AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

89 ಬ್ಯಾಟರ್​ಗಳಲ್ಲಿ ವೈಭವ್ ಸೂರ್ಯವಂಶಿ ನಂಬರ್ 1

Vaibhav Suryavanshi Stats: ರೈಸಿಂಗ್ ಸ್ಟಾರ್ ಏಷ್ಯಾ ಕಪ್‌ ಟಿ20 ಟೂರ್ನಿಯ ಲೀಗ್ ಹಂತದಲ್ಲಿ ಒಟ್ಟು 89 ಆಟಗಾರರು ಬ್ಯಾಟಿಂಗ್ ಮಾಡಿದ್ದಾರೆ. ಈ 89 ಆಟಗಾರರಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವುದು ವೈಭವ್ ಸೂರ್ಯವಂಶಿ. ಅದು ಕೂಡ ಅತ್ಯುತ್ತಮ ಸ್ಟ್ರೈಕ್​ನೊಂದಿಗೆ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on:Nov 20, 2025 | 5:57 PM

Share
ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಗಿದಿವೆ. ಈ ಹಂತದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಬ್ಯಾಟರ್ 14 ವರ್ಷದ ವೈಭವ್ ಸೂರ್ಯವಂಶಿ (Vaibhav Suryavanshi). ಅಂದರೆ ಮೊದಲ ಸುತ್ತಿನಲ್ಲಿ ಒಟ್ಟು 89 ಬ್ಯಾಟರ್​ಗಳು ಕಣಕ್ಕಿಳಿದಿದ್ದಾರೆ. ಇವರಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ವೈಭವ್ 3 ವಿಭಾಗದಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

1 / 5
ಲೀಗ್ ಹಂತದ ಮೂರು ಪಂದ್ಯಗಳಲ್ಲಿ ಅತ್ಯಧಿಕ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್​ ಬೀಸಿರುವ ಬ್ಯಾಟರ್​ಗಳ ಪಟ್ಟಿಯಲ್ಲಿ ವೈಭವ್ ಸೂರ್ಯವಂಶಿ ಮೊದಲ ಸ್ಥಾನದಲ್ಲಿದ್ದಾರೆ. ಮೊದಲ ಪಂದ್ಯದಲ್ಲಿ ಸೆಂಚುರಿ ಸಿಡಿಸುವ ಮೂಲಕ ವೈಭವ್ ಕಳೆದ ಮೂರು ಮ್ಯಾಚ್​ಗಳಲ್ಲಿ 242.16 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ್ದಾರೆ. ಈ ಮೂಲಕ ರೈಸಿಂಗ್ ಸ್ಟಾರ್ಸ್ ಟೂರ್ನಿಯಲ್ಲಿ ಅತ್ಯಧಿಕ ಸ್ಟ್ರೈಕ್ ಹೊಂದಿರುವ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 5
ಅಷ್ಟೇ ಅಲ್ಲದೆ ಕಳೆದ ಮೂರು ಮ್ಯಾಚ್​ಗಳಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲೂ ವೈಭವ್ ಸೂರ್ಯವಂಶಿ ಅಗ್ರಸ್ಥಾನದಲ್ಲಿದ್ದಾರೆ. ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ಈವರೆಗೆ 18 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಇನ್ನು ದ್ವಿತೀಯ ಸ್ಥಾನದಲ್ಲಿ 16 ಸಿಕ್ಸ್ ಬಾರಿಸಿರುವ ಮಾಝ್ ಸದಾಖತ್ ಇದ್ದಾರೆ.

3 / 5
ಹಾಗೆಯೇ ರೈಸಿಂಗ್ ಸೂಪರ್ ಸ್ಟಾರ್ಸ್ ಏಷ್ಯಾಕಪ್ ಟೂರ್ನಿಯ ಪಂದ್ಯದಲ್ಲಿ ಗರಿಷ್ಠ ಸ್ಕೋರ್ ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲೂ ವೈಭವ್ ಸೂರ್ಯವಂಶಿ ಮುಂಚೂಣಿಯಲ್ಲಿದ್ದಾರೆ. ಯುಎಇ ವಿರುದ್ಧದ ಪಂದ್ಯದಲ್ಲಿ ವೈಭವ್ ಕೇವಲ 42 ಎಸೆತಗಳಲ್ಲಿ 15 ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 144 ರನ್ ಬಾರಿಸಿದ್ದಾರೆ. ಈ ಮೂಲಕ ಪ್ರಸ್ತುತ ಟೂರ್ನಿಯಲ್ಲಿ ಗರಿಷ್ಠ ಸ್ಕೋರ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಇದಾಗ್ಯೂ ಅತ್ಯಧಿಕ ರನ್​ಗಳಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ವೈಭವ್ ಸೂರ್ಯವಂಶಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಪಾಕಿಸ್ತಾನದ ಮಾಝ್ ಸದಾಖತ್ (212) ಮೊದಲ ಸ್ತಾನದಲ್ಲಿದ್ದು, ಮೂರು ಪಂದ್ಯಗಳಲ್ಲಿ 67 ರ ಸರಾಸರಿಯಲ್ಲಿ 201 ರನ್ ಗಳಿಸಿರುವ ವೈಭವ್ 2ನೇ ಸ್ಥಾನ ಅಲಂಕರಿಸಿದ್ದಾರೆ. ಇನ್ನು ಸೆಮಿಫೈನಲ್ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಈ ವಿಭಾಗದಲ್ಲೂ ವೈಭವ್ ಸೂರ್ಯವಂಶಿಗೆ ಅಗ್ರಸ್ಥಾನಕ್ಕೇರಬಹುದು.

5 / 5

Published On - 5:56 pm, Thu, 20 November 25

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್

ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ

ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ

ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?