AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಒಂದೇ ದಿನಾಂಕದಂದು 4 ಶತಕ ಸಿಡಿಸಿದ ವಿರಾಟ್ ಕೊಹ್ಲಿ

Virat Kohli Century: ಈ ಬಿರುಸಿನ ಶತಕದ ಬಳಿಕ ಆಕ್ರಮಣಕಾರಿ ಬ್ಯಾಟಿಂಗ್​ನತ್ತ ಮುಖ ಮಾಡಿದ ಕಿಂಗ್ ಕೊಹ್ಲಿ ಲಂಕಾ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕೇವಲ 106 ಎಸೆತಗಳಲ್ಲಿ ಕೊಹ್ಲಿಯ ಸ್ಕೋರ್ 150 ರ ಗಡಿದಾಟಿತು

TV9 Web
| Edited By: |

Updated on: Jan 15, 2023 | 8:27 PM

Share
ತಿರುವನಂತಪುರದ ಗ್ರೀನ್​ ಫೀಲ್ಡ್​ ಮೈದಾನದಲ್ಲಿ ನಡೆದ ಶ್ರೀಲಂಕಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದರು. ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಕಿಂಗ್ ಕೊಹ್ಲಿ 85 ಎಸೆತಗಳಲ್ಲಿ ಶತಕ ಪೂರೈಸಿದ್ದರು.

1 / 6
ಈ ಬಿರುಸಿನ ಶತಕದ ಬಳಿಕ ಆಕ್ರಮಣಕಾರಿ ಬ್ಯಾಟಿಂಗ್​ನತ್ತ ಮುಖ ಮಾಡಿದ ಕಿಂಗ್ ಕೊಹ್ಲಿ ಲಂಕಾ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕೇವಲ 106 ಎಸೆತಗಳಲ್ಲಿ ಕೊಹ್ಲಿಯ ಸ್ಕೋರ್ 150 ರ ಗಡಿದಾಟಿತು. ಅಂತಿಮವಾಗಿ 110 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್​ ಹಾಗೂ 13 ಫೋರ್​ನೊಂದಿಗೆ ವಿರಾಟ್ ಕೊಹ್ಲಿ ಅಜೇಯ 166 ರನ್​ ಬಾರಿಸಿದರು.

2 / 6
ವಿಶೇಷ ಎಂದರೆ ಇದು ವಿರಾಟ್ ಕೊಹ್ಲಿಯ 74ನೇ ಅಂತಾರಾಷ್ಟ್ರೀಯ ಶತಕವಾಗಿದೆ. ಈ ಸೆಂಚುರಿಗಳಲ್ಲಿ 4 ಶತಕಗಳು ಒಂದೇ ದಿನಾಂಕದಂದೇ ಮೂಡಿಬಂದಿರುವುದು ಮತ್ತೊಂದು ವಿಶೇಷ.

3 / 6
ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಜನವರಿ 15 ರಂದು ಮೂರು ಶತಕಗಳನ್ನು ಬಾರಿಸಿದ್ದರು.  2017ರಲ್ಲಿ ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಕಿಂಗ್​ ಕೊಹ್ಲಿ 122 ರನ್ ಬಾರಿಸಿ ಅಬ್ಬರಿಸಿದ್ದರು.

4 / 6
2018ರ ಜನವರಿ 15 ರಂದು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 153 ರನ್ ಗಳಿಸಿದ್ದರು. ಹಾಗೆಯೇ 2019ರಲ್ಲಿಯೂ ಜನವರಿ 15ರಂದು ಆಸ್ಟ್ರೇಲಿಯಾ ವಿರುದ್ಧ 104 ರನ್​ಗಳ ಶತಕ ಬಾರಿಸುವ ಮೂಲಕ ಕೊಹ್ಲಿ ಹೊಸ ವರ್ಷವನ್ನು ಆರಂಭಿಸಿದ್ದರು.

5 / 6
ಇದೀಗ ನಾಲ್ಕನೇ ಬಾರಿಗೆ ಜನವರಿ 15 ರಂದು ಶತಕ ಸಿಡಿಸಿ ವಿರಾಟ್ ಕೊಹ್ಲಿ 74ನೇ ಸೆಂಚುರಿಯನ್ನು ಪೂರೈಸಿದ್ದಾರೆ. ಅಷ್ಟೇ ಅಲ್ಲದೆ ಈ ಶತಕದೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಬಾರಿಸಿದ ವಿಶ್ವದ 5ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿ ಸದ್ಯ 12754 ರನ್​ ಬಾರಿಸಿ 5ನೇ ಸ್ಥಾನದಲ್ಲಿದ್ದರೆ, 18426 ರನ್ ಕಲೆಹಾಕಿರುವ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ