AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದಿಂದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಗೇಟ್ ಪಾಸ್?

Virat Kohli - Rohit Sharma: ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಈಗಾಗಲೇ ಟಿ20 ಹಾಗೂ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದಾಗ್ಯೂ ಇಬ್ಬರು ಆಟಗಾರರು 2027 ರ ಏಕದಿನ ವಿಶ್ವಕಪ್​ವರೆಗೆ ಟೀಮ್ ಇಂಡಿಯಾದಲ್ಲಿ ಮುಂದುವರೆಯಲು ನಿರ್ಧರಿಸಿದ್ದಾರೆ. ಇದರ ನಡುವೆ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ಬೀಳ್ಕೊಡಲು ನೀಡಲು ಕ್ರಿಕೆಟ್ ಆಸ್ಟ್ರೇಲಿಯಾ ಪ್ಲ್ಯಾನ್ ರೂಪಿಸಿದೆ.

ಝಾಹಿರ್ ಯೂಸುಫ್
|

Updated on:Aug 07, 2025 | 2:41 PM

Share
ಟಿ20 ಹಾಗೂ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಶೀಘ್ರದಲ್ಲೇ ಏಕದಿನ ಕ್ರಿಕೆಟ್​ಗೂ ವಿದಾಯ ಹೇಳಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಮುಂಬರುವ ಏಕದಿನ ವಿಶ್ವಕಪ್​ಗಾಗಿ ಇಬ್ಬರನ್ನು ಪರಿಗಣಿಸುವುದಿಲ್ಲ. ಹೀಗಾಗಿ ಶೀಘ್ರದಲ್ಲೇ ಏಕದಿನ ಕ್ರಿಕೆಟ್ ಭವಿಷ್ಯವನ್ನು ನಿರ್ಧರಿಸುವಂತೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.

1 / 5
ಕೆಲ ತಿಂಗಳ ಹಿಂದೆಯಷ್ಟೇ ಟೆಸ್ಟ್ ಕ್ರಿಕೆಟ್​ಗೆ ದಿಢೀರ್ ನಿವೃತ್ತಿ ಘೋಷಿಸಿದ್ದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ 2027ರ ಏಕದಿನ ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ಆಶಾಭಾವನೆ ವ್ಯಕ್ತಪಡಿಸಿದ್ದರು. ಆದರೆ ಈ ವೇಳೆಗೆ ರೋಹಿತ್ ಶರ್ಮಾ ವಯಸ್ಸು 40 ಆಗಿರಲಿದೆ. ಇನ್ನು ವಿರಾಟ್ ಕೊಹ್ಲಿಯ ವಯಸ್ಸು 38 ಕ್ಕೆ ತಲುಪಲಿದೆ. ಹೀಗಾಗಿ ಏಕದಿನ ವಿಶ್ವಕಪ್​ಗೆ ಹಿರಿಯ ಆಟಗಾರರನ್ನು ಆಯ್ಕೆ ಮಾಡುವ ಸಾಧ್ಯತೆಯಿಲ್ಲ.

2 / 5
ಇದೇ ಕಾರಣದಿಂದಾಗಿ ಶೀಘ್ರದಲ್ಲೇ ಏಕದಿನ ಕ್ರಿಕೆಟ್ ಭವಿಷ್ಯ ನಿರ್ಧರಿಸುವಂತೆ ಹಿಟ್​ಮ್ಯಾನ್ ಹಾಗೂ ಕಿಂಗ್ ಕೊಹ್ಲಿಗೆ ಸೂಚನೆ ನೀಡಲಾಗಿದೆ. ಅಲ್ಲದೆ 2027ರ ಏಕದಿನ ವಿಶ್ವಕಪ್​ಗಾಗಿ ಈಗಲೇ ಯುವ ಪಡೆಯನ್ನು ಒಳಗೊಂಡಿರುವ ಬಲಿಷ್ಠ ತಂಡವೊಂದನ್ನು ರೂಪಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸುತ್ತಿದೆ. ಈ ಹಿನ್ನಲೆಯಲ್ಲಿ ಇದೇ ವರ್ಷ ಏಕದಿನ ಕ್ರಿಕೆಟ್​ನಿಂದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಗೇಟ್ ಪಾಸ್ ಸಿಗುವ ಸಾಧ್ಯತೆಯಿದೆ.

3 / 5
ಅತ್ತ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಅಂತ್ಯಗೊಳ್ಳುವುದನ್ನು ಪುಷ್ಠೀಕರಿಸುವಂತೆ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ದಿಗ್ಗಜರಿಬ್ಬರಿಗೆ ವಿಶೇಷ ಬೀಳ್ಕೊಡುಗೆ ನೀಡಲು ಪ್ಲ್ಯಾನ್ ರೂಪಿಸಿರುವ ಮಾಹಿತಿ ಕೂಡ ಹೊರಬಿದ್ದಿದೆ. ಅಂದರೆ ಅಕ್ಟೋಬರ್​ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಏಕದಿನ ಸರಣಿಯ ವೇಳೆ ಕೊಹ್ಲಿ ಹಾಗೂ ರೋಹಿತ್ ಶರ್ಮಾಗೆ ವಿಶೇಷ ಗೌರವ ಸಲ್ಲಿಸಲು ಕ್ರಿಕೆಟ್ ಆಸ್ಟ್ರೇಲಿಯಾ ಚಿಂತಿಸಿದೆ ಸಿಇಒ ಟಾಡ್ ಗ್ರೀನ್‌ಬರ್ಗ್ ತಿಳಿಸಿದ್ದಾರೆ. ಹೀಗಾಗಿ ಈ ಸರಣಿಯು ದಿಗ್ಗಜರಿಬ್ಬರ ಕೊನೆಯ ಇಂಟರ್​ನ್ಯಾಷನಲ್ ಮ್ಯಾಚ್ ಆಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

4 / 5
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್ ಪರ್ತ್​ನಲ್ಲಿ ನಡೆದರೆ, ಅಕ್ಟೋಬರ್ 23 ರಂದು ಅಡಿಲೇಡ್​ನಲ್ಲಿ 2ನೇ ಪಂದ್ಯ ಜರುಗಲಿದೆ. ಹಾಗೆಯೇ ಅಕ್ಟೋಬರ್ 25 ರಂದು ನಡೆಯುವ ಕೊನೆಯ ಏಕದಿನ ಪಂದ್ಯಕ್ಕೆ ಸಿಡ್ನಿ ಕ್ರಿಕೆಟ್ ಗ್ರೌಂಡ್ ಆತಿಥ್ಯವಹಿಸಲಿದೆ. ಈ ಸರಣಿಯೊಂದಿಗೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಅಂತಾರಾಷ್ಟ್ರೀಯ ಕೆರಿಯರ್ ಕೊನೆಗೊಂಡರೂ ಅಚ್ಚರಿಪಡಬೇಕಿಲ್ಲ.

5 / 5

Published On - 2:09 pm, Thu, 7 August 25

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ

ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!

ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ

ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌

ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?

ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ

ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?

ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ