AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 15 ಸಿಕ್ಸ್… ವಿಶ್ವ ದಾಖಲೆಯ ಶತಕ ಸಿಡಿಸಿದ ವೈಭವ್ ಸೂರ್ಯವಂಶಿ

Vaibhav Suryavanshi Century: ವೈಭವ್ ಸೂರ್ಯವಂಶಿ ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಕೇವಲ 35 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ದಾಖಲೆ ನಿರ್ಮಿಸಿದ್ದರು. ಇದಾದ ಬಳಿಕ ಭಾರತ ಎ ಪರ 32 ಎಸೆತಗಳಲ್ಲಿ ಶತಕ ಬಾರಿಸಿದ ಸಾಧನೆ ಮಾಡಿದ್ದರು. ಇದೀಗ ವಿಜಯ ಹಝಾರೆ ಟೂರ್ನಿಯಲ್ಲೂ ಸೆಂಚುರಿ ಸಿಡಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 24, 2025 | 10:57 AM

Share
ರಾಂಚಿಯಲ್ಲಿ ನಡೆಯುತ್ತಿರುವ ವಿಜಯ ಹಝಾರೆ ಟೂರ್ನಿಯ ಪ್ಲೇಟ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ (Vaibhav Suryavanshi) ಭರ್ಜರಿ ಶತಕ ಬಾರಿಸಿದ್ದಾರೆ. ಈ ಸೆಂಚುರಿಯೊಂದಿಗೆ 14 ವರ್ಷದ ಯುವ ದಾಂಡಿಗ ಏಕದಿನ ಟೂರ್ನಿಯಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

1 / 5
ಅರುಣಾಚಲ ಪ್ರದೇಶ್ ವಿರುದ್ಧ ಈ ಪಂದ್ಯದಲ್ಲಿ ಟಾಸ್ ಗೆದ್ದ ಬಿಹಾರ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್​ನಿಂದಲೇ ಅರುಣಾಚಲ ಪ್ರದೇಶ್ ಬೌಲರ್​ಗಳ ಬೆಂಡೆತ್ತಿದ ವೈಭವ್ ಕೇವಲ 36 ಎಸೆತಗಳಲ್ಲಿ ಶತಕ ಪೂರೈಸಿದರು.

2 / 5
ಶತಕದ ಬಳಿಕ ಕೂಡ ಆಕ್ರಮಣಕಾರಿ ಬ್ಯಾಟಿಂಗ್ ಮುಂದುವರೆಸಿದ ವೈಭವ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್-ಫೋರ್​ಗಳ ಸುರಿಮಳೆಗೈದರು. ಪರಿಣಾಮ ಯುವ ದಾಂಡಿಗನ ಬ್ಯಾಟ್​ನಿಂದ ಕೇವಲ 54 ಎಸೆತಗಳಲ್ಲಿ 150 ರನ್​ಗಳು ಮೂಡಿಬಂತು. ಈ ಮೂಲಕ ಲಿಸ್ಟ್​ ಎ ಕ್ರಿಕೆಟ್​ ಅತೀ ವೇಗವಾಗಿ 150 ರನ್ ಸಿಡಿಸಿದ ಬ್ಯಾಟರ್ ಎನಿಸಿಕೊಂಡರು.

3 / 5
ಇದಕ್ಕೂ ಮುನ್ನ ಏಕದಿನ ಕ್ರಿಕೆಟ್​ನಲ್ಲಿ (ಲಿಸ್ಟ್ ಎ) ಅತೀ ವೇಗವಾಗಿ 150 ರನ್​ಗಳನ್ನು ಸಿಡಿಸಿದ ವಿಶ್ವ ದಾಖಲೆ ಸೌತ್ ಆಫ್ರಿಕಾದ ಎಬಿ ಡಿವಿಲಿಯರ್ಸ್ ಹೆಸರಿನಲ್ಲಿತ್ತು. ಎಬಿಡಿ 2015 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 64 ಎಸೆತಗಳಲ್ಲಿ 150 ರನ್ ಪೂರೈಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದರು.

4 / 5
ಇದೀಗ ವೈಭವ್ ಸೂರ್ಯವಂಶಿ ಕೇವಲ 54 ಎಸೆತಗಳಲ್ಲಿ 150 ರನ್​ ಸಿಡಿಸಿದ್ದಾರೆ. ಅಂತಿಮವಾಗಿ 84 ಎಸೆತಗಳನ್ನು ಎದುರಿಸಿದ ವೈಭವ್ 15 ಸಿಕ್ಸ್ ಹಾಗೂ 16 ಫೋರ್​ಗಳೊಂದಿಗೆ 190 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಕೇವಲ 10 ರನ್​ಗಳಿಂದ ದ್ವಿಶತಕ ಸಿಡಿಸುವ ಅವಕಾಶವನ್ನು ಕೈಚೆಲ್ಲಿಕೊಂಡರು. ವೈಭವ್ ಸೂರ್ಯವಂಶಿಯ ಈ ಆರ್ಭಟದ ನೆರವಿನೊಂದಿಗೆ ಬಿಹಾರ ತಂಡವು 28 ಓವರ್​ಗಳ ಮುಕ್ತಾಯದ ವೇಳೆಗೆ 2 ವಿಕೆಟ್ ಕಳೆದುಕೊಂಡು 267 ರನ್ ಕಲೆಹಾಕಿದೆ.

5 / 5