ICC T20I Rankings: ನಂ.1 ಟಿ20 ಬೌಲರ್ ಆಗುವ ಸನಿಹದಲ್ಲಿ ವರುಣ್ ಚಕ್ರವರ್ತಿ

ICC T20I Rankings: ಐಸಿಸಿ ಪ್ರಕಟಿಸಿರುವ ಇತ್ತೀಚಿನ ಟಿ20 ಬೌಲರ್ ಶ್ರೇಯಾಂಕದಲ್ಲಿ ವರುಣ್ ಚಕ್ರವರ್ತಿ ಮೂರು ಸ್ಥಾನಗಳ ಏರಿಕೆಯೊಂದಿಗೆ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿ 14 ವಿಕೆಟ್ ಪಡೆದ ಅವರು, ಸರಣಿಯ ಶ್ರೇಷ್ಠ ಆಟಗಾರ ಪ್ರಶಸ್ತಿಯನ್ನೂ ಗೆದ್ದಿದ್ದಾರೆ. ಈ ಏರಿಕೆಯಿಂದಾಗಿ ಅವರು ಆದಿಲ್ ರಶೀದ್ ಜೊತೆಗೆ ಎರಡನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Feb 05, 2025 | 3:30 PM

ಐಸಿಸಿ ಬಿಡುಗಡೆ ಮಾಡಿರುವ ನೂತನ ಟಿ20 ಬೌಲರ್​ಗಳ ಶ್ರೇಯಾಂಕದಲ್ಲಿ ಟೀಂ ಇಂಡಿಯಾದ ಮಿಸ್ಟ್ರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಮೂರು ಸ್ಥಾನಗಳನ್ನು ಮುಂಬಡ್ತಿ ಪಡೆಯುವುದರೊಂದಿಗೆ ಎರಡನೇ ಶ್ರೇಯಾಂಕವನ್ನು ಆಕ್ರಮಿಸಿಕೊಂಡಿದ್ದಾರೆ. ಕಳೆದ ವಾರ ಬಿಡುಗಡೆಯಾಗಿದ್ದ ಐಸಿಸಿ ಶ್ರೇಯಾಂಕದಲ್ಲಿ 25 ಆಟಗಾರರನ್ನು ಹಿಂದಿಕ್ಕಿ 5 ನೇ ಸ್ಥಾನಕ್ಕೇರಿದ್ದ ಅವರು ಇದೀಗ 7 ದಿನಗಳಲ್ಲಿ ಮೂರು ಸ್ಥಾನ ಮೇಲೇರುವಲ್ಲಿ ಯಶಸ್ವಿಯಾಗಿದ್ದಾರೆ.

1 / 6
ವರುಣ್ ಚಕ್ರವರ್ತಿ ಇತ್ತೀಚೆಗೆ ಮುಕ್ತಾಯಗೊಂಡ ಇಂಗ್ಲೆಂಡ್ ವಿರುದ್ಧದ 5 ಟಿ20 ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಇಡೀ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದ ವರುಣ್​ಗೆ ಇದರ ಫಲವಾಗಿ ಸರಣಿಯ ಆಟಗಾರ ಪ್ರಶಸ್ತಿಯೂ ಲಭಿಸಿತ್ತು. ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳಲ್ಲಿ ಟಿ20 ಸರಣಿಯಲ್ಲಿ ವರುಣ್ ಚಕ್ರವರ್ತಿ 9.85 ಸರಾಸರಿಯಲ್ಲಿ 14 ವಿಕೆಟ್‌ಗಳನ್ನು ಪಡೆದಿದ್ದರು.

2 / 6
ಇದೀಗ ಬಿಡುಗಡೆಯಾಗಿರುವ ರ್ಯಾಂಕಿಂಗ್​ನಲ್ಲಿ ವರುಣ್ ಚಕ್ರವರ್ತಿ, ಇಂಗ್ಲೆಂಡ್‌ನ ಆದಿಲ್ ರಶೀದ್ ಅವರೊಂದಿಗೆ ಜಂಟಿ ಎರಡನೇ ಸ್ಥಾನವನ್ನು ಆಕ್ರಮಿಸಿಕೊಂಡಿದ್ದಾರೆ. ಇಬ್ಬರೂ ತಲಾ 705 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದು, ಇತ್ತೀಚಿನ ಟಿ20 ಶ್ರೇಯಾಂಕದಲ್ಲಿ ಆದಿಲ್ ರಶೀದ್ ಒಂದು ಸ್ಥಾನ ಕುಸಿದಿದ್ದಾರೆ. ಈ ಮೊದಲು ಮೊದಲ ಸ್ಥಾನದಲ್ಲಿದ್ದ ಆದಿಲ್ ರಶೀದ್ ಇದೀಗ ಎರಡನೇ ಸ್ಥಾನಕ್ಕೆ ಜಾರಿದ್ದಾರೆ. ಆದರೆ ವರುಣ್ ಚಕ್ರವರ್ತಿ 3 ಸ್ಥಾನ ಜಿಗಿದು 2 ನೇ ಸ್ಥಾನಕ್ಕೆ ತಲುಪಿದ್ದಾರೆ.

3 / 6
ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ವರುಣ್ ಚಕ್ರವರ್ತಿ ಅವರ ಪ್ರದರ್ಶನವನ್ನು ನೋಡಿದ ಭಾರತೀಯ ತಂಡದ ಆಡಳಿತ ಮಂಡಳಿಯು ಅವರನ್ನು ಏಕದಿನ ಸರಣಿಯ ತಂಡಕ್ಕೂ ಸೇರಿಸಿಕೊಂಡಿದೆ. ವರುಣ್ ಚಕ್ರವರ್ತಿ ಅವರನ್ನು ಏಕದಿನ ತಂಡಕ್ಕೆ ಹಠಾತ್ತನೆ ಸೇರಿಸಿಕೊಂಡಿರುವುದು ಚಾಂಪಿಯನ್ಸ್ ಟ್ರೋಫಿಯಲ್ಲಿ ಅವರು ಆಡುವ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿದೆ.

4 / 6
ವರುಣ್ ಚಕ್ರವರ್ತಿ ಇದುವರೆಗೆ ಭಾರತ ಪರ ಕೇವಲ ಟಿ20 ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ನಾಯಕ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಆಡುವ ಹನ್ನೊಂದರ ಬಳಗದಲ್ಲಿ ಅವರಿಗೆ ಅವಕಾಶ ನೀಡಿದರೆ, ಅವರ ಏಕದಿನ ವೃತ್ತಿಜೀವನವೂ ಇಲ್ಲಿಂದ ಪ್ರಾರಂಭವಾಗಬಹುದು.

5 / 6
ಉಳಿದಂತೆ ಐಸಿಸಿ ಟಿ20 ಬೌಲರ್‌ಗಳ ಶ್ರೇಯಾಂಕದ ಅಗ್ರ 10 ರಲ್ಲಿ ವರುಣ್ ಚಕ್ರವರ್ತಿ ಸೇರಿದಂತೆ 3 ಬೌಲರ್‌ಗಳಿದ್ದಾರೆ.  4 ಸ್ಥಾನ ಮೇಲೇರಿರುವ ರವಿ ಬಿಷ್ಣೋಯ್ 671 ರೇಟಿಂಗ್ ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದ್ದರೆ, ಅರ್ಷದೀಪ್ ಸಿಂಗ್ ಒಂದು ಸ್ಥಾನ ಕುಸಿದು 9ನೇ ಸ್ಥಾನಕ್ಕೆ ಇಳಿದಿದ್ದಾರೆ. ಪ್ರಸ್ತುತ ಅರ್ಷದೀಪ್ 652 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದಾರೆ.

6 / 6
Follow us
ಚಾಂಪಿಯನ್ಸ್ ಟ್ರೋಫಿ ಜೆರ್ಸಿ ಅನಾವರಣಗೊಳಿಸಿದ ಪಾಕಿಸ್ತಾನ್

Delhi Result Live: ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ನೇರ ಪ್ರಸಾರ

ಸೆಲೆಬ್ರಿಟಿಗಳಿಲ್ಲದೆ ಸರಳವಾಗಿ ಮದುವೆಯಾದ ಬಿಲಿಯನೇರ್ ಮಗ ಜೀತ್ ಅದಾನಿ

ದೆಹಲಿ ನಾಯಕರ ಭೇಟಿ ಬಳಿಕ ಶಾಸಕ ಯತ್ನಾಳ್​ ಹೇಳಿದ್ದಿಷ್ಟು

ರಕ್ಷಿತಾರನ್ನು ಮದುವೆಯಾದಾಗ ಅಂಬರೀಶ್ ಹೇಳಿದ್ದನ್ನು ಮೆಲಕು ಹಾಕಿದ ಪ್ರೇಮ್

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಜನ ಸಾವು

ಅಪ್ಪನನ್ನು ಇಷ್ಟಪಡುವ ಕಾರಣಕ್ಕೆ ಮಗನನ್ನೂ ಇಷ್ಟಪಡುವ ಅಗತ್ಯವಿಲ್ಲ: ನಿರಾಣಿ

ಆಯತಪ್ಪಿ ಬಿದ್ದಿದ್ದ ಬೈಕ್​ ಸವಾರ: ಗಾಯಾಳುಗೆ ನೆರವಾದ ಸಂತೋಷ್ ಲಾಡ್

ವಿರೋಧಪಕ್ಷಗಳ ಟೀಕೆಗೆ ಗುರಿಯಾಗದ ಬಜೆಟ್ ಮಂಡನೆ ಮುಖ್ಯಮಂತ್ರಿಗೆ ಸಾಧ್ಯವೇ?

ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ