AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs RCB: ಏಷ್ಯಾದಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ವಿರಾಟ್ ಕೊಹ್ಲಿ

Virat Kohli Creates History: ಗುಜರಾತ್ ಟೈಟಾನ್ಸ್ ವಿರುದ್ಧದ ಐಪಿಎಲ್ 2026 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ. ಏಷ್ಯಾದ ನೆಲದಲ್ಲಿ 12,000ಕ್ಕೂ ಹೆಚ್ಚು ಟಿ20 ರನ್ ಪೂರೈಸಿದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 28 ರನ್‌ಗಳ ಇನ್ನಿಂಗ್ಸ್‌ನಲ್ಲಿ ಈ ಮೈಲಿಗಲ್ಲು ತಲುಪಿದ್ದು, ಈ ಮಹತ್ವದ ಸಾಧನೆಯ ಮೂಲಕ ಕೊಹ್ಲಿ ಟಿ20 ಕ್ರಿಕೆಟ್ ಇತಿಹಾಸದಲ್ಲಿ ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on: Apr 30, 2026 | 9:44 PM

Share
ಗುಜರಾತ್ ಟೈಟಾನ್ಸ್ ಹಾಗೂ ಆರ್​ಸಿಬಿ ನಡುವೆ ನಡೆದ ಐಪಿಎಲ್ 2026 ರ 42ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ಪರ ಮಾಜಿ ನಾಯಕ ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡಿದರು, ಆದರೆ ಕೇವಲ 13 ಎಸೆತಗಳಲ್ಲಿ 28 ರನ್ ಗಳಿಸಿ ಔಟಾದರು. ಆದಾಗ್ಯೂ, ಈ ಪಂದ್ಯದಲ್ಲಿ ಕೊಹ್ಲಿ ಯಾವುದೇ ಬ್ಯಾಟ್ಸ್‌ಮನ್ ಮುರಿಯಲು ಅತ್ಯಂತ ಕಷ್ಟಕರವಾದ ಮಹತ್ವದ ದಾಖಲೆಯೊಂದನ್ನು ನಿರ್ಮಿಸಿದರು.

1 / 5
ಗುಜರಾತ್ ವಿರುದ್ಧದ ಈ ಪಂದ್ಯದಲ್ಲಿ 28 ರನ್​ಗಳ ಇನ್ನಿಂಗ್ಸ್ ಆಡಿದ ಕೊಹ್ಲಿ ಏಷ್ಯಾದ ನೆಲದಲ್ಲಿ 12,000 ಕ್ಕೂ ಹೆಚ್ಚು ಟಿ20 ರನ್ ಕಲೆಹಾಕಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಏಷ್ಯಾದಲ್ಲಿ 340 ಇನ್ನಿಂಗ್ಸ್‌ಗಳನ್ನಾಡಿರುವ ವಿರಾಟ್ ಕೊಹ್ಲಿ 12,012 ಟಿ20 ರನ್ ಗಳಿಸಿದ್ದಾರೆ.

2 / 5
ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಕ್ಕಪಕ್ಕ ಪ್ರಸ್ತುತ ಯಾವ ಬ್ಯಾಟ್ಸ್​ಮನ್ ಕೂಡ ಇಲ್ಲ. ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್ ಏಷ್ಯಾದಲ್ಲಿ 10,252 ಟಿ20 ರನ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ 10,023 ರನ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

3 / 5
ಒಟ್ಟಾರೆಯಾಗಿ ವಿರಾಟ್ ಕೊಹ್ಲಿ 422 ಟಿ20 ಪಂದ್ಯಗಳಲ್ಲಿ 13,894 ರನ್ ಗಳಿಸಿದ್ದಾರೆ. ಇದರಲ್ಲಿ ಒಂಬತ್ತು ಶತಕಗಳು ಮತ್ತು 108 ಅರ್ಧಶತಕಗಳು ಸೇರಿವೆ. ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ 450 ಸಿಕ್ಸರ್‌ಗಳು ಮತ್ತು 1,250 ಕ್ಕೂ ಹೆಚ್ಚು ಬೌಂಡರಿಗಳನ್ನು ಬಾರಿಸಿದ್ದಾರೆ.

4 / 5
ವಿರಾಟ್ ಕೊಹ್ಲಿ ಪ್ರಸ್ತುತ ಐಪಿಎಲ್ ಆವೃತ್ತಿಯಲ್ಲಿ ಆರ್‌ಸಿಬಿ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಇದುವರೆಗೆ ಆಡಿರುವ ಒಂಬತ್ತು ಪಂದ್ಯಗಳಲ್ಲಿ 54 ಕ್ಕಿಂತ ಹೆಚ್ಚು ಬ್ಯಾಟಿಂಗ್ ಸರಾಸರಿಯೊಂದಿಗೆ 379 ರನ್ ಗಳಿಸಿದ್ದಾರೆ. ಇದರಲ್ಲಿ ಮೂರು ಐವತ್ತು ಪ್ಲಸ್ ಸ್ಕೋರ್‌ಗಳು ಸೇರಿವೆ.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಹುಡುಗಿಗಾಗಿ ಟವರ್ ಏರಿದ್ದ ಯವಕನನ್ನ ಮನವೊಲಿಸಿ ಕೆಳಗಿಳಿಸಿದ್ಹೇಗೆ?

ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು

ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ

ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು

ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ

ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ

ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?

ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ

1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ

ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ