ವರುಣ್ ಚಕ್ರವರ್ತಿ ಮಿಸ್ಟರಿ ಸ್ಪಿನ್​ಗೆ ತಿರುಗಿಬಿದ್ದ ಹಳೆಯ ದಾಖಲೆಗಳು

Updated on: Jan 29, 2025 | 8:31 AM

Varun Chakaravarthy Records: ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಮೂವರು ಮಾತ್ರ 2 ಬಾರಿ 5 ವಿಕೆಟ್ ಕಬಳಿಸಿದ್ದಾರೆ. ಈ ಮೂವರಲ್ಲಿ ಅತೀ ಕಡಿಮೆ ಇನಿಂಗ್ಸ್​ಗಳ ಮೂಲಕ ಎರಡು ಬಾರಿ 5 ವಿಕೆಟ್​ಗಳ ಸಾಧನೆ ಮಾಡಿರುವುದು ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ. ಈ ಮೂಲಕ ಈ ಹಿಂದೆ ಎರಡು ಬಾರಿ 5 ವಿಕೆಟ್​ಗಳನ್ನು ಕಬಳಿಸಿ ದಾಖಲೆ ಬರೆದಿದ್ದ ಬೌಲರ್​ಗಳನ್ನು ಹಿಂದಿಕ್ಕಿ ವರುಣ್ ಚಕ್ರವರ್ತಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

1 / 5
ಟಿ20 ಕ್ರಿಕೆಟ್​ನಲ್ಲಿ ಓವರ್​ಸ್ಪಿನ್ ಹಾಗೂ ಮಿಸ್ಟರಿ ಎಸೆತಗಳ ಮೂಲಕವೇ ಸಂಚಲನ ಸೃಷ್ಟಿಸಿರುವ ವರುಣ್ ಚಕ್ರವರ್ತಿ ಇದೀಗ ಟೀಮ್ ಇಂಡಿಯಾ ಪರ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಸ್ವಿಂಗ್ ಮಾಸ್ಟರ್ ಭುವನೇಶ್ವರ್ ಕುಮಾರ್ ಹಾಗೂ ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರ ದಾಖಲೆಗಳನ್ನು ಮುರಿಯುವ ಮೂಲಕ..!

2 / 5
ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ತನ್ನ ಓವರ್​ಸ್ಪಿನ್ ಜಾದೂ ತೋರಿಸಿದ ವರುಣ್ 4 ಓವರ್​ಗಳಲ್ಲಿ ಕೇವಲ 24 ರನ್ ನೀಡಿ 5 ವಿಕೆಟ್ ಕಬಳಿಸಿದರು. ಈ ಮೂಲಕ ಭಾರತದ ಪರ ಟಿ20 ಕ್ರಿಕೆಟ್​ನಲ್ಲಿ ಎರಡು ಬಾರಿ 5 ವಿಕೆಟ್ ಕಬಳಿಸಿದ 3ನೇ ಬೌಲರ್ ಎನಿಸಿಕೊಂಡರು.

3 / 5
ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದು ಭುವನೇಶ್ವರ್ ಕುಮಾರ್ ಯಾದವ್ ಕುಲ್ದೀಪ್ ಯಾದವ್. 87 ಟಿ20 ಪಂದ್ಯಗಳನ್ನಾಡಿರುವ ಭುವನೇಶ್ವರ್ ಕುಮಾರ್ 2 ಬಾರಿ 5 ವಿಕೆಟ್ ಪಡೆದರೆ, ಕುಲ್ದೀಪ್ ಯಾದವ್ 40 ಟಿ20 ಮ್ಯಾಚ್​ಗಳ ಮೂಲಕ 2 ಬಾರಿ 5 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

4 / 5
ಆದರೆ ಭುವನೇಶ್ವರ್ ಕುಮಾರ್ ಹಾಗೂ ಕುಲ್ದೀಪ್ ಯಾದವ್ ಹೆಸರಿನಲ್ಲಿರುವ ಈ ದಾಖಲೆಗಳನ್ನು ಸರಿಗಟ್ಟಲು ವರುಣ್ ಚಕ್ರವರ್ತಿ ತೆಗೆದುಕೊಂಡಿರುವುದು ಕೇವಲ 16 ಪಂದ್ಯಗಳನ್ನು ಮಾತ್ರ. ಸೌತ್ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ 17 ರನ್ ನೀಡಿ 5 ವಿಕೆಟ್ ಕಬಳಿಸಿದ್ದ ವರುಣ್, ಇದೀಗ ಇಂಗ್ಲೆಂಡ್ ವಿರುದ್ಧ 24 ರನ್ ನೀಡಿ 5 ವಿಕೆಟ್ ಪಡೆದಿದ್ದಾರೆ.

5 / 5
ಈ ಮೂಲಕ ಟೀಮ್ ಇಂಡಿಯಾ ಪರ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 2 ಬಾರಿ 5 ವಿಕೆಟ್ ಕಬಳಿಸಿ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಭಾರತದ ಪರ ಸತತ 2 ಸರಣಿಗಳಲ್ಲಿ 5 ವಿಕೆಟ್ ಪಡೆದ ಏಕೈಕ ಬೌಲರ್ ಎಂಬ ದಾಖಲೆಯನ್ನು ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ತಮ್ಮದಾಗಿಸಿಕೊಂಡಿದ್ದಾರೆ.

Published On - 8:31 am, Wed, 29 January 25