
ರಣಜಿ ಟ್ರೋಫಿ ಕ್ರಿಕೆಟ್ನಲ್ಲಿ ವಿದರ್ಭ ತಂಡದ ಎಡಗೈ ಸ್ಪಿನ್ನರ್ ಹರ್ಷ್ ದುಬೆ ಅಮೋಘ ಬೌಲಿಂಗ್ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದಾರೆ. ಮಧ್ಯಪ್ರದೇಶ ವಿರುದ್ಧದ ಪಂದ್ಯದಲ್ಲಿ ತಮ್ಮ ವೃತ್ತಿಜೀವನದ ಶ್ರೇಷ್ಠ ಪ್ರದರ್ಶನ ನೀಡಿದ ಅವರು, ಬರೋಬ್ಬರಿ 9 ವಿಕೆಟ್ ಕಬಳಿಸಿ ಎದುರಾಳಿ ತಂಡವನ್ನು ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 209 ರನ್ಗಳಿಗೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ(PC-PTI).
ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಹರ್ಷ್ ದುಬೆ 23.1 ಓವರ್ಗಳಲ್ಲಿ 53 ರನ್ ನೀಡಿ 9 ವಿಕೆಟ್ ಪಡೆದರು. ಇದರಲ್ಲಿ 4 ಮೇಡನ್ ಓವರ್ಗಳು ಸೇರಿದ್ದವು. ಮಧ್ಯಪ್ರದೇಶ ತಂಡದ ಪತನಗೊಂಡ 10 ವಿಕೆಟ್ಗಳ ಪೈಕಿ 9 ವಿಕೆಟ್ಗಳನ್ನು ದುಬೆ ಒಬ್ಬರೇ ಕಬಳಿಸಿದರು. ಉಳಿದ ಒಂದು ವಿಕೆಟ್ ನಚಿಕೇತ್ ಭೂಟೆ ಪಾಲಾಯಿತು(PC-PTI).
ಹರ್ಷ್ ದುಬೆ ಕಬಳಿಸಿದ 9 ವಿಕೆಟ್ಗಳು ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಅವರ ವೈಯಕ್ತಿಕ ಶ್ರೇಷ್ಠ ಬೌಲಿಂಗ್ ಸಾಧನೆಯಾಗಿದೆ. ಅಷ್ಟೇ ಅಲ್ಲ, ರಣಜಿ ಟ್ರೋಫಿ ಇತಿಹಾಸದಲ್ಲಿ ವಿದರ್ಭ ಪರ ದಾಖಲಾದ ಅತ್ಯುತ್ತಮ ಬೌಲಿಂಗ್ ಪ್ರದರ್ಶನವೂ ಇದಾಗಿದೆ. ಈ ಅಮೋಘ ಸಾಧನೆಯ ಮೂಲಕ ಹರ್ಷ್ ದುಬೆ ದೇಶೀಯ ಕ್ರಿಕೆಟ್ನ ಅತ್ಯಂತ ಭರವಸೆಯ ಆಲ್ರೌಂಡರ್ಗಳಲ್ಲಿ ಒಬ್ಬರು ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ(PC-PTI).
ದೇಶೀಯ ಕ್ರಿಕೆಟ್ನಲ್ಲಿ ಹರ್ಷ್ ದುಬೆ ಸತತವಾಗಿ ಅದ್ಭುತ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. 23 ವರ್ಷದ ಈ ಯುವ ಆಟಗಾರ 2024-25ರ ರಣಜಿ ಟ್ರೋಫಿ ಋತುವಿನಲ್ಲಿ ದಾಖಲೆಯ 69 ವಿಕೆಟ್ ಕಬಳಿಸುವುದರ ಜೊತೆಗೆ ಬ್ಯಾಟಿಂಗ್ನಲ್ಲಿ 476 ರನ್ ಗಳಿಸಿದ್ದರು. ಈ ಅಮೋಘ ಪ್ರದರ್ಶನದ ಫಲವಾಗಿ 2026ರ ಮೇ ತಿಂಗಳಲ್ಲಿ ಮೊದಲ ಬಾರಿಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದರು(PC-PTI).
ಬಳಿಕ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಹಾಗೂ ಏಕದಿನ ಸರಣಿಗಳಿಗೆ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದ ದುಬೆ, ಜೂನ್ 13ರಂದು ಏಕದಿನ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು. ಐಪಿಎಲ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಭಾಗವಾಗಿಯೂ ಗುರುತಿಸಿಕೊಂಡಿದ್ದಾರೆ(PC-PTI).