AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಹಗಹಿಸಿ ನಕ್ಕು ಎಲ್ಲಾ ವದಂತಿಗಳಿಗೆ ತೆರೆ ಎಳೆದ ಕೊಹ್ಲಿ, ಗಂಭೀರ್

Gambhir-Kohli Rift Rumors Dispelled:ಭಾರತ ಏಕದಿನ ತಂಡದಲ್ಲಿ ಗಂಭೀರ್-ಕೊಹ್ಲಿ ಭಿನ್ನಾಭಿಪ್ರಾಯದ ವದಂತಿಗಳು ಹರಡಿದ್ದವು. ಅಭ್ಯಾಸದಲ್ಲಿ ಅವರು ಪರಸ್ಪರ ಮಾತನಾಡದಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಆದರೆ, ಇಂಗ್ಲೆಂಡ್ ಪ್ರವಾಸದ ಅಂತ್ಯದಲ್ಲಿ ಟೀಂ ಇಂಡಿಯಾ ಲಂಡನ್‌ನಲ್ಲಿ ಭಾರತೀಯ ರಾಯಭಾರ ಕಚೇರಿಗೆ ಭೇಟಿ ನೀಡಿದಾಗ, ಗಂಭೀರ್ ಮತ್ತು ಕೊಹ್ಲಿ ನಗುತ್ತಾ ಮಾತನಾಡುತ್ತಿರುವುದು ಕಂಡುಬಂದಿದೆ. ಈ ಚಿತ್ರಗಳು ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದು, ತಂಡದಲ್ಲಿ ಸಾಮರಸ್ಯವಿದೆ ಎಂಬುದನ್ನು ಸ್ಪಷ್ಟಪಡಿಸಿವೆ.

ಪೃಥ್ವಿಶಂಕರ
|

Updated on: Jul 19, 2026 | 5:00 PM

Share
ಭಾರತ ಏಕದಿನ ತಂಡದಲ್ಲಿ ಏನೂ ಸರಿ ಇಲ್ಲ ಎಂಬ ಗಾಳಿ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿದೆ. ಅದರಲ್ಲೂ ತಂಡದ ಹೆಡ್ ಕೋಚ್ ಗೌತಮ್ ಗಂಭೀರ್ ಹಾಗೂ ವಿರಾಟ್ ಕೊಹ್ಲಿ ನಡುವೆ ಬಿರುಕು ಮೂಡಿದೆ ಎಂಬ ವದಂತಿ ಹಬ್ಬಿತ್ತು. ಹಾಗೆಯೇ ರೋಹಿತ್ ಶರ್ಮಾರನ್ನು ಏಕದಿನ ತಂಡದಿಂದ ಕೈಬಿಡಲು ಗಂಭೀರ್ ಮಸಲತ್ತು ಮಾಡಿದ್ದಾರೆ ಎಂತಲೂ ಹೇಳಲಾಗುತ್ತಿತ್ತು(PC-PTI).

1 / 5
ತಂಡದ ಅಭ್ಯಾಸದ ವೇಳೆ ಕೊಹ್ಲಿ ಹಾಗೂ ಗಂಭೀರ್ ನಡುವೆ ಯಾವುದೇ ಮಾತುಕತೆ ನಡೆಯುತ್ತಿಲ್ಲ ಎಂದು ವರದಿಯಾಗಿತ್ತು. ಅಲ್ಲದೆ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯಕ್ಕೂ ಮುಂಚಿನ ಅಭ್ಯಾಸದ ಸಮಯದಲ್ಲಿ ಇವರಿಬ್ಬರು ಪರಸ್ಪರ ಮಾತನಾಡದೇ ಇರುವುದು ಕ್ಯಾಮರಾ ಕಣ್ಣುಗಳಲ್ಲಿ ಸೆರೆಯಾಗಿತ್ತು. ಇದನ್ನು ಗಮನಿಸಿದವರು ಇಬ್ಬರು ನಡುವೆ ಏನೂ ಸರಿಯಿಲ್ಲ ಎಂಬ ಅಭಿಪ್ರಾಯಕ್ಕೆ ಬಂದಿದ್ದರು(PC-PTI).

2 / 5
ಆದರೀಗ ಆ ಎಲ್ಲಾ ಊಹಾಪೋಹಗಳಿಗೆ ಇವರಿಬ್ಬರು ತೆರೆ ಎಳೆದಿದ್ದಾರೆ. ವಾಸ್ತವವಾಗಿ ಟೀಂ ಇಂಡಿಯಾದ ಇಂಗ್ಲೆಂಡ್‌ ಪ್ರವಾಸ ಮುಗಿಯುವುದಕ್ಕೂ ಮುನ್ನ ಇಡೀ ತಂಡ ಲಂಡನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಭೇಟಿ ನೀಡಿತ್ತು. ಲಂಡನ್‌ನಲ್ಲಿರುವ ಭಾರತೀಯ ರಾಯಭಾರಿ ಕುಮಾರನ್ ಪೆರಿಯಸಾಮಿ ಅವರು ಭಾರತೀಯ ತಂಡವನ್ನು ಸ್ವಾಗತಿಸಿ ಗೌರವಿಸಿದರು(PC-BCCI).

3 / 5
ಈ ಸಮಯದಲ್ಲಿ ಅತ್ಯಂತ ಆಶ್ಚರ್ಯಕರ ಘಟನೆಯೆಂದರೆ ಗೌತಮ್ ಗಂಭೀರ್ ಮತ್ತು ವಿರಾಟ್ ಕೊಹ್ಲಿ ನಡುವಿನ ಸಂಭಾಷಣೆ. ಇಬ್ಬರೂ ಗಹಗಹಿಸಿ ನಗುತ್ತಾ ಮಾತನಾಡುತ್ತಿರುವುದು ಕಂಡುಬಂದಿತು. ಹಾಗೆಯೇ ರೋಹಿತ್ ಮತ್ತು ಗಿಲ್ ಕೂಡ ಅವರೊಂದಿಗೆ ಕುಳಿತಿರುವುದು ಕಂಡುಬಂದಿತು. ಗಂಭೀರ್ ಮತ್ತು ವಿರಾಟ್ ಅವರ ಈ ಫೋಟೋ ಈಗ ಅವರ ನಡುವೆ ಎಲ್ಲವೂ ಚೆನ್ನಾಗಿದೆ ಎಂಬುದನ್ನು ಸೂಚಿಸುತ್ತಿದೆ(PC-BCCI).

4 / 5
ಭಾರತೀಯ ರಾಯಭಾರ ಕಚೇರಿಯಲ್ಲಿ ಟೀಂ ಇಂಡಿಯಾ ಆಟಗಾರರೊಂದಿಗೆ ಗ್ರೂಪ್ ಫೋಟೋ ತೆಗೆದುಕೊಳ್ಳಲಾಯಿತು. ಯುಕೆಯಲ್ಲಿರುವ ಭಾರತೀಯ ರಾಯಭಾರಿ ಕುಮಾರನ್ ಪೆರಿಯಸಾಮಿ ಅವರೊಂದಿಗೆ ಟೀಂ ಇಂಡಿಯಾ ಪೋಸ್ ನೀಡಿತು. ಈ ಸಮಾರಂಭದಲ್ಲಿ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಕೂಡ ಭಾಗಿಯಾಗಿದ್ದರು(PC-BCCI).

5 / 5
Follow Us
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​

ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು

ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ

‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು

ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ

ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್

2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ

ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ