ವಿಜಯ ಹಝಾರೆ ಟೂರ್ನಿಯ ಕ್ವಾರ್ಟರ್ ಫೈನಲ್ ವೇಳಾಪಟ್ಟಿ ಪ್ರಕಟ
Vijay Hazare Trophy 2026: ಈ ಬಾರಿಯ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದ 32 ತಂಡಗಳಲ್ಲಿ 24 ಟೀಮ್ ಗಳು ಹೊರಬಿದ್ದಿವೆ. ಇನ್ನುಳಿದ ಕರ್ನಾಟಕ, ದೆಹಲಿ, ಸೌರಾಷ್ಟ್ರ, ಮುಂಬೈ, ವಿದರ್ಭ, ಉತ್ತರ ಪ್ರದೇಶ, ಪಂಜಾಬ್ ಮತ್ತು ಮಧ್ಯಪ್ರದೇಶ್ ತಂಡಗಳು ಕ್ವಾರ್ಟರ್ ಫೈನಲ್ಗೆ ಪ್ರವೇಶಿಸಿದೆ. ಈ 8 ತಂಡಗಳ ನಡುವೆ ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯಲಿದ್ದು, ಇದರಲ್ಲಿ ಗೆಲ್ಲುವ 4 ತಂಡಗಳು ಸೆಮಿ ಫೈನಲ್ಗೆ ಪ್ರವೇಶಿಸಲಿದೆ.
Updated on: Jan 11, 2026 | 7:55 AM

ವಿಜಯ ಹಝಾರೆ ಟೂರ್ನಿಯ ಮೊದಲ ಸುತ್ತಿನ ಪಂದ್ಯಗಳು ಮುಗಿದಿವೆ. 32 ತಂಡಗಳ ನಡುವಣ ಕದನದಲ್ಲಿ ದ್ವಿತೀಯ ಸುತ್ತಿಗೆ ಅರ್ಹತೆ ಪಡೆದಿರುವುದು 8 ತಂಡಗಳು. ಈ ಎಂಟು ತಂಡಗಳ ನಡುವೆ ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯಲಿವೆ. ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿವೆ...

ಜನವರಿ 12 ರಂದು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆಯಲಿರುವ ಮೊದಲ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ಮತ್ತು ಮುಂಬೈ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಬೆಳಿಗ್ಗೆ 9 ಗಂಟೆಯಿಂದ ಶುರುವಾಗಲಿದೆ.

ಜನವರಿ 12 ರಂದೇ ನಡೆಯಲಿರುವ ಎರಡನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಉತ್ತರ ಪ್ರದೇಶ ಮತ್ತು ಸೌರಾಷ್ಟ್ರ ತಂಡಗಳು ಮುಖಾಮುಖಿಯಾಗಲಿದೆ. ಬೆಳಿಗ್ಗೆ 9 ಗಂಟೆಗೆ ಆರಂಭವಾಗಲಿರುವ ಈ ಮ್ಯಾಚ್ ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ನಲ್ಲಿ ಎರಡನೇ ಮೈದಾನದಲ್ಲಿ ನಡೆಯಲಿದೆ.

ಮೂರನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಮತ್ತು ಮಧ್ಯಪ್ರದೇಶ್ ತಂಡಗಳು ಮುಖಾಮುಖಿಯಾಗಲಿದೆ. ಜನವರಿ 13 ರಂದು ನಡೆಯಲಿರುವ ಈ ಪಂದ್ಯಕ್ಕೂ ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನ ಆತಿಥ್ಯವಹಿಸಲಿದೆ. ಇನ್ನು ಈ ಪಂದ್ಯ ಸಹ ಬೆಳಿಗ್ಗೆ 9 ಗಂಟೆಯಿಂದ ಆರಂಭವಾಗಲಿದೆ.

ಜನವರಿ 13 ರಂದೇ ನಡೆಯಲಿರುವ ನಾಲ್ಕನೇ ಕ್ವಾರ್ಟರ್ ಫೈನಲ್ ಮ್ಯಾಚ್ ನಲ್ಲಿ ದೆಹಲಿ ಮತ್ತು ವಿದರ್ಭ ತಂಡಗಳು ಕಣಕ್ಕಿಳಿಯಲಿವೆ. ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ನ ಎರಡನೇ ಮೈದಾನದಲ್ಲಿ ಜರುಗಲಿರುವ ಈ ಪಂದ್ಯ ಕೂಡ ಬೆಳಿಗ್ಗೆ 9 ಗಂಟೆಯಿಂದ ಆರಂಭವಾಗಲಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



