- Kannada News Photo gallery Cricket photos Kannada News - Virat Kohli 250 Million Instagram Followers Record
Virat Kohli: ಮೈದಾನಕ್ಕಿಳಿಯದೇ ದಾಖಲೆ ಬರೆದ ಕಿಂಗ್ ಕೊಹ್ಲಿ
Virat Kohli's Record: ಈ ಪಟ್ಟಿಯಲ್ಲಿ ಖ್ಯಾತ ಫುಟ್ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಅಗ್ರಸ್ಥಾನದಲ್ಲಿದ್ದು, ಪೋರ್ಚುಗಲ್ ಆಟಗಾರ ಒಟ್ಟು 585 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.
Updated on: May 25, 2023 | 11:30 PM

IPL 2023: ಐಪಿಎಲ್ ಸೀಸನ್ 16 ನಲ್ಲಿ ಹಲವು ದಾಖಲೆ ಬರೆದಿದ್ದ ವಿರಾಟ್ ಕೊಹ್ಲಿ ಇದೀಗ ಮೈದಾನಕ್ಕಿಳಿಯದೇ ಹೊಸ ದಾಖಲೆ ನಿರ್ಮಿಸಿದ್ದಾರೆ.

ಹೌದು, ಇನ್ಸ್ಟಾಗ್ರಾಮ್ನಲ್ಲಿ ಬರೋಬ್ಬರಿ 250 ಮಿಲಿಯನ್ ಫಾಲೋವರ್ಸ್ ಸಂಪಾದಿಸುವ ಮೂಲಕ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ. ಅಂದರೆ ಇನ್ಸ್ಟಾಗ್ರಾಮ್ನಲ್ಲಿ 25 ಕೋಟಿ ಫಾಲೋವರ್ಸ್ ಹೊಂದಿರುವ ಏಕೈಕ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ.

ಅಷ್ಟೇ ಅಲ್ಲದೆ ಈ ಸಾಧನೆ ಮಾಡಿದ ಏಷ್ಯಾದ ಮೊದಲ ವ್ಯಕ್ತಿ ಎಂಬ ದಾಖಲೆಯನ್ನೂ ಕೂಡ ಕಿಂಗ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಇದಲ್ಲದೆ ಇನ್ಸ್ಟಾಗ್ರಾಮ್ನಲ್ಲಿ ಅತೀ ಹೆಚ್ಚು ಫಾಲೋವರ್ಸ್ ಹೊಂದಿರುವ ವಿಶ್ವದ ಮೂರನೇ ಕ್ರೀಡಾಪಟು ಎಂಬ ಹಿರಿಮೆಗೂ ಕೊಹ್ಲಿ ಪಾತ್ರರಾಗಿದ್ದಾರೆ.

ಈ ಪಟ್ಟಿಯಲ್ಲಿ ಖ್ಯಾತ ಫುಟ್ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಅಗ್ರಸ್ಥಾನದಲ್ಲಿದ್ದು, ಪೋರ್ಚುಗಲ್ ಆಟಗಾರ ಒಟ್ಟು 585 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.

ಇನ್ನು ಅರ್ಜೆಂಟೀನಾದ ಶ್ರೇಷ್ಠ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ 462 ಮಿಲಿಯನ್ ಫಾಲೋವರ್ಸ್ನೊಂದಿಗೆ ಎರಡನೇ ಸ್ಥಾನ ಅಲಂಕರಿಸಿದ್ದಾರೆ.

ಇದೀಗ 250 ಮಿಲಿಯನ್ ಫಾಲೋವರ್ಸ್ಗಳ ಮೂಲಕ ವಿರಾಟ್ ಕೊಹ್ಲಿ ಮೂರನೇ ಸ್ಥಾನಕ್ಕೇರಿದ್ದು, ಈ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಎನಿಸಿಕೊಂಡಿದ್ದಾರೆ.
