- Kannada News Photo gallery Cricket photos Vaibhav Suryavanshi: Youngest U19 Captain Breaks World Record with Clean Sweep
IND vs SA: 13 ವರ್ಷಗಳ ಹಳೆಯ ವಿಶ್ವ ದಾಖಲೆ ಮುರಿದ ವೈಭವ್ ಸೂರ್ಯವಂಶಿ
Vaibhav Suryavanshi: ವೈಭವ್ ಸೂರ್ಯವಂಶಿ ಅಂಡರ್-19 ತಂಡವನ್ನು ಮುನ್ನಡೆಸಿದ ವಿಶ್ವದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ನಿರ್ಮಿಸಿದ್ದರು. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದು ಮತ್ತೊಂದು ವಿಶ್ವ ದಾಖಲೆ ಬರೆದಿದ್ದಾರೆ. ಕೇವಲ 14ನೇ ವಯಸ್ಸಿನಲ್ಲಿ ಸರಣಿ ಕ್ಲೀನ್ ಸ್ವೀಪ್ ಮಾಡಿದ ವೈಭವ್, ಉನ್ಮುಕ್ತ್ ಚಂದ್ ಅವರ 13 ವರ್ಷಗಳ ದಾಖಲೆಯನ್ನು ಮುರಿದು ಇತಿಹಾಸ ಸೃಷ್ಟಿಸಿದ್ದಾರೆ.
Updated on: Jan 07, 2026 | 9:39 PM

ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಏಕದಿನ ಪಂದ್ಯದಲ್ಲಿಯೇ ವೈಭವ್ ಸೂರ್ಯವಂಶಿ ತಂಡವನ್ನು ಮುನ್ನಡೆಸುವ ಮೂಲಕ ಅಂಡರ್-19 ತಂಡವನ್ನು ಮುನ್ನಡೆಸಿದ ವಿಶ್ವದ ಅತ್ಯಂತ ಕಿರಿಯ ನಾಯಕ ಎಂಬ ವಿಶ್ವ ದಾಖಲೆ ಸೃಷ್ಟಿಸಿದ್ದ ವೈಭವ್ ಸೂರ್ಯವಂಶಿ, ಇದೀಗ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದು ಮತ್ತೊಂದು ವಿಶ್ವದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ.

ಬೆನೋನಿಯ ವಿಲ್ಲೋಮೂರ್ ಪಾರ್ಕ್‌ನಲ್ಲಿ ನಡೆದ ಮೂರನೇ ಮತ್ತು ಅಂತಿಮ ಪಂದ್ಯದಲ್ಲಿ ಭಾರತ ತಂಡ ಆತಿಥೇಯ ದಕ್ಷಿಣ ಆಪ್ರಿಕಾ ತಂಡವನ್ನು 233 ರನ್ಗಳಿಂದ ಏಕಪಕ್ಷೀಯವಾಗಿ ಸೋಲಿಸಿತು. ಇದರೊಂದಿಗೆ ಸರಣಿಯನ್ನು 3-0 ಅಂತರದಿಂದ ವಶಪಡಿಸಿಕೊಂಡಿತು. ಈ ಗೆಲುವಿನೊಂದಿಗೆ ವೈಭವ್ ಸೂರ್ಯವಂಶಿ 13 ವರ್ಷಗಳ ಹಳೆಯ ವಿಶ್ವದಾಖಲೆಯನ್ನು ಪುಡಿಗಟ್ಟಿದರು.

ವಾಸ್ತವವಾಗಿ ಕೇವಲ 14ನೇ ವಯಸ್ಸಿನಲ್ಲೇ ಭಾರತ ಅಂಡರ್ 19 ತಂಡವನ್ನು ಮುನ್ನಡೆಸಿದ್ದ ವೈಭವ್, ಸರಣಿಯನ್ನು ಕ್ಲೀನ್ ಸ್ವೀಪ್ ಮೂಡುವ ಮೂಲಕ ಈ ಸಾಧನೆ ಮಾಡಿದ ವಿಶ್ವದ ಅತಿ ಕಿರಿಯ ನಾಯಕ ಎಂಬ ವಿಶ್ವದಾಖಲೆಯನ್ನು ನಿರ್ಮಿಸಿದ್ದಾರೆ. ವೈಭವ್ಗೂ ಮುನ್ನ13 ವರ್ಷಗಳ ಹಿಂದೆ 2012 ರಲ್ಲಿ ಭಾರತದವರೇ ಆಗಿದ್ದ ಉನ್ಮುಕ್ತ್ ಚಂದ್ ಈ ದಾಖಲೆ ನಿರ್ಮಿಸಿದ್ದರು.

2012 ರಲ್ಲಿ ಭಾರತದ 19 ವರ್ಷದೊಳಗಿನವರ ನಾಯಕರಾಗಿದ್ದ ಉನ್ಮುಕ್ತ್ ಚಂದ್, ಆಸ್ಟ್ರೇಲಿಯಾ 19 ವರ್ಷದೊಳಗಿನವರ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ್ದರು. ಅಂದರೆ, ಉನ್ಮುಕ್ತ್ ನಾಯಕತ್ವದಲ್ಲಿ ಭಾರತ ಅಂಡರ್ 19 ತಂಡ ಆ ಸರಣಿಯನ್ನು 5-0 ಅಂತರದಿಂದ ಗೆದ್ದುಕೊಂಡಿತ್ತು.

2012 ರಲ್ಲಿ ಆಸ್ಟ್ರೇಲಿಯಾ ಅಂಡರ್-19 ವಿರುದ್ಧ ಭಾರತ ತಂಡ 5-0 ಅಂತರದಿಂದ ಏಕದಿನ ಸರಣಿ ಗೆದ್ದುಕೊಂಡಾಗ ಉನ್ಮುಕ್ತ್ ಚಂದ್ ಅವರಿಗೆ 17 ವರ್ಷ ವಯಸ್ಸಾಗಿತ್ತು. ಈ ಮೂಲಕ ಅಂಡರ್-19 ಒಡಿಐ ದ್ವಿಪಕ್ಷೀಯ ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧಿಸಿದ ಅತ್ಯಂತ ಕಿರಿಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದರೆ ಈಗ, ವೈಭವ್ ಸೂರ್ಯವಂಶಿ ಉನ್ಮುಕ್ತ್ ಚಂದ್ ಅವರ ದಾಖಲೆಯನ್ನು ಮುರಿದಿದ್ದಾರೆ.
