Venkatesh Iyer: ವೆಂಕಿಯ ಬೆಂಕಿ ಬ್ಯಾಟಿಂಗ್: ಒಂದು ಶತಕ, ಹಲವು ದಾಖಲೆಗಳು

IPL 2023 Kannada: 15 ವರ್ಷಗಳ ಬಳಿಕ ಕೆಕೆಆರ್ ಪರ ಶತಕ ಸಿಡಿಸುವ ಮೂಲಕ ವೆಂಕಟೇಶ್ ಅಯ್ಯರ್ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್

Updated on: Apr 16, 2023 | 10:30 PM

IPL 2023: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಶತಕ ಸಿಡಿಸುವ ಮೂಲಕ ಕೆಕೆಆರ್ ಬ್ಯಾಟರ್ ವೆಂಕಟೇಶ್ ಅಯ್ಯರ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.

1 / 9
ಈ ಪಂದ್ಯದಲ್ಲಿ ವೆಂಕಿ ಕೇವಲ 49 ಎಸೆತಗಳಲ್ಲಿ 9 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ನೊಂದಿಗೆ ಶತಕ ಪೂರೈಸಿದ್ದರು. ಈ ಮೂಲಕ ಕೆಕೆಆರ್ ಪರ ಶತಕ ಬಾರಿಸಿದ ಮೊದಲ ಭಾರತೀಯ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡರು.

2 / 9
ಅಲ್ಲದೆ ಐಪಿಎಲ್​ನಲ್ಲಿ 50 ಕ್ಕಿಂತ ಕಡಿಮೆ ಎಸೆತಗಳಲ್ಲಿ ಶತಕ ಬಾರಿಸಿದ ಮೊದಲ ಕೆಕೆಆರ್ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ 19ನೇ ಬ್ಯಾಟರ್ ಎನಿಸಿಕೊಂಡರು.

3 / 9
ಇನ್ನು ಕೆಕೆಆರ್ ಪರ ಶತಕ ಬಾರಿಸಿದ 2ನೇ ಬ್ಯಾಟ್ಸ್​ಮನ್ ಎಂಬ ದಾಖಲೆಯನ್ನು ಕೂಡ ವೆಂಕಟೇಶ್ ಅಯ್ಯರ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ 2008 ರಲ್ಲಿ ಬ್ರೆಂಡನ್ ಮೆಕಲಂ ಶತಕ ಬಾರಿಸಿದ್ದರು. ಇದೀಗ 15 ವರ್ಷಗಳ ಬಳಿಕ ಕೆಕೆಆರ್ ಬ್ಯಾಟರ್​ರೊಬ್ಬರು ಶತಕ ಸಿಡಿಸಿರುವುದು ವಿಶೇಷ.

4 / 9
ಐಪಿಎಲ್ 2023 ರಲ್ಲಿ ವೇಗದ ಶತಕ ಬಾರಿಸಿದ ದಾಖಲೆ ಕೂಡ ವೆಂಕಟೇಶ್ ಅಯ್ಯರ್ ಪಾಲಾಗಿದೆ. ಇದಕ್ಕೂ ಮುನ್ನ ಎಸ್​ಆರ್​ಹೆಚ್ ತಂಡದ ಹ್ಯಾರಿ ಬ್ರೂಕ್ 55 ಎಸೆತಗಳಲ್ಲಿ ಶತಕ ಪೂರೈಸಿದ್ದರು. ಇದೀಗ ವೆಂಕಿ ಕೇವಲ 49 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಹೊಸ ದಾಖಲೆ ಬರೆದಿದ್ದಾರೆ.

5 / 9
ಇನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಶತಕ ಬಾರಿಸಿದ ಮೊದಲ ಕೆಕೆಆರ್ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ವೆಂಕಟೇಶ್ ಅಯ್ಯರ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಶತಕ ಬಾರಿಸಿದ ಬ್ರೆಂಡನ್ ಮೆಕಲಂ ಆರ್​ಸಿಬಿ ವಿರುದ್ಧ ಈ ಸಾಧನೆ ಮಾಡಿದ್ದರು.

6 / 9
ಕೆಕೆಆರ್ ಪರ ಒಂದೇ ಇನಿಂಗ್ಸ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಭಾರತೀಯ ಆಟಗಾರ ಎಂಬ ದಾಖಲೆಯನ್ನೂ ಕೂಡ ಈ ಪಂದ್ಯದ ಮೂಲಕ ವೆಂಕಟೇಶ್ ಅಯ್ಯರ್ ನಿರ್ಮಿಸಿದ್ದಾರೆ. ವೆಂಕಿ ಈ ಪಂದ್ಯದಲ್ಲಿ ಒಟ್ಟು 9 ಭರ್ಜರಿ ಸಿಕ್ಸ್ ಬಾರಿಸಿದ್ದರು. ಇನ್ನು ಕೆಕೆಆರ್ ಪರ ಒಂದೇ ಇನಿಂಗ್ಸ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ್ದು ಬ್ರೆಂಡನ್ ಮೆಕಲಂ (13 ಸಿಕ್ಸ್).

7 / 9
ಇನ್ನು ಐಪಿಎಲ್​ನಲ್ಲಿ ಸ್ಪೋಟಕ ಶತಕ ಸಿಡಿಸಿದ 8ನೇ ಭಾರತೀಯ ಬ್ಯಾಟರ್ ಎಂಬ ಹೆಗ್ಗಳಿಕೆಗೂ ವೆಂಕಟೇಶ್ ಅಯ್ಯರ್ ಪಾತ್ರರಾಗಿದ್ದಾರೆ. ಅಯ್ಯರ್ 49 ಎಸೆತಗಳಲ್ಲಿ ಶತಕ ಪೂರೈಸಿ ಈ ದಾಖಲೆ ಬರೆದಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು 37 ಎಸೆತಗಳಲ್ಲಿ ಶತಕ ಬಾರಿಸಿದ ಯೂಸುಫ್ ಪಠಾಣ್.

8 / 9
ಒಟ್ಟಿನಲ್ಲಿ 15 ವರ್ಷಗಳ ಬಳಿಕ ಕೆಕೆಆರ್ ಪರ ಶತಕ ಸಿಡಿಸುವ ಮೂಲಕ ವೆಂಕಟೇಶ್ ಅಯ್ಯರ್ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ.

9 / 9
Follow us
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ

ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್

ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ

ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು

ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ

29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್

ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು

ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ

ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ