Virat Kohli: ಭರ್ಜರಿ ಸೆಂಚುರಿ ಸಿಡಿಸಿ ವಿಶ್ವ ದಾಖಲೆ ಬರೆದ ಕಿಂಗ್ ಕೊಹ್ಲಿ

| Updated By: ಝಾಹಿರ್ ಯೂಸುಫ್

Updated on: Sep 11, 2023 | 7:11 PM

Virat Kohli Records: ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಿಂಗ್ ಕೊಹ್ಲಿ 84 ಎಸೆತಗಳಲ್ಲಿ ಶತಕ ಪೂರೈಸಿದರು. ಇನ್ನು ಸೆಂಚುರಿ ಬಳಿಕ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ ವಿರಾಟ್ 94 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 122 ರನ್​ ಬಾರಿಸಿದರು.

1 / 6
ಕೊಲಂಬೊದಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಸಿಡಿಲಬ್ಬರದ ಸೆಂಚುರಿ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ (Virat Kohli) ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

2 / 6
ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕಿಂಗ್ ಕೊಹ್ಲಿ 84 ಎಸೆತಗಳಲ್ಲಿ ಶತಕ ಪೂರೈಸಿದರು. ಇನ್ನು ಸೆಂಚುರಿ ಬಳಿಕ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ ವಿರಾಟ್ 94 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 122 ರನ್​ ಬಾರಿಸಿದರು.

3 / 6
ಈ 122 ರನ್​ಗಳೊಂದಿಗೆ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್​ನಲ್ಲಿ 13 ಸಾವಿರ ರನ್ ಪೂರೈಸಿದ್ದಾರೆ. ಅದು ಕೂಡ ಅತೀ ವೇಗವಾಗಿ ಎಂಬುದು ವಿಶೇಷ. ಅಂದರೆ ಏಕದಿನ ಕ್ರಿಕೆಟ್​ನಲ್ಲಿ ಅತೀ ಕಡಿಮೆ ಇನಿಂಗ್ಸ್​ನಲ್ಲಿ 13 ಸಾವಿರ ರನ್ ಕಲೆಹಾಕಿದ ವಿಶ್ವ ದಾಖಲೆ ಕಿಂಗ್ ಕೊಹ್ಲಿಯ ಪಾಲಾಗಿದೆ.

4 / 6
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಸಚಿನ್ 321 ಏಕದಿನ ಇನಿಂಗ್ಸ್​ಗಳ ಮೂಲಕ 13 ಸಾವಿರ ರನ್ ಕಲೆಹಾಕಿದ್ದರು.

5 / 6
ಇದೀಗ ವಿರಾಟ್ ಕೊಹ್ಲಿ ಕೇವಲ 267 ಏಕದಿನ ಇನಿಂಗ್ಸ್​ಗಳ ಮೂಲಕ 13 ಸಾವಿರ ರನ್ ಪೂರೈಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅಲ್ಲದೆ ಏಕದಿನ ಕ್ರಿಕೆಟ್​ನಲ್ಲಿ 47 ಶತಕ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲೂ ಸಚಿನ್ ತೆಂಡೂಲ್ಕರ್ (49 ಶತಕ) ಅಗ್ರಸ್ಥಾನದಲ್ಲಿದ್ದಾರೆ.

6 / 6
ಏಕದಿನ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 8000, 9000, 10000, 11000, 12000 ರನ್ ಕಲೆಹಾಕಿದ ವಿಶ್ವ ದಾಖಲೆ ಹೊಂದಿದ್ದ ಕಿಂಗ್ ಕೊಹ್ಲಿ ಇದೀಗ 13000 ರನ್​ಗಳನ್ನು ಅದೇ ವೇಗದಲ್ಲಿ ಪೂರೈಸಿರುವುದು ವಿಶೇಷ.

Published On - 6:59 pm, Mon, 11 September 23