ಸೋಲಿನೊಂದಿಗೆ ದಾಖಲೆಗೆ ಕೊರೊಳೊಡ್ಡಿದ ವರುಣ್ ಚಕ್ರವರ್ತಿ
South Africa vs India: ಭಾರತದ ವಿರುದ್ಧ ನಾಲ್ಕು ಪಂದ್ಯಗಳ ಟಿ20 ಸರಣಿಯ 2ನೇ ಮ್ಯಾಚ್ನಲ್ಲಿ ಸೌತ್ ಆಫ್ರಿಕಾ ತಂಡ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 124 ರನ್ ಕಲೆಹಾಕಿತು. ಈ ಗುರಿಯನ್ನು ಸೌತ್ ಆಫ್ರಿಕಾ ತಂಡ 19 ಓವರ್ಗಳಲ್ಲಿ ಚೇಸ್ ಮಾಡಿ, 3 ವಿಕೆಟ್ಗಳ ಜಯ ಸಾಧಿಸಿದೆ.
1 / 7
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2ನೇ ಟಿ20 ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 124 ರನ್ ಕಲೆಹಾಕಿತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾಗೆ ವರುಣ್ ಚಕ್ರವರ್ತಿ ಆಘಾತದ ಮೇಲೆ ಆಘಾತ ನೀಡಿದ್ದರು.
2 / 7
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2ನೇ ಟಿ20 ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 124 ರನ್ ಕಲೆಹಾಕಿತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾಗೆ ವರುಣ್ ಚಕ್ರವರ್ತಿ ಆಘಾತದ ಮೇಲೆ ಆಘಾತ ನೀಡಿದ್ದರು.
3 / 7
ರೀಝ ಹೆಂಡ್ರಿಕ್ಸ್ (24) ಹಾಗೂ ಐಡೆನ್ ಮಾರ್ಕ್ರಾಮ್ (3) ಅವರನ್ನು ಬೌಲ್ಡ್ ಮಾಡಿದ ವರುಣ್ ಚಕ್ರವರ್ತಿ, ಆ ಬಳಿಕ ಮಾರ್ಕೊ ಯಾನ್ಸೆನ್ಗೆ (7) ಪೆವಿಲಿಯನ್ ಹಾದಿ ತೋರಿಸಿದರು. ಇನ್ನು ಹೆನ್ರಿಕ್ ಕ್ಲಾಸೆನ್ (2) ಹಾಗೂ ಡೇವಿಡ್ ಮಿಲ್ಲರ್ (0) ಔಟ್ ಮಾಡಿದರು.
4 / 7
ಈ ಮೂಲಕ 4 ಓವರ್ಗಳಲ್ಲಿ ಕೇವಲ 17 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು. ಇದಾಗ್ಯೂ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು 3 ವಿಕೆಟ್ಗಳ ಜಯ ಸಾಧಿಸಿದೆ. ಈ ಸೋಲಿನೊಂದಿಗೆ ವರುಣ್ ಚಕ್ರವರ್ತಿ ಹೆಸರಿಗೆ ಶ್ರೇಷ್ಠ ದಾಖಲೆಯೊಂದು ಸೇರ್ಪಡೆಯಾಗಿದ್ದು ವಿಶೇಷ.
5 / 7
ಅಂದರೆ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಸೋತ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಬೌಲರ್ ಎಂಬ ದಾಖಲೆಯೊಂದು ವರುಣ್ ಚಕ್ರವರ್ತಿ ಪಾಲಾಗಿದೆ. ಇದಕ್ಕೂ ಮುನ್ನ ಇಂತಹದೊಂದು ಅಪರೂಪದ ದಾಖಲೆ ಮುಸ್ತಫಿಜುರ್ ರೆಹಮಾನ್ ಹೆಸರಿನಲ್ಲಿತ್ತು.
6 / 7
ಬಾಂಗ್ಲಾದೇಶ್ ತಂಡದ ಎಡಗೈ ವೇಗಿ ಮುಸ್ತಫಿಜುರ್ ರೆಹಮಾನ್ 2016 ರಲ್ಲಿ ನ್ಯೂಝಿಲೆಂಡ್ ವಿರುದ್ಧ 22 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು. ಇದಾಗ್ಯೂ ಈ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡ 75 ರನ್ಗಳಿಂದ ಸೋಲನುಭವಿಸಿತ್ತು.
7 / 7
ಇದೀಗ ಕೇವಲ 17 ರನ್ ನೀಡಿ 5 ವಿಕೆಟ್ ಕಬಳಿಸಿ ವರುಣ್ ಚಕ್ರವರ್ತಿ ಈ ದಾಖಲೆ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೂಲಕ ಸೋಲಿನಲ್ಲಿ ಕೊನೆಗೊಂಡ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಬೌಲರ್ ಎನಿಸಿಕೊಂಡಿದ್ದಾರೆ. ಹಾಗೆಯೇ ಇದೇ ಮೊದಲ ಬಾರಿಗೆ ಭಾರತೀಯ ಬೌಲರ್ರೊಬ್ಬರು 5 ವಿಕೆಟ್ ಕಬಳಿಸಿದರೂ ಟೀಮ್ ಇಂಡಿಯಾ ಟಿ20 ಪಂದ್ಯದಲ್ಲಿ ಸೋಲನುಭವಿಸಿದೆ.