AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬರ ಸಿಡಿಲಬ್ಬರ… ವೈಭವ್ ಸೂರ್ಯವಂಶಿ ಶರವೇಗದ ಶತಕ

Vaibhav Suryavanshi Century: ವೈಭವ್ ಸೂರ್ಯವಂಶಿ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಕೇವಲ 35 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ದಾಖಲೆ ನಿರ್ಮಿಸಿದ್ದರು. ಇದಾದ ಬಳಿಕ ಭಾರತ ಎ ಪರ 32 ಎಸೆತಗಳಲ್ಲಿ ಶತಕ ಬಾರಿಸಿದ ಸಾಧನೆ ಮಾಡಿದ್ದರು. ಇದೀಗ ಸೈಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲೂ ಸೆಂಚುರಿ ಸಿಡಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 02, 2025 | 1:02 PM

Share
ಟಿ20 ಕ್ರಿಕೆಟ್​ನಲ್ಲಿ ವೈಭವ್ ಸೂರ್ಯವಂಶಿ (Vaibhav Suryavanshi) ಸಿಡಿಲಬ್ಬರ ಮುಂದುವರೆದಿದೆ. ಇತ್ತೀಚೆಗಷ್ಟೇ ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್ ಟೂರ್ನಿಯಲ್ಲಿ ಸೆಂಚುರಿ ಸಿಡಿಸಿದ್ದ ವೈಭವ್ ಇದೀಗ ಮತ್ತೊಂದು ಶತಕ ಬಾರಿಸಿದ್ದಾರೆ. ಈ ಬಾರಿ ಯುವ ದಾಂಡಿಗ ಶತಕ ಮೂಡಿಬಂದಿದ್ದು ದೇಶೀಯ ಅಂಗಳದಲ್ಲಿ ಎಂಬುದು ವಿಶೇಷ.

1 / 5
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಹಾರಾಷ್ಟ್ರ ವಿರುದ್ಧ ವೈಭವ್ ಸೂರ್ಯವಂಶಿ ಸ್ಫೋಟಕ ಸೆಂಚುರಿ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಮಹಾರಾಷ್ಟ್ರ ತಂಡದ ನಾಯಕ ಪೃಥ್ವಿ ಶಾ ಬೌಲಿಂಗ್ ಆಯ್ದುಕೊಂಡಿದ್ದರು.

2 / 5
ಅದರಂತೆ ಬಿಹಾರ ಪರ ಇನಿಂಗ್ಸ್ ಆರಂಭಿಸಿದ ವೈಭವ್ ಸೂರ್ಯವಂಶಿ ಆರಂಭದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅದರಂತೆ ಅರ್ಧಶತಕ ಪೂರೈಸಲು 34 ಎಸೆತಗಳನ್ನು ತೆಗೆದುಕೊಂಡಿದ್ದರು. ಆದರೆ ಹಾಫ್ ಸೆಂಚುರಿ ಪೂರ್ಣಗೊಂಡ ಬೆನ್ನಲ್ಲೇ ಯುವ ದಾಂಡಿಗನ ಅಬ್ಬರ ಶುರುವಾಗಿತ್ತು.

3 / 5
ಮಹಾರಾಷ್ಟ್ರ ತಂಡದ ಅನುಭವಿ ಬೌಲರ್​ಗಳನ್ನು ಮನಸೋ ಇಚ್ಚೆ ದಂಡಿಸಿದ ವೈಭವ್ ಸೂರ್ಯವಂಶಿ 58 ಎಸೆತಗಳಲ್ಲಿ ಶತಕ ಪೂರೈಸಿದರು. ಅಲ್ಲದೆ ಈ ಪಂದ್ಯದಲ್ಲಿ 61 ಎಸೆತಗಳನ್ನು ಎದುರಿಸಿದ ಯುವ ದಾಂಡಿಗ 7 ಭರ್ಜರಿ ಸಿಕ್ಸ್, 7 ಫೋರ್​ಗಳೊಂದಿಗೆ ಅಜೇಯ 108 ರನ್ ಬಾರಿಸಿದರು. ವೈಭವ್ ಸೂರ್ಯವಂಶಿ ಬಾರಿಸಿದ ಈ ಶತಕದ ನೆರವಿನೊಂದಿಗೆ ಬಿಹಾರ ತಂಡ 20 ಓವರ್​ಗಳಲ್ಲಿ 176 ರನ್ ಕಲೆಹಾಕಿದೆ.

4 / 5
ಇದಕ್ಕೂ ಮುನ್ನ ರೈಸಿಂಗ್ ಸ್ಟಾರ್ಸ್​ ಏಷ್ಯಾಕಪ್ ಟೂರ್ನಿಯಲ್ಲಿ ವೈಭವ್ ಸೂರ್ಯವಂಶಿ 32 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಯುಎಇ ವಿರುದ್ಧದ  ಈ ಪಂದ್ಯದಲ್ಲಿ ಕೇವಲ 42 ಎಸೆತಗಳನ್ನು ಎದುರಿಸಿದ ವೈಭವ್ ಅಂತಿಮವಾಗಿ 15 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 144 ರನ್ ಚಚ್ಚಿದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ವೈಭವ್ ಬ್ಯಾಟ್​ನಿಂದ ಸಿಡಿಲಬ್ಬರದ ಸೆಂಚುರಿ ಮೂಡಿಬಂದಿದೆ.

5 / 5
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?

ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ

ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ

ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!