6,6,6,6,6,6,6,6: ಟೆಸ್ಟ್​ನಲ್ಲೂ ಶರವೇಗದ ಶತಕ ಸಿಡಿಸಿದ ವೈಭವ್ ಸೂರ್ಯವಂಶಿ

Updated on: Oct 01, 2025 | 11:56 AM

Vaibhav Suryavanshi Century: ಬ್ರಿಸ್ಬೇನ್​ನಲ್ಲಿ ಭಾರತ ಅಂಡರ್-19 ಮತ್ತು ಆಸ್ಟ್ರೇಲಿಯಾ ಅಂಡರ್-19 ತಂಡಗಳ ನಡುವೆ ಯೂತ್ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಟೀಮ್ ಇಂಡಿಯಾದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ.

1 / 5
ಟೀಮ್ ಇಂಡಿಯಾದ ಯಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ (Vaibhav Suryavanshi) ಸಿಡಿಲಬ್ಬರ ಮುಂದುವರೆದಿದೆ. ಈ ಬಾರಿ ಸಿಡಿಲಬ್ಬರ ಕಂಡು ಬಂದಿರುವುದು ಆಸ್ಟ್ರೇಲಿಯಾ ಪಿಚ್​ನಲ್ಲಿ. ಬ್ರಿಸ್ಬೇನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಅಂಡರ್ 19 ವಿರುದ್ಧದ ಯೂತ್ ಟೆಸ್ಟ್​ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ವಿಸ್ಫೋಟಕ ಸೆಂಚುರಿ ಸಿಡಿಸಿದ್ದಾರೆ.

2 / 5
ಬ್ರಿಸ್ಬೇನ್​ನ ಹಿಯಾನ್ ಹೀಲಿ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪ್ರಥಮ ಇನಿಂಗ್ಸ್​ನಲ್ಲಿ 243 ರನ್​ಗಳಿಸಿ ಆಲೌಟ್ ಆಯಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಶುರು ಮಾಡಿದ ಭಾರತ ಅಂಡರ್ 19 ತಂಡಕ್ಕೆ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಆರಂಭ ಒದಗಿಸಿದ್ದರು.

3 / 5
ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಯುವ ದಾಂಡಿಗ ಮೈದಾನದ ಮೂಲೆ ಮೂಲೆಗೂ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಈ ಮೂಲಕ ವೈಭವ್ ಸೂರ್ಯವಂಶಿ ಕೇವಲ 78 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. ಈ ಶತಕದ ಬಳಿಕ ಕೂಡ ವೈಭವ್ ಆಸೀಸ್ ಬೌಲರ್​ಗಳ ಬೆಂಡೆತ್ತಿದರು.

4 / 5
ಅಂತಿಮವಾಗಿ 86 ಎಸೆತಗಳನ್ನು ಎದುರಿಸಿದ ವೈಭವ್ ಸೂರ್ಯವಂಶಿ 8 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 113 ರನ್​ ಬಾರಿಸಿ ವಿಕೆಟ್ ಒಪ್ಪಿಸಿದರು. ವೈಭವ್ ಅವರ ಈ ವೈಭೋವಪೇತ ಇನಿಂಗ್ಸ್​ನಿಂದಾಗಿ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ 300+ ರನ್​ಗಳಿಸಿ ಬ್ಯಾಟಿಂಗ್ ಮುಂದುವರೆಸಿದೆ.

5 / 5
ಇದಕ್ಕೂ ಮುನ್ನ ವೈಭವ್ ಸೂರ್ಯವಂಶಿ ಐಪಿಎಲ್​ನಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ 11 ಸಿಕ್ಸ್​ ಹಾಗೂ 7 ಫೋರ್​ಗಳೊಂದಿಗೆ 101 ರನ್ ಬಾರಿಸಿದ್ದರು. ಇದೀಗ ಯೂತ್ ಟೆಸ್ಟ್​ನಲ್ಲೂ ತನ್ನ ವಿಸ್ಫೋಟಕ ಬ್ಯಾಟಿಂಗ್​ನೊಂದಿಗೆ ಸಂಚಲನ ಸೃಷ್ಟಿಸಿದ್ದಾರೆ.

Published On - 11:55 am, Wed, 1 October 25

Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us