- Kannada News Photo gallery Cricket photos Vaibhav Suryavanshi Smashes Half Century in U19 Asia Cup 2025
ಬರೋಬ್ಬರಿ 226 ರನ್… ಮತ್ತೆ ಅಬ್ಬರಿಸಿದ ವೈಭವ್ ಸೂರ್ಯವಂಶಿ
Vaibhav Suryavanshi: ಭಾರತ ತಂಡದ 14 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿ ಕೇವಲ 3 ಇನಿಂಗ್ಸ್ಗಳ ಮೂಲಕ ಬರೋಬ್ಬರಿ 226 ರನ್ ಕಲೆಹಾಕಿದ್ದಾರೆ. ಅದು ಸಹ ಸ್ಫೋಟಕ ಸೆಂಚುರಿ ಹಾಗೂ ಸಿಡಿಲಬ್ಬರದ ಅರ್ಧಶತಕಗಳೊಂದಿಗೆ ಎಂಬುದು ವಿಶೇಷ. ಈ ಮೂಲಕ ಪ್ರಸ್ತುತ ನಡೆಯುತ್ತಿರುವ ಅಂಡರ್-19 ಏಷ್ಯಾಕಪ್ ಟೂರ್ನಿಯ ರನ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.
Updated on: Dec 16, 2025 | 11:55 AM

ಅಂಡರ್-19 ಏಷ್ಯಾಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ವೈಭವ್ ಸೂರ್ಯವಂಶಿಯ (Vaibhav Suryavanshi) ಸಿಡಿಲಬ್ಬರ ಮುಂದುವರೆದಿದೆ. ಯುಎಇ ವಿರುದ್ಧ ಸ್ಫೋಟಕ ಸೆಂಚುರಿ ಸಿಡಿಸಿದ್ದ ವೈಭವ್ ಇದೀಗ ಮಲೇಷ್ಯಾ ವಿರುದ್ಧ ಸಿಡಿಲಬ್ಬರದ ಅರ್ಧಶತಕ ಬಾರಿಸಿದ್ದಾರೆ.

ದುಬೈನ ಸೆವೆನ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟಾಸ್ ಗೆದ್ದ ಮಲೇಷ್ಯಾ ತಂಡ ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ತಂಡಕ್ಕೆ ವೈಭವ್ ಸೂರ್ಯವಂಶಿ ಬಿರುಸಿನ ಆರಂಭ ಒದಗಿಸಿದರು.

ಮೊದಲ ಓವರ್ನಿಂದಲೇ ಆಕ್ರಮಣಕಾರಿ ಬ್ಯಾಟಿಂಗ್ಗೆ ಒತ್ತು ನೀಡಿದ ವೈಭವ್ ಕೇವಲ 25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದರ ನಡುವೆ ಯುವ ದಾಂಡಿಗನ ಬ್ಯಾಟ್ನಿಂದ 3 ಭರ್ಜರಿ ಸಿಕ್ಸ್ ಹಾಗೂ 5 ಫೋರ್ಗಳು ಮೂಡಿಬಂದಿದ್ದವು. ಆದರೆ ಅರ್ಧಶತಕದ ಬೆನ್ನಲ್ಲೇ ಬಿರುಸಿನ ಹೊಡೆತಕ್ಕೆ ಮುಂದಾಗಿ ಕ್ಯಾಚ್ ನೀಡಿ ಔಟಾದರು.

ಇದಕ್ಕೂ ಮುನ್ನ ಯುಎಇ ವಿರುದ್ಧ ನಡೆದ ಪಂದ್ಯದಲ್ಲಿ ವೈಭವ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪಂದ್ಯದಲ್ಲಿ 95 ಎಸೆತಗಳನ್ನು ಎದುರಿಸಿದ್ದ ಯುವ ಎಡಗೈ ದಾಂಡಿಗ 14 ಸಿಕ್ಸ್ ಹಾಗೂ 9 ಫೋರ್ಗಳೊಂದಿಗೆ 171 ರನ್ ಬಾರಿಸಿದ್ದರು. ಈ ಮೂಲಕ ಅಂಡರ್-19 ಪಂದ್ಯದಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ವಿಶ್ವ ದಾಖಲೆ ನಿರ್ಮಿಸಿದ್ದರು.

ಆದರೆ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಕೇವಲ 5 ರನ್ಗಳಿಸಿ ನಿರಾಸೆ ಮೂಡಿಸಿದ್ದರು. ಇದೀಗ ಮಲೇಷ್ಯಾ ವಿರುದ್ಧ ಸ್ಫೋಟಕ ಹಾಫ್ ಸೆಂಚುರಿ ಸಿಡಿಸುವ ಮೂಲಕ ವೈಭವ್ ಮತ್ತೆ ಟ್ರ್ಯಾಕ್ಗೆ ಮರಳಿದ್ದಾರೆ. ಈ ಮೂಲಕ 3 ಇನಿಂಗ್ಸ್ಗಳಿಂದ ಒಟ್ಟು 226 ರನ್ ಕಲೆಹಾಕಿದ್ದಾರೆ.
