ್ ವೈಭವ್ ಸೂರ್ಯವಂಶಿಯ (Vaibhav suryavanshi) ಸಿಡಿಲಬ್ಬರ ಮುಂದುವರೆದಿದೆ. ಈ ಬಾರಿ ಸಿಡಿದಿರುವುದು ಅಂಡರ್-19 ಏಕದಿನ ಪಂದ್ಯದಲ್ಲಿ ಎಂಬುದಷ್ಟೇ ವ್ಯತ್ಯಾಸ. ಅದು ಕೂಡ ಕೇವಲ 24 ಎಸೆತಗಳಲ್ಲಿ 10 ಸಿಕ್ಸರ್ ಸಿಡಿಸುವ ಮೂಲಕ ಎಂಬುದೇ ವಿಶೇಷ.

ಸೌತ್ ಆಫ್ರಿಕಾ ಅಂಡರ್-19 ತಂಡದ ವಿರುದ್ಧ ಯೂತ್ ಒಡಿಐ ಸರಣಿಯ ಎರಡನೇ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 49.3 ಓವರ್ಗಳಲ್ಲಿ 245 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್ನಿಂದಲೇ ಅಬ್ಬರಿಲಾರಂಭಿಸಿದ ಯುವ ದಾಂಡಿಗ 5 ಓವರ್ಗಳ ಒಳಗೆಯೇ 6 ಸಿಕ್ಸರ್ ಸಿಡಿಸಿದ್ದರು.

ಈ ಸಿಕ್ಸರ್ಗಳೊಂದಿಗೆ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದಾದ ಬಳಿಕ ಕೂಡ ಸಿಕ್ಸರ್ಗಳ ಸುರಿಮಳೆಗೈದ ವೈಭವ್ ಸೂರ್ಯವಂಶಿ ಕೇವಲ 24 ಎಸೆತಗಳಲ್ಲಿ 10 ಭರ್ಜರಿ ಸಿಕ್ಸ್ ಹಾಗೂ 1 ಆಕರ್ಷಕ ಫೋರ್ನೊಂದಿಗೆ 68 ರನ್ ಬಾರಿಸಿ ಔಟಾದರು.

ವೈಭವ್ ಸೂರ್ಯವಂಶಿಯ ಈ ಸಿಡಿಲಬ್ಬರದ ನೆರವಿನೊಂದಿಗೆ ಭಾರತ ತಂಡವು 8 ಓವರ್ಗಳಲ್ಲಿ 95 ರನ್ ಕಲೆಹಾಕಿತು. ಇದಾದ ಬಳಿಕ ಅಭಿಮನ್ಯು ಕುಂದು 42 ಎಸೆತಗಳಲ್ಲಿ 48 ರನ್ ಬಾರಿಸಿದರು. ಈ ಮೂಲಕ ಭಾರತ ತಂಡವು 23.2 ಓವರ್ಗಳಲ್ಲಿ 176 ರನ್ ಗಳಿಸಿತ್ತು. ಈ ವೇಳೆ ವೇಳೆ ಮಂದ ಬೆಳಕಿನ ಕಾರಣ ಪಂದ್ಯವನ್ನು ಕೆಲ ಕಾಲ ಸ್ಥಗಿತಗೊಳಿಸಲಾಯಿತು. ಅಷ್ಟೇ ಅಲ್ಲದೆ ಪಂದ್ಯದ ಫಲಿತಾಂಶ ನಿರ್ಣಯಕ್ಕಾಗಿ ಡಕ್ವರ್ತ್ ಲೂಯಿಸ್ ನಿಯಮದ ಮೊರೆ ಹೋಗಲಾಗಿದ್ದು, ಈ ವೇಳೆಗೆ ಭಾರತ ತಂಡವು 23.2 ಓವರ್ಗಳಲ್ಲಿ 176 ರನ್ಗಳಿಸಿ ನಿಗದಿತ ಗುರಿಗಿಂತ ಮುಂದಿದ್ದರಿಂದ ಟೀಮ್ ಇಂಡಿಯಾವನ್ನು 8 ವಿಕೆಟ್ಗಳ ವಿಜಯಿ ಎಂದು ಘೋಷಿಸಲಾಯಿತು.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




