AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ವಿಕೆಟ್ ಬಳಿಕ ಈಗ 5 ವಿಕೆಟ್; ವೈಷ್ಣವಿ ಶರ್ಮಾ ಹೆಸರಿಗೆ ನೂತನ ದಾಖಲೆ

ವೈಷ್ಣವಿ ಶರ್ಮಾ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಮೂರನೇ ಪಂದ್ಯದಲ್ಲಿ ಕೇವಲ 39 ರನ್‌ ನೀಡಿ ಐದು ವಿಕೆಟ್ ಕಬಳಿಸುವ ಮೂಲಕ ಭಾರತಕ್ಕೆ ಮೇಲುಗೈ ತಂದುಕೊಟ್ಟರು. ಈ ಮೂಲಕ ವೈಷ್ಣವಿ ಭಾರತದ ಪರ ಏಕದಿನದಲ್ಲಿ ಅತಿ ಕಡಿಮೆ ವಯಸ್ಸಿನಲ್ಲಿ ಐದು ವಿಕೆಟ್ ಪಡೆದ ಎರಡನೇ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದಾರೆ. ಅವರ ಸ್ಪಿನ್ ಜಾದೂ ಎದುರಾಳಿ ಬ್ಯಾಟರ್‌ಗಳನ್ನು ಕಟ್ಟಿಹಾಕಿತು.

ಪೃಥ್ವಿಶಂಕರ
|

Updated on: Oct 28, 2026 | 5:31 PM

Share
ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾದ ಯುವ ಎಡಗೈ ಸ್ಪಿನ್ನರ್ ವೈಷ್ಣವಿ ಶರ್ಮಾ ಅವರ ಅದ್ಭುತ ಪ್ರದರ್ಶನ ಮುಂದುವರಿದಿದೆ. ವಡೋದರಾದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ವೈಷ್ಣವಿ ತಮ್ಮ ಸ್ಪಿನ್ ಜಾದೂ ಮೂಲಕ ಜಿಂಬಾಬ್ವೆ ತಂಡದ ಬ್ಯಾಟರ್‌ಗಳನ್ನು ಕಾಡಿದರು. ಕೇವಲ 39 ರನ್ ನೀಡಿ ಐದು ವಿಕೆಟ್ ಕಬಳಿಸುವ ಮೂಲಕ ಎದುರಾಳಿ ತಂಡದ ಅರ್ಧದಷ್ಟು ಆಟಗಾರ್ತಿಯರನ್ನು ಪೆವಿಲಿಯನ್‌ಗೆ ಕಳುಹಿಸಿದರು(PC-BCCI Women x).

1 / 5
ವೈಷ್ಣವಿ ಅವರ ಪರಿಣಾಮಕಾರಿ ಬೌಲಿಂಗ್ ನೆರವಿನಿಂದ ಜಿಂಬಾಬ್ವೆ ಮಹಿಳಾ ತಂಡ 39.5 ಓವರ್‌ಗಳಲ್ಲಿ ಕೇವಲ 131 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಭಾರತ ತಂಡಕ್ಕೆ ಪಂದ್ಯದಲ್ಲಿ ಮೇಲುಗೈ ಸಾಧಿಸಲು ಉತ್ತಮ ಅವಕಾಶ ಲಭಿಸಿದೆ.ಆರಂಭದಿಂದಲೇ ವೈಷ್ಣವಿ ಶರ್ಮಾ ಎದುರಾಳಿ ತಂಡದ ಮೇಲೆ ಒತ್ತಡ ಹೇರಿದರು. ತಮ್ಮ ಸ್ಪಿನ್ ಮೋಡಿಯ ಮೂಲಕ ಜಿಂಬಾಬ್ವೆ ಬ್ಯಾಟರ್‌ಗಳನ್ನು ಪೆವಿಲಿಯನ್‌ಗೆ ಅಟ್ಟಿದರು(PC-PTI).

2 / 5
ಮೊದಲು ಬಿಲವ್ಡ್ ಬಿಜಾ ಅವರನ್ನು ಔಟ್ ಮಾಡಿದರು. ಬಳಿಕ 16ನೇ ಓವರ್‌ನಲ್ಲಿ ಮುಬಾಚಿಕ್ವಾ ಅವರನ್ನು ಸ್ಟಂಪ್ ಔಟ್ ಮಾಡಿಸಿ ಮತ್ತೊಂದು ಯಶಸ್ಸು ಸಾಧಿಸಿದರು. ಇದಾದ ನಂತರ 28ನೇ ಓವರ್‌ನಲ್ಲಿ ಧುರುರು, 30ನೇ ಓವರ್‌ನಲ್ಲಿ ಮಾವುಂಗಾ ಹಾಗೂ 34ನೇ ಓವರ್‌ನಲ್ಲಿ ಗ್ವಾಂಜುರಾ ಅವರನ್ನು ಔಟ್ ಮಾಡುವ ಮೂಲಕ ತಮ್ಮ ಐದು ವಿಕೆಟ್‌ಗಳ ಸಾಧನೆಯನ್ನು ಪೂರ್ಣಗೊಳಿಸಿದರು(PC-PTI).

3 / 5
ಈ ಮೂಲಕ ವೈಷ್ಣವಿ ಭಾರತದ ಪರ ಏಕದಿನ ಸರಣಿಯಲ್ಲಿ ಅತಿ ಕಡಿಮೆ ವಯಸ್ಸಿಯನಲ್ಲಿ ಐದು ವಿಕೆಟ್ ಪಡೆದ ಎರಡನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ವೈಷ್ಣವಿ 20 ವರ್ಷ 314 ದಿನಗಳಲ್ಲಿ ಈ ಸಾಧನೆ ಮಾಡಿದರೆ, ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ದೀಪ್ತಿ ಶರ್ಮಾ 18 ವರ್ಷ 179 ದಿನಗಳಲ್ಲಿ ಈ ಸಾಧನೆ ಮಾಡಿದ್ದರು(PC-PTI).

4 / 5
10 ಓವರ್‌ಗಳಲ್ಲಿ ಕೇವಲ 39 ರನ್ ನೀಡಿ ಐದು ವಿಕೆಟ್ ಪಡೆದ ವೈಷ್ಣವಿ, ಜಿಂಬಾಬ್ವೆ ತಂಡದ ಬ್ಯಾಟಿಂಗ್ ಬೆನ್ನೆಲುಬನ್ನೇ ಮುರಿದರು. ಈ ಸರಣಿಯ ಹಿಂದಿನ ಪಂದ್ಯದಲ್ಲೂ ವೈಷ್ಣವಿ ನಾಲ್ಕು ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ ಸತತ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ತಮ್ಮ ಬೌಲಿಂಗ್ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ(PC-BCCI Women x).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ವಿಜಯೇಂದ್ರ-ಸಿದ್ದರಾಮಯ್ಯ

ಯಾವ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದ ಯತೀಂದ್ರ
ಯಾವ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದ ಯತೀಂದ್ರ
ಬತ್ತದ ಹುಲ್ಲಿಗೆ ಹಚ್ಚಿದ ಬೆಂಕಿಗೆ ಉರಿದು ಬೂದಿಯಾಯ್ತು 20ಕ್ಕೂ ಹೆಚ್ಚು ಪಂಪ್

ಬೆಂಗಳೂರು ಕ್ಲೀನಿಂಗ್​ಗೆ ಹೊಸ ಯೋಜನೆ ಘೋಷಿಸಿದ ಸಚಿವ ಕೃಷ್ಣಬೈರೇಗೌಡ

ಬಳ್ಳಾರಿಯ ಹೋಟೆಲ್, ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ

ಫ್ರೀ ಟೀ-ಕಾಫಿಗಾಗಿ ಬೇಕರಿ ಒಡತಿಗೆ ಜೀವ ಬೆದರಿಕೆ!

ಬರದಿಂದ ತತ್ತರಿಸಿದ್ದ ಬೆಂಗಳೂರು ದಕ್ಷಿಣದಲ್ಲಿ ವರುಣ ಕೃಪೆ: ಕೆರೆಗಳು ಫುಲ್!

'ಮತದಾರರ ತೀರ್ಪನ್ನು ಗೌರವಪೂರ್ವಕವಾಗಿ ಸ್ವೀಕರಿಸುತ್ತೇವೆ': ಸಿಎಂ ಡಿಕೆಶಿ

'ಪ್ರಜ್ವಲ್​​ ರೇವಣ್ಣ ಸಿ.ಡಿ ತಂದುಕೊಟ್ಟಿದ್ದೇ ಕುಮಾರಸ್ವಾಮಿಯಂತೆ'

ಬಿಜೆಪಿ-ಜೆಡಿಎಸ್​​ ಒಂದಾಗಿರುವ ಕಾರಣ ಅವರ ಶಕ್ತಿ ಹೆಚ್ಚಿದೆ: ಸತೀಶ್​​