- Kannada News Photo gallery Cricket photos Vijay Hazare Trophy: Ruturaj Gaikwad smashes 4th century in 5 matches
Ruturaj Gaikwad: ಬ್ಯಾಕ್ ಟು ಬ್ಯಾಕ್ ಸೆಂಚುರಿ: ಕೊಹ್ಲಿ ದಾಖಲೆ ಸರಿಗಟ್ಟಿದ ರುತುರಾಜ್
Vijay Hazare Trophy: ಚಂಡೀಗಢ್ ನೀಡಿದ 309 ರನ್ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಮಹಾರಾಷ್ಟ್ರ ಪರ ರುತುರಾಜ್ ಆರಂಭಿಕನಾಗಿ ಕಣಕ್ಕಿಳಿದಿದ್ದರು. ತಂಡಕ್ಕೆ ಸ್ಪೋಟಕ ಆರಂಭ ಒದಗಿಸಿದ ರುತುರಾಜ್ 132 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 12 ಬೌಂಡರಿಗಳೊಂದಿಗೆ 168 ರನ್ ಚಚ್ಚಿದರು. (ಡೈಲಿಹಂಟ್ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)
Updated on: Dec 14, 2021 | 6:13 PM

ಈ ಬಾರಿಯ ವಿಜಯ್ ಹಜಾರೆ ಟೂರ್ನಿಯಲ್ಲಿ ಮಹಾರಾಷ್ಟ್ರ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಬ್ಯಾಕ್ ಟು ಬ್ಯಾಕ್ 4 ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಚಂಡೀಗಢ್ ವಿರುದ್ದ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಅಬ್ಬರಿಸುವ ಮೂಲಕ ರುತುರಾಜ್ ತಂಡಕ್ಕೆ ಗೆಲುವು ತಂದುಕೊಟ್ಟರು.

ಚಂಡೀಗಢ್ ನೀಡಿದ 309 ರನ್ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಮಹಾರಾಷ್ಟ್ರ ಪರ ರುತುರಾಜ್ ಆರಂಭಿಕನಾಗಿ ಕಣಕ್ಕಿಳಿದಿದ್ದರು. ತಂಡಕ್ಕೆ ಸ್ಪೋಟಕ ಆರಂಭ ಒದಗಿಸಿದ ರುತುರಾಜ್ 132 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 12 ಬೌಂಡರಿಗಳೊಂದಿಗೆ 168 ರನ್ ಚಚ್ಚಿದರು. ಮತ್ತೊಂದೆಡೆ ಅಜೀಂ ಖಾಝಿ 73 ರನ್ ಬಾರಿಸಿದರು. ಪರಿಣಾಮ 7 ಎಸೆತಗಳು ಬಾಕಿ ಇರುವಂತೆ ಮಹಾರಾಷ್ಟ್ರ ತಂಡವು 5 ವಿಕೆಟ್ ನಷ್ಟಕ್ಕೆ 313 ರನ್ಗಳಿಸಿ ಭರ್ಜರಿ ಜಯ ಸಾಧಿಸಿತು.

ಅಂದಹಾಗೆ ಇದು ಈ ಬಾರಿಯ ಟೂರ್ನಿಯಲ್ಲಿ ರುತುರಾಜ್ ಗಾಯಕ್ವಾಡ್ ಅವರ 4ನೇ ಶತಕ ಎಂಬುದು ವಿಶೇಷ. ಇದಕ್ಕೂ ಮುನ್ನ ಮಧ್ಯಪ್ರದೇಶ ವಿರುದ್ಧ 136, ಛತ್ತೀಸ್‌ಗಢ ವಿರುದ್ಧ ಅಜೇಯ 154, ಕೇರಳ ವಿರುದ್ಧ 124 ರನ್ ಬಾರಿಸಿದ್ದರು. ಇನ್ನು ಉತ್ತರಾಖಂಡ್ ವಿರುದ್ಧ 21 ರನ್ ಗಳಿಸಿದ್ದ ಗಾಯಕ್ವಾಡ್ ಇದೀಗ ಲೀಗ್ ಹಂತದ 5 ಪಂದ್ಯಗಳಿಂದ 603 ರನ್ ಕಲೆಹಾಕಿದ್ದಾರೆ.

ಈ ನಾಲ್ಕು ಶತಕಗಳೊಂದಿಗೆ ರುತುರಾಜ್ ಗಾಯಕ್ವಾಡ್ ವಿಜಯ್ ಹಜಾರೆ ಟ್ರೋಫಿಯ ಒಂದೇ ಸೀಸನ್ನಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ವಿರಾಟ್ ಕೊಹ್ಲಿ, ಪೃಥ್ವಿ ಶಾ ಮತ್ತು ದೇವದತ್ ಪಡಿಕ್ಕಲ್ ಅವರ ದಾಖಲೆಗಳನ್ನು ಸರಿಗಟ್ಟಿದ್ದಾರೆ. 2009/10 ಸೀಸನ್ನಲ್ಲಿ ಕೊಹ್ಲಿ 4 ಶತಕ ಸಿಡಿಸಿ ದಾಖಲೆ ಬರೆದಿದ್ದರು. ಆ ಬಳಿಕ 2020/21 ರ ಸೀಸನ್ನಲ್ಲಿ ಪೃಥ್ವಿ ಶಾ ಮತ್ತು ದೇವದತ್ ಪಡಿಕ್ಕಲ್ ನಾಲ್ಕು ಸೆಂಚುರಿ ಬಾರಿಸಿದ್ದರು. ಇದೀಗ ಲೀಗ್ ಹಂತದ ಐದು ಪಂದ್ಯಗಳಲ್ಲಿ 4 ಶತಕ ಸಿಡಿಸಿ ರುತುರಾಜ್ ಗಾಯಕ್ವಾಡ್ ಕೂಡ ದೇಶೀಯ ಶತಕ ಸರದಾರರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಇನ್ನು ಈ ಬಾರಿ ರುತುರಾಜ್ ಗಾಯಕ್ವಾಡ್ ಒಟ್ಟು 19 ಸಿಕ್ಸರ್ ಮತ್ತು 51 ಬೌಂಡರಿಗಳನ್ನು ಬಾರಿಸಿರುವುದು ವಿಶೇಷ. ಕಳೆದ ಸೀಸನ್ ಐಪಿಎಲ್ನಲ್ಲಿ 634 ರನ್ ಬಾರಿಸಿದ್ದ ರುತುರಾಜ್ ಆರೆಂಜ್ ಕ್ಯಾಪ್ ವಿನ್ನರ್ ಆಗಿದ್ದರು. ಅಷ್ಟೇ ಅಲ್ಲದೆ ಸಿಎಸ್ಕೆ ತಂಡವು ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಇದೀಗ ದೇಶೀಯ ಟೂರ್ನಿಯಲ್ಲಿ ಕೇವಲ 5 ಪಂದ್ಯಗಳಿಂದ 603 ರನ್ ಬಾರಿಸುವ ಟೀಮ್ ಇಂಡಿಯಾ ಏಕದಿನ ತಂಡದಲ್ಲಿ ಅವಕಾಶವನ್ನು ಎದುರು ನೋಡುತ್ತಿದ್ದಾರೆ.




