AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ ೨೪ ಎಸೆತಗಳಲ್ಲಿ ೧೦ ಸಿಕ್ಸ್ ಸಿಡಿಸಿದ ವೈಭವ್ ಸೂರ್ಯವಂಶಿ

South Africa U19 vs India U19, 2nd Youth ODI: ಸೌತ್ ಆಫ್ರಿಕಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭಾರತ ತಂಡವು ಭರ್ಜರಿ ಜಯ ಸಾಧಿಸಿದೆ. ಅದು ಕೂಡ ವೈಭವ್ ಸೂರ್ಯವಂಶಿಯ ಸಿಡಲಬ್ಬರದ ಬ್ಯಾಟಿಂಗ್ ನೆರವಿನೊಂದಿಗೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಕೇವಲ ೨೪ ಎಸೆತಗಳಲ್ಲಿ ೧೦ ಸಿಕ್ಸ್ ಸಿಡಿಸಿರುವುದು ವಿಶೇಷ.

ಝಾಹಿರ್ ಯೂಸುಫ್
|

Updated on: Jan 06, 2026 | 7:26 AM

Share
ಭಾರತೀಯ ಕ್ರಿಕೆಟ್​ನ ಹೊಸ ಸೆನ್ಸೇಷನ್ ವೈಭವ್ ಸೂರ್ಯವಂಶಿಯ (Vaibhav suryavanshi) ಸಿಡಿಲಬ್ಬರ ಮುಂದುವರೆದಿದೆ. ಈ ಬಾರಿ ಸಿಡಿದಿರುವುದು ಅಂಡರ್-19 ಏಕದಿನ ಪಂದ್ಯದಲ್ಲಿ ಎಂಬುದಷ್ಟೇ ವ್ಯತ್ಯಾಸ. ಅದು ಕೂಡ ಕೇವಲ 24 ಎಸೆತಗಳಲ್ಲಿ 10 ಸಿಕ್ಸರ್​ ಸಿಡಿಸುವ ಮೂಲಕ ಎಂಬುದೇ ವಿಶೇಷ.

1 / 5
ಸೌತ್ ಆಫ್ರಿಕಾ ಅಂಡರ್-19 ತಂಡದ ವಿರುದ್ಧ ಯೂತ್ ಒಡಿಐ ಸರಣಿಯ ಎರಡನೇ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು 49.3 ಓವರ್​ಗಳಲ್ಲಿ 245 ರನ್​ ಕಲೆಹಾಕಿತು.

2 / 5
ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್​ನಿಂದಲೇ ಅಬ್ಬರಿಲಾರಂಭಿಸಿದ ಯುವ ದಾಂಡಿಗ 5 ಓವರ್​ಗಳ ಒಳಗೆಯೇ 6 ಸಿಕ್ಸರ್​ ಸಿಡಿಸಿದ್ದರು.

3 / 5
ಈ ಸಿಕ್ಸರ್​ಗಳೊಂದಿಗೆ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದಾದ ಬಳಿಕ ಕೂಡ ಸಿಕ್ಸರ್​ಗಳ ಸುರಿಮಳೆಗೈದ ವೈಭವ್ ಸೂರ್ಯವಂಶಿ ಕೇವಲ 24 ಎಸೆತಗಳಲ್ಲಿ 10 ಭರ್ಜರಿ ಸಿಕ್ಸ್​ ಹಾಗೂ 1 ಆಕರ್ಷಕ ಫೋರ್​​ನೊಂದಿಗೆ 68 ರನ್ ಬಾರಿಸಿ ಔಟಾದರು.

4 / 5
ವೈಭವ್ ಸೂರ್ಯವಂಶಿಯ ಈ ಸಿಡಿಲಬ್ಬರದ ನೆರವಿನೊಂದಿಗೆ ಭಾರತ ತಂಡವು 8 ಓವರ್​ಗಳಲ್ಲಿ 95 ರನ್ ಕಲೆಹಾಕಿತು. ಇದಾದ ಬಳಿಕ ಅಭಿಮನ್ಯು ಕುಂದು 42 ಎಸೆತಗಳಲ್ಲಿ 48 ರನ್ ಬಾರಿಸಿದರು. ಈ ಮೂಲಕ ಭಾರತ ತಂಡವು 23.2 ಓವರ್​ಗಳಲ್ಲಿ 176 ರನ್​ ಗಳಿಸಿತ್ತು. ಈ ವೇಳೆ ವೇಳೆ ಮಂದ ಬೆಳಕಿನ ಕಾರಣ ಪಂದ್ಯವನ್ನು ಕೆಲ ಕಾಲ ಸ್ಥಗಿತಗೊಳಿಸಲಾಯಿತು. ಅಷ್ಟೇ ಅಲ್ಲದೆ ಪಂದ್ಯದ ಫಲಿತಾಂಶ ನಿರ್ಣಯಕ್ಕಾಗಿ ಡಕ್​ವರ್ತ್ ಲೂಯಿಸ್ ನಿಯಮದ ಮೊರೆ ಹೋಗಲಾಗಿದ್ದು, ಈ ವೇಳೆಗೆ ಭಾರತ ತಂಡವು 23.2 ಓವರ್​ಗಳಲ್ಲಿ 176 ರನ್​ಗಳಿಸಿ ನಿಗದಿತ ಗುರಿಗಿಂತ ಮುಂದಿದ್ದರಿಂದ ಟೀಮ್ ಇಂಡಿಯಾವನ್ನು 8 ವಿಕೆಟ್​ಗಳ ವಿಜಯಿ ಎಂದು ಘೋಷಿಸಲಾಯಿತು.

5 / 5
Follow Us
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ

ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್

ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್

ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ

ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ

ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ

ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್

ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ

ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ

ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ