- TV9 Kannada Photo gallery Cricket photos Virat Kohli and Ellyse Perry becomes leading run getter in IPL and WPL history
ಅಗ್ರಸ್ಥಾನದಲ್ಲಿ ವಿರಾಟ್ ಕೊಹ್ಲಿ ಹಾಗೂ ಎಲ್ಲಿಸ್ ಪೆರ್ರಿ
Virat Kohli - Ellyse Perry ಭಾರತೀಯ ಅಂಗಳದ ಎರಡು ಪ್ರಮುಖ ಫ್ರಾಂಚೈಸಿ ಟೂರ್ನಿಗಳೆಂದರೆ ಇಂಡಿಯನ್ ಪ್ರೀಮಿಯರ್ ಲೀಗ್ ಮತ್ತು ವುಮೆನ್ಸ್ ಪ್ರೀಮಿಯರ್ ಲೀಗ್. ಈ ಎರಡು ಲೀಗ್ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿರುವುದು RCB ಪ್ಲೇಯರ್ಸ್ ಎಂಬುದು ವಿಶೇಷ. ಇಲ್ಲಿ ಐಪಿಎಲ್ನಲ್ಲಿ ವಿರಾಟ್ ಕೊಹ್ಲಿ ಕಿಂಗ್ ಎನಿಸಿಕೊಂಡರೆ, ಡಬ್ಲ್ಯೂಪಿಎಲ್ನಲ್ಲಿ ಎಲ್ಲಿಸ್ ಪೆರ್ರಿ ಕ್ವೀನ್ ಎನಿಸಿಕೊಂಡಿದ್ದಾರೆ.
Updated on: Feb 26, 2025 | 9:04 AM

ಭಾರತೀಯ ಟಿ20 ಲೀಗ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದವರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯರ್ಸ್ ಅಗ್ರಸ್ಥಾನಕ್ಕೇರಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ವಿರಾಟ್ ಕೊಹ್ಲಿ ಈ ಹಿಂದೆಯೇ ಮೊದಲ ಸ್ಥಾನ ಅಲಂಕರಿಸಿದ್ದರೆ, ಎಲ್ಲಿಸ್ ಪೆರ್ರಿ ಇದೀಗ ವುಮೆನ್ಸ್ ಪ್ರೀಮಿಯರ್ ಲೀಗ್ನ ಟಾಪ್ ರನ್ ಸರದಾರಿಣಿ ಎನಿಸಿಕೊಂಡಿದ್ದಾರೆ.

ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಆರ್ಸಿಬಿ ಪರ 21 ಪಂದ್ಯಗಳನ್ನಾಡಿರುವ ಎಲ್ಲಿಸ್ ಪೆರ್ರಿ 64.23ರ ಸರಾಸರಿಯಲ್ಲಿ ಒಟ್ಟು 835 ರನ್ ಕಲೆಹಾಕಿದ್ದಾರೆ. ಈ ವೇಳೆ 7 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಇನ್ನು ಈ 21 ಇನಿಂಗ್ಸ್ಗಳಲ್ಲಿ 8 ಬಾರಿ ಅವರು ಅಜೇಯರಾಗಿದ್ದರು ಎಂಬುದು ವಿಶೇಷ.

ಇನ್ನು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕಳೆದ ಕೆಲ ವರ್ಷಗಳಿಂದ ವಿರಾಟ್ ಕೊಹ್ಲಿ ರನ್ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. RCB ಪರ 252 ಪಂದ್ಯಗಳಲ್ಲಿ 244 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 8 ಶತಕಗಳೊಂದಿಗೆ ಈವರೆಗೆ ಒಟ್ಟು 8004 ರನ್ ಕಲೆಹಾಕಿದ್ದಾರೆ.

ಈ ಮೂಲಕ ವಿರಾಟ್ ಕೊಹ್ಲಿ IPL ಇತಿಹಾಸದಲ್ಲೇ 8000 ಸಾವಿರ ರನ್ ಕಲೆಹಾಕಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇತ್ತ WPL ನಲ್ಲಿ 800 ರನ್ಗಳ ಗಡಿದಾಟಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಎಲ್ಲಿಸ್ ಪೆರ್ರಿ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಆರ್ಸಿಬಿ ಪ್ಲೇಯರ್ಸ್ ಭಾರತೀಯ ಲೀಗ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ವುಮೆನ್ಸ್ ಪ್ರೀಮಿಯರ್ ಲೀಗ್ನ ಮೊದಲ ಸುತ್ತಿನಲ್ಲಿ ಆರ್ಸಿಬಿ ತಂಡಕ್ಕೆ ಇನ್ನೂ 4 ಪಂದ್ಯಗಳು ಉಳಿದಿದ್ದು, ಈ ಮ್ಯಾಚ್ಗಳ ಮೂಲಕ 165 ರನ್ ಕಲೆಹಾಕಿದರೆ ಎಲ್ಲಿಸ್ ಪೆರ್ರಿ WPL ಇತಿಹಾಸದಲ್ಲಿ 1000 ರನ್ ಗಳಿಸಿದ ಮೊದಲ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಹೀಗಾಗಿ ಈ ಬಾರಿಯ WPL ನಲ್ಲಿ ಪೆರ್ರಿ ಕಡೆಯಿಂದ ಈ ಭರ್ಜರಿ ದಾಖಲೆಯನ್ನು ಸಹ ನಿರೀಕ್ಷಿಸಬಹುದು.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



