AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Rankings: ಅಗ್ರಸ್ಥಾನದೊಂದಿಗೆ ಬುಮ್ರಾ ದಾಖಲೆ ಮುರಿದ ವರುಣ್ ಚಕ್ರವರ್ತಿ

ICC Rankings: ಟೀಂ ಇಂಡಿಯಾದ ಸ್ಪಿನ್ನರ್ ವರುಣ್ ಚಕ್ರವರ್ತಿ ಐಸಿಸಿ ಟಿ20 ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿನ ಉತ್ತಮ ಪ್ರದರ್ಶನದಿಂದ 818 ರೇಟಿಂಗ್ ಪಾಯಿಂಟ್‌ ಗಳಿಸಿ, ಅತಿ ಹೆಚ್ಚು ರೇಟಿಂಗ್ ಪಡೆದ ಭಾರತೀಯ ಬೌಲರ್ ಎಂಬ ಇತಿಹಾಸ ಸೃಷ್ಟಿಸಿದ್ದಾರೆ. ಜಸ್ಪ್ರೀತ್ ಬುಮ್ರಾ ದಾಖಲೆಯನ್ನು ಮುರಿದಿರುವ ಚಕ್ರವರ್ತಿ, ಪ್ರಸ್ತುತ ಟಾಪ್ 10ರಲ್ಲಿರುವ ಏಕೈಕ ಭಾರತೀಯರಾಗಿದ್ದಾರೆ.

ಪೃಥ್ವಿಶಂಕರ
|

Updated on: Dec 17, 2025 | 4:50 PM

Share
ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್ ವರುಣ್ ಚಕ್ರವರ್ತಿ ಪ್ರಸ್ತುತ ಟಿ20 ಕ್ರಿಕೆಟ್‌ನಲ್ಲಿ ತಮ್ಮದೇ ಛಾಪು ಮೂಡಿಸುತ್ತಿದ್ದಾರೆ. ಕಡಿಮೆ ಅವಧಿಯಲ್ಲೇ ಚುಟುಕು ಮಾದರಿಯಲ್ಲಿ ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಇದರ ಫಲವಾಗಿ ಐಸಿಸಿ ಟಿ20 ಶ್ರೇಯಾಂಕದಲ್ಲಿಯೂ ಅವರು ನಂಬರ್ 1 ಸ್ಥಾನದಲ್ಲಿದ್ದಾರೆ.

1 / 5
ಡಿಸೆಂಬರ್ 17 ರ ಬುಧವಾರ ಬಿಡುಗಡೆಯಾದ ಇತ್ತೀಚಿನ ಐಸಿಸಿ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನದಲ್ಲಿ ವರುಣ್ ಚಕ್ರವರ್ತಿ ಮುಂದುವರೆದಿದ್ದಾರೆಯಾದರೂ ರೇಟಿಂಗ್​ನಲ್ಲಿ ಏರಿಕೆ ಕಂಡುಬಂದಿದೆ. ಕಳೆದ ವಾರ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಎರಡು ಟಿ20 ಪಂದ್ಯಗಳಲ್ಲಿ ಚಕ್ರವರ್ತಿ ತಲಾ 2 ವಿಕೆಟ್‌ಗಳನ್ನು ಕಬಳಿಸಿದ್ದರು. ಇದರ ಫಲವಾಗಿ ಅವರಿಗೆ 36 ರೇಟಿಂಗ್​ ಅಂಕಗಳು ಹೆಚ್ಚುವರಿಯಾಗಿ ಸಿಕ್ಕಿವೆ.

2 / 5
ಇದರಿಂದಾಗಿ 818 ರೇಟಿಂಗ್ ಪಾಯಿಂಟ್ ತಲುಪಿರುವ ವರುಣ್ ಚಕ್ರವರ್ತಿ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಈ ಮೂಲಕ  ಟಿ20 ಶ್ರೇಯಾಂಕದಲ್ಲಿ ಅತಿ ಹೆಚ್ಚು ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿರುವ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಹಾಗೆಯೇ 818 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಜಸ್ಪ್ರೀತ್ ಬುಮ್ರಾ ಅವರನ್ನು ಹಿಂದಿಕ್ಕಿದ್ದಾರೆ.

3 / 5
2017 ರಲ್ಲಿ 783 ರೇಟಿಂಗ್ ಪಾಯಿಂಟ್​ನೊಂದಿಗೆ ಜಸ್ಪ್ರೀತ್ ಬುಮ್ರಾ ಭಾರತದ ಪರ ಈ ಸಾಧನೆ ಮಾಡಿದ ಮೊದಲ ಬೌಲರ್ ಎನಿಸಿಕೊಂಡಿದ್ದರು. ಇದೀಗ ವರುಣ್ 800 ಅಂಕಗಳ ಗಡಿಯನ್ನು ದಾಟಿದ್ದಾರೆ. ಈ ಮೂಲಕ ವರುಣ್ ಚಕ್ರವರ್ತಿ ಟಾಪ್ -10 ಬೌಲರ್‌ಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಮೊದಲ ಭಾರತೀಯ ಬೌಲರ್‌ ಎನಿಸಿಕೊಂಡಿದ್ದಾರೆ.

4 / 5
ಪ್ರಸ್ತುತ ಐಸಿಸಿ ಟಿ20 ಶ್ರೇಯಾಂಕದಲ್ಲಿ ವರುಣ್ ಚಕ್ರವರ್ತಿ ನಂತರದಲ್ಲಿರುವ ನ್ಯೂಜಿಲೆಂಡ್‌ನ ಜಾಕೋಬ್ ಡಫಿ 699 ರೇಟಿಂಗ್ ಹೊಂದಿದ್ದಾರೆ. ಚಕ್ರವರ್ತಿ ಮತ್ತು ಡಫಿ ನಡುವೆ 119 ರೇಟಿಂಗ್ ಪಾಯಿಂಟ್‌ಗಳ ವ್ಯತ್ಯಾಸವಿದೆ. ಪ್ರಸ್ತುತ ಟಿ20 ಶ್ರೇಯಾಂಕದಲ್ಲಿ ಅಗ್ರ 10 ರಲ್ಲಿರುವ ಏಕೈಕ ಭಾರತೀಯ ಚಕ್ರವರ್ತಿ. ದಕ್ಷಿಣ ಆಫ್ರಿಕಾ ವಿರುದ್ಧದ ಪ್ರಸ್ತುತ ಸರಣಿಯಿಂದ ಹೊರಗುಳಿದಿರುವ ಅಕ್ಷರ್ ಪಟೇಲ್ 636 ರೇಟಿಂಗ್‌ನೊಂದಿಗೆ 13 ನೇ ಸ್ಥಾನದಲ್ಲಿದ್ದಾರೆ.

5 / 5
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು

ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ

ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ

ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್

ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ

ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ

5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್

‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ