
ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ ಅಬ್ಬರಿಸಿದ್ದಾರೆ. ಸುದೀರ್ಘ ಸಮಯದ ನಂತರ ಫಾರ್ಮ್‌ಗೆ ಮರಳಿರುವ ಕೊಹ್ಲಿಯನ್ನು ತಡೆಯುವುದು ವಿಶ್ವದ ಯಾವುದೇ ಬೌಲರ್‌ಗೆ ಸಾಧ್ಯವಾಗುತ್ತಿಲ್ಲ. ಇಂಗ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಅರ್ಧಶತಕ ಸಿಡಿಸುವ ಮೂಲಕ ಕೊಹ್ಲಿ ಇತಿಹಾಸ ನಿರ್ಮಿಸಿದ್ದಾರೆ.

ಇದರೊಂದಿಗೆ 15ನೇ ಓವರ್‌ನ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸಿ ಇಂಗ್ಲೆಂಡ್ ವಿರುದ್ಧ 43 ರನ್ ಗಳಿಸಿದ ಕೊಹ್ಲಿ, ಈ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 4 ಸಾವಿರ ರನ್ ಪೂರೈಸಿದರು.

ಈಗ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 4000 ರನ್ ಪೂರೈಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಕೊಹ್ಲಿ 114 ಅಂತಾರಾಷ್ಟ್ರೀಯ ಟಿ20 ಪಂದ್ಯಗಳ 106 ಇನ್ನಿಂಗ್ಸ್‌ಗಳಲ್ಲಿ 3 ಸಾವಿರದ 958 ರನ್ ಗಳಿಸಿದ್ದರು. ಈ ಅವಧಿಯಲ್ಲಿ ಅವರು ಒಂದು ಶತಕ ಮತ್ತು 36 ಅರ್ಧ ಶತಕಗಳನ್ನು ಬಾರಿಸಿದ್ದಾರೆ.

ಈ ಟೂರ್ನಿಯಲ್ಲಿ ಕೊಹ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿರುವ ವಿರಾಟ್, ಸೆಮಿಫೈನಲ್‌ಗೂ ಮುನ್ನ ಗ್ರೂಪ್ 2ರಲ್ಲಿ ಆಡಿದ 5 ಪಂದ್ಯಗಳಲ್ಲಿ 3 ಅರ್ಧಶತಕಗಳನ್ನು ಗಳಿಸಿದ್ದರು ಮತ್ತು ಎಲ್ಲಾ ಮೂರು ಪಂದ್ಯಗಳಲ್ಲಿಯೂ ಅಜೇಯರಾಗಿದ್ದರು.

ಕೊಹ್ಲಿ ಪಾಕಿಸ್ತಾನ ವಿರುದ್ಧ ಅಜೇಯ 82, ನೆದರ್ಲೆಂಡ್ಸ್ ವಿರುದ್ಧ 62 ಮತ್ತು ಬಾಂಗ್ಲಾದೇಶ ವಿರುದ್ಧ ಔಟಾಗದೆ 64 ರನ್ ಗಳಿಸಿದ್ದರು.