Virat Kohli: ವಿಂಡೀಸ್ ವಿರುದ್ಧ ಕಣಕ್ಕಿಳಿದು ವಿಶೇಷ ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ

India vs West Indies: ಪೋರ್ಟ್​ ಆಫ್ ಸ್ಪೇನ್​ನ ಕ್ವೀನ್ಸ್ ಪಾರ್ಕ್​ ಓವಲ್​ ಮೈದಾನದಲ್ಲಿ ಭಾರತ-ವೆಸ್ಟ್ ಇಂಡೀಸ್ ನಡುವಣ 2ನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ಬೌಲಿಂಗ್ ಆಯ್ದುಕೊಂಡಿದ್ದು, ಅದರಂತೆ ಟೀಮ್ ಇಂಡಿಯಾ ಮೊದಲು ಬ್ಯಾಟ್ ಮಾಡಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Jul 20, 2023 | 7:27 PM

ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ದಿಗ್ಗಜರ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

1 / 7
ವೆಸ್ಟ್ ಇಂಡೀಸ್ ವಿರುದ್ಧ ಕಣಕ್ಕಿಳಿಯುವುದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 500 ಪಂದ್ಯಗಳನ್ನಾಡಿದ ವಿಶೇಷ ಸಾಧಕರ ಪಟ್ಟಿಗೆ ವಿರಾಟ್ ಕೊಹ್ಲಿ ಕೂಡ ಸೇರ್ಪಡೆಯಾಗಿದ್ದಾರೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಪರ ಈ ಸಾಧನೆ ಮಾಡಿದ್ದು ಕೇವಲ ಮೂವರು ಆಟಗಾರರು ಮಾತ್ರ.

2 / 7
ಟೀಮ್ ಇಂಡಿಯಾ ಪರ ಒಟ್ಟು 664 ಪಂದ್ಯಗಳನ್ನಾಡಿರುವ ಸಚಿನ್ ತೆಂಡೂಲ್ಕರ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

3 / 7
ಇನ್ನು 538 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಮಹೇಂದ್ರ ಸಿಂಗ್ ಧೋನಿ ಈ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ.

4 / 7
ಹಾಗೆಯೇ ಒಟ್ಟು 509 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ರಾಹುಲ್ ದ್ರಾವಿಡ್ ಈ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ.

5 / 7
ಇದೀಗ 500 ಅಂತಾರಾಷ್ಟ್ರೀಯ ಪಂದ್ಯಗಳನ್ನು ಪೂರೈಸುವ ಮೂಲಕ ಈ ಸಾಧನೆ ಮಾಡಿದ 4ನೇ ಭಾರತೀಯ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.

6 / 7

7 / 7
Follow us