AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ತಿಂಗಳ ನಂತರ ತಂಡ ಸೇರಿಕೊಂಡಿದ್ದ ವರುಣ್ ಚಕ್ರವರ್ತಿ ಮತ್ತೆ ತಂಡದಿಂದ ಔಟ್

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾದ ಸ್ಪಿನ್ನರ್ ವರುಣ್ ಚಕ್ರವರ್ತಿ ಗಾಯಗೊಂಡು ಹೊರಬಿದ್ದಿದ್ದಾರೆ. ಕೇವಲ ಒಂದು ಪಂದ್ಯ ಆಡಿದ ನಂತರ ಮತ್ತೆ ಗಾಯಗೊಂಡಿರುವುದು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿನ ಅವರ ರಿಹ್ಯಾಬ್ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಹಾರ್ದಿಕ್ ಪಾಂಡ್ಯರಂತಹ ಆಟಗಾರರಿಗೂ ಇದೇ ಅನುಭವವಾಗಿತ್ತು. ವರುಣ್ ಬದಲಿಗೆ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್​ಗೆ ಅವಕಾಶ ಸಿಗುವ ಸಾಧ್ಯತೆ ಇದೆ.

ಪೃಥ್ವಿಶಂಕರ
|

Updated on: Sep 14, 2026 | 8:15 PM

Share
ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯವನ್ನು ಗೆದ್ದು ಎರಡನೇ ಟಿ20 ಪಂದ್ಯಕ್ಕೆ ಸಜ್ಜಾಗುತ್ತಿದ್ದ ಟೀಂ ಇಂಡಿಯಾಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಸ್ಪಿನ್ನರ್ ವರುಣ್ ಚಕ್ರವರ್ತಿ ಗಾಯದಿಂದಾಗಿ ಇಡೀ ಸರಣಿಯಿಂದಲೇ ಹೊರಬಿದ್ದಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 4ಓವರ್​ಗಳನ್ನು ಬೌಲ್ ಮಾಡಿದ್ದ ವರುಣ್ ಕೇವಲ 16 ರನ್ ನೀಡಿ 1 ವಿಕೆಟ್ ಪಡೆದಿದ್ದರು(PC-BCCI).

1 / 5
ಅಚ್ಚರಿಯ ಸಂಗತಿಯೆಂದರೆ ವರುಣ್ ಚಕ್ರವರ್ತಿ ಎರಡು ತಿಂಗಳ ನಂತರ ತಂಡದಲ್ಲಿ ಕಾಣಿಸಿಕೊಂಡಿದ್ದರು. ಈ ಎರಡು ತಿಂಗಳು ಅವರು ಎಲ್ಲಿದ್ದರು ಎಂದರೆ ಗಾಯದಿಂದ ಚೇತರಿಸಿಕೊಳ್ಳಲು ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್​ನಲ್ಲಿ ರಿಹ್ಯಾಬ್​ಗೆ ಒಳಗಾಗಿದ್ದರು. ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದ ವರುಣ್, ತಮ್ಮ ಫಿಟ್ನೆಸ್ ಸಾಭೀತುಪಡಿಸಿ ತಂಡದಲ್ಲಿ ಸ್ಥಾನ ಪಡೆದಿದ್ದರು(PC-BCCI).

2 / 5
ಆದರೀಗ ತಂಡವನ್ನು ಕೂಡಿಕೊಂಡು ಕೇವಲ ಒಂದೇ ಒಂದು ಪಂದ್ಯವನ್ನು ಆಡಿದ ಬಳಿಕ ವರುಣ್ ಚಕ್ರವರ್ತಿ ಮತ್ತೆ ಗಾಯಕ್ಕೆ ತುತ್ತಾಗಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಕೇವಲ ನಾಲ್ಕು ಓವರ್ ಬೌಲಿಂಗ್ ಮಾಡಿದ್ದ ವರುಣ್​ಗೆ ಮತ್ತೆ ಗಾಯವಾಗಿದೆ . ಈ ಗಾಯವು ಮತ್ತೊಮ್ಮೆ ಬಿಸಿಸಿಐ ಮತ್ತು ಅದರ ಸೆಂಟರ್ ಆಫ್ ಎಕ್ಸಲೆನ್ಸ್ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ(PC-BCCI).

3 / 5
ಇಂಗ್ಲೆಂಡ್ ಸರಣಿಯಿಂದಲೂ ವರುಣ್ ಚಕ್ರವರ್ತಿ ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿದ್ದು ಫಿಟ್ನೆಸ್ ಮೇಲೆ ಕೆಲಸ ಮಾಡಿದ್ದರು. ಆದರೀಗ ಒಂದು ಪಂದ್ಯದ ಬಳಿಕ ವರುಣ್ ಗಾಯಕ್ಕೆ ತುತ್ತಾಗಿದ್ದಾರೆ. ಈ ರೀತಿಯಾಗಿರುವುದು ಕೇವಲ ವರುಣ್ ಚಕ್ರವರ್ತಿಗೆ ಮಾತ್ರವಲ್ಲ. ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ ಮತ್ತು ಜಸ್ಪ್ರೀತ್ ಬುಮ್ರಾ ಸೇರಿದಂತೆ ಅನೇಕ ಆಟಗಾರರು ಈ ಹಿಂದೆ ಇದೇ ರೀತಿಯಾಗಿ ಗಾಯಕ್ಕೆ ತುತ್ತಾಗಿದ್ದಾರೆ(PC-PTI).

4 / 5
ಗಾಯದಿಂದ ಬಳಲುತ್ತಿರುವ ವರುಣ್ ಚಕ್ರವರ್ತಿ ಅಫ್ಘಾನಿಸ್ತಾನ ವಿರುದ್ಧದ ಇಡೀ ಸರಣಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್​ಗೆ ಆಡುವ ಅವಕಾಶ ಸಿಗಬಹುದು. ರವಿ ಬಿಷ್ಣೋಯ್ ಎರಡನೇ ಮತ್ತು ಮೂರನೇ ಟಿ20 ಪಂದ್ಯದಲ್ಲಿ ಆಡುವುದನ್ನು ಕಾಣಬಹುದು. ರವಿ ಬಿಷ್ಣೋಯ್ ಟೀಂ ಇಂಡಿಯಾ ಪರ ಇದುವರೆಗೆ 49 ಪಂದ್ಯಗಳನ್ನಾಡಿದ್ದು 67 ವಿಕೆಟ್‌ಗಳನ್ನು ಕಬಳಿಸಿದ್ದಾರೆ(PC-PTI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR

ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು

ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ

ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ

ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ

ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ

ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!

ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ

ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು

ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು