
ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ದಿಗ್ಗಜರ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

ವೆಸ್ಟ್ ಇಂಡೀಸ್ ವಿರುದ್ಧ ಕಣಕ್ಕಿಳಿಯುವುದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 500 ಪಂದ್ಯಗಳನ್ನಾಡಿದ ವಿಶೇಷ ಸಾಧಕರ ಪಟ್ಟಿಗೆ ವಿರಾಟ್ ಕೊಹ್ಲಿ ಕೂಡ ಸೇರ್ಪಡೆಯಾಗಿದ್ದಾರೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಪರ ಈ ಸಾಧನೆ ಮಾಡಿದ್ದು ಕೇವಲ ಮೂವರು ಆಟಗಾರರು ಮಾತ್ರ.

ಟೀಮ್ ಇಂಡಿಯಾ ಪರ ಒಟ್ಟು 664 ಪಂದ್ಯಗಳನ್ನಾಡಿರುವ ಸಚಿನ್ ತೆಂಡೂಲ್ಕರ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಇನ್ನು 538 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಮಹೇಂದ್ರ ಸಿಂಗ್ ಧೋನಿ ಈ ಪಟ್ಟಿಯಲ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ.

ಹಾಗೆಯೇ ಒಟ್ಟು 509 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ರಾಹುಲ್ ದ್ರಾವಿಡ್ ಈ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ.

ಇದೀಗ 500 ಅಂತಾರಾಷ್ಟ್ರೀಯ ಪಂದ್ಯಗಳನ್ನು ಪೂರೈಸುವ ಮೂಲಕ ಈ ಸಾಧನೆ ಮಾಡಿದ 4ನೇ ಭಾರತೀಯ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.

India vs West Indies: ಪೋರ್ಟ್ ಆಫ್ ಸ್ಪೇನ್ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ಭಾರತ-ವೆಸ್ಟ್ ಇಂಡೀಸ್ ನಡುವಣ 2ನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ಬೌಲಿಂಗ್ ಆಯ್ದುಕೊಂಡಿದ್ದು, ಅದರಂತೆ ಟೀಮ್ ಇಂಡಿಯಾ ಮೊದಲು ಬ್ಯಾಟ್ ಮಾಡಲಿದೆ.